Thursday, 3rd October 2024

ಹಾಲಿ ಚಾಂಪಿಯನ್‌ ಮುಂಬೈ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲೇ ?

ಚೆನ್ನೈ: ಮಂಗಳವಾರ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿತ್ತು. ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಡೆಲ್ಲಿ ಸಜ್ಜಾಗಿದೆ.

ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ 5 ಬಾರಿ ಟ್ರೋಫಿ ಗೆದ್ದಿರುವ ಬಲಿಷ್ಠ ತಂಡವಾಗಿದೆ. ಉಭಯ ತಂಡಗಳು ಇದುವರೆಗೂ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಮುಂಬೈ ಇಂಡಿಯನ್ಸ್ 16 ಪಂದ್ಯಗಳನ್ನು ಗೆದ್ದಿದ್ದು ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳಲ್ಲಿ ಗೆಲುವು ಕಂಡಿದೆ.

ಯುವ ಕ್ರಿಕೆಟಿಗ ರಿಷಬ್ ಪಂತ್ ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ನೆಟ್ ರನ್ ರೇಟ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ 3ನೇ ಸ್ಥಾನದಲ್ಲಿದ್ದರೆ ಮುಂಬೈ ಇಂಡಿಯನ್ಸ್ 4ನೇ ಸ್ಥಾನದಲ್ಲಿದೆ.