Friday, 13th December 2024

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಕ್ರಿಕೆಟರ್‌ ಬೂಮ್ರಾ-ನಿರೂಪಕಿ ಸಂಜನಾ ಗಣೇಶನ್

ನವದೆಹಲಿ: ಭಾರತ ತಂಡದ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಹಾಗೂ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರು ಸೋಮ ವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಆಪ್ತ ಸ್ನೇಹಿತರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು, ಕೋವಿಡ್ ಕಾರಣದಿಂದಾಗಿ ಕೆಲವೇ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಫೋಟೋಗಳನ್ನು ಐಪಿಎಲ್​ ತಂಡ ಮುಂಬೈ ಇಂಡಿಯನ್ಸ್​ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಹಲವು ದಿನಗಳಿಂದ ಈ ಜೋಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡು ತ್ತಿದ್ದವು.

28 ವರ್ಷದ ಸಂಜನಾ ಗಣೇಶನ್​ ಪುಣೆಯವರು. ಮಾಡೆಲಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಸಂಜನಾ 2014ರಲ್ಲಿ ಫೆಮಿನಾ ಮಿಸ್​ ಇಂಡಿಯಾ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್​ ಕೂಡ ಆಗಿದ್ದಾರೆ. 2016ರಲ್ಲಿ ಸ್ಟಾರ್​ಸ್ಪೋರ್ಟ್ಸ್​ಗೆ ಕ್ರೀಡಾ ನಿರೂಪಕಿಯಾಗಿ ಸೇರ್ಪಡೆಯಾಗಿದ್ದಾರೆ. 2014ರಲ್ಲಿ ಎಂಟಿವಿಯ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದರು. 2016ರ ಈಚೆಗೆ ಕ್ರೀಡೆಗೆ ಸಂಬಂಧಪಟ್ಟ ಶೋ, ಸಂದರ್ಶನಗಳಲ್ಲಿ ಸಕ್ರಿಯವಾಗಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್ ಲೈಕ್‌ ಮಾಡಿ.

https://www.facebook.com/Vishwavanidaily