Celebrity Womens Kabbadi League: ʼಸಿಡಬ್ಲ್ಯುಕೆಎಲ್ʼ ಲೋಗೊ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್
Celebrity Womens Kabbadi League: ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್‌ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ ʼಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್ʼ ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಅಡಿಯಿಟ್ಟಿದ್ದಾರೆ.


ಬೆಂಗಳೂರು: ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್‌ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ ʼಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್ʼ (Celebrity Womens Kabbadi League) ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಅಡಿಯಿಟ್ಟಿದ್ದಾರೆ. ʼCWKLʼ ಎಂಬ ಹೆಸರಿನ ಈ ಕಬ್ಬಡಿ ಟೂರ್ನಿಯ ಲೋಗೊವನ್ನು ಇತ್ತೀಚಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಅನಾವರಣ ಮಾಡಿ ಟೂರ್ನಿ ಯಶಸ್ವಿಯಾಗಲೆಂದು ಹಾರೈಸಿದರು. ಈ ಟೂರ್ನಿಯ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನವರಸನ್ ಹೆಚ್ಚಿನ ಮಾಹಿತಿ ನೀಡಿದರು.
ಕಬಡ್ಡಿ ನಮ್ಮ ದೇಸಿ ಕ್ರೀಡೆ. ಈ ಕ್ರೀಡೆಯನ್ನು ಮಹಿಳೆಯರು ಆಡುವುದು ಕಡಿಮೆ. ಆ ನಿಟ್ಟಿನಲ್ಲೇ ಈ ʼಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್ʼ (ಸಿಡಬ್ಲ್ಯುಕೆಎಲ್) ಆಯೋಜಿಸಿದ್ದೇನೆ. ಲೋಗೊವನ್ನು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಈ ಟೂರ್ನಿಯಲ್ಲಿ 10 ತಂಡಗಳಿರುತ್ತದೆ. ಸುಮಾರು 120 ಕ್ಕೂ ಅಧಿಕ ನಟಿಯರು ಪಾಲ್ಗೊಳಲಿದ್ದಾರೆ. ಹತ್ತು ತಂಡಗಳಲ್ಲಿ ಈಗಾಗಲೇ ಎಂಟು ತಂಡಗಳಿಗೆ ಮಾಲೀಕರು ದೊರಕಿದ್ದಾರೆ. ಏಪ್ರಿಲ್‌ನಲ್ಲಿ ಟೂರ್ನಿ ನಡೆಯಲಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ನಿರ್ಮಾಪಕರು ಈ ಟೂರ್ನಿಗೆ ಆಗಮಿಸಿ ಸ್ಪರ್ಧಿಗಳಿಗೆ ಉತ್ತೇಜನ ನೀಡಲಿದ್ದಾರೆ. ಸಾಯಿ ಗೋಲ್ಡ್ ಪ್ಯಾಲೇಸ್‌ನ ಶರವಣ ಅವರು, ನಿರ್ಮಾಪಕರಾದ ಚೇತನ್ ಗೌಡ, ಸುರೇಶ್ ಗೌಡ ಹಾಗೂ ರಮೇಶ್ ರೆಡ್ಡಿ ಮುಂತಾದವರು ನಮ್ಮ ಜತೆಗಿರುವುದು ತುಂಬಾ ಸಂತೋಷವಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಯಿ ಗೋಲ್ಡ್ ಪ್ಯಾಲೆಸ್ ಮಾಲೀಕ ಹಾಗೂ ವಿಧಾನ ಪರಿಷತ್ ಸದಸ್ಯ ಶರವಣ, ಈ ಟೂರ್ನಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಹೆಣ್ಣುಮಕ್ಕಳಿಗೆ ನಮ್ಮ ಸಾಯಿಗೋಲ್ಡ್ ಪ್ಯಾಲೆಸ್‌ನ ಕಡೆಯಿಂದ ಹತ್ತು ಸಾವಿರ ರೂಪಾಯಿಯ ಗಿಫ್ಟ್ ವೋಚರ್ ನೀಡುವುದಾಗಿ ಹೇಳಿದರು.
ಈ ಸುದ್ದಿಯನ್ನೂ ಓದಿ | Pinafore Dress Fashion 2025: ಮುಂಬರುವ ಸೀಸನ್‌ಗೆ ಈಗಲೇ ಲಗ್ಗೆ ಇಟ್ಟ ಪೈನಾಪೋರ್ ಔಟ್‌ಫಿಟ್ಸ್!
ಹತ್ತು ತಂಡಗಳಲ್ಲಿ ಒಂದು ತಂಡದ ಮಾಲೀಕರಾದ ʼವಾಮನʼ ಚಿತ್ರದ ನಿರ್ಮಾಪಕ ಚೇತನ್ ಗೌಡ ಅವರು ನವರಸನ್ ಅವರಿಗೆ ಹತ್ತು ಲಕ್ಷದ ಚೆಕ್ ನೀಡಿದರು. ಕಬ್ಬಡಿ ಆಟದ ಕುರಿತು ಕೋಚರ್ ಶೃದಿಯಾ ರಮಣ್ ಗೌಡ ಮಾಹಿತಿ ನೀಡಿದರು. ನಟಿಯರಾದ ಸಿಂಧೂ ಲೋಕನಾಥ್, ಅಪೂರ್ವ ಹಾಗೂ ಕಾರುಣ್ಯರಾಮ್ ಮುಂತಾದ ನಟಿಯರು ʼCWKSʼ ಯಶಸ್ವಿಯಾಗಲೆಂದು ಹಾರೈಸಿದರು.