Saturday, 7th September 2024

ಚೆನ್ನೈ ತಂಡವನ್ನು ಮಣಿಸುವುದೇ ಪಂಜಾಬ್‌ ಕಿಂಗ್ಸ್‌

ಮುಂಬೈ: ಐಪಿಎಲ್ ನ 8ನೇ ಪಂದ್ಯದಲ್ಲಿ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ‌ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು ಎರಡು ತಂಡದ ನಾಯಕರು ವಿಕೆಟ್ ಕೀಪರ್ ಗಳೇ ಆಗಿದ್ದಾರೆ.

ಪಂಜಾಬ್ ಕಿಂಗ್ಸ್ ಈ ಬಾರಿ ಐಪಿಎಲ್ ನಲ್ಲಿ ತನ್ನ ಮೊದಲನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 4ರನ್ ಗಳಿಂದ ರೋಚಕ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ನಾಯಕ ಕೆ.ಎಲ್. ರಾಹುಲ್ ಹಾಗೂ ದೀಪಕ್ ಹೂಡಾ ಅಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.

 

ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಮಿಸ್ಟರ್ ಐಪಿಎಲ್ ಸುರೇಶ್ ರೈನಾ ಅವರ ಬಿರುಸಿನ ಬ್ಯಾಟಿಂಗ್ ನಡುವೆಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡಿತ್ತು. ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಬಲಿಷ್ಠ ಬ್ಯಾಟ್ಸ್ ಮನ್ ಗಳನ್ನು ಒಳಗೊಂಡಿದೆ.

Leave a Reply

Your email address will not be published. Required fields are marked *

error: Content is protected !!