Monday, 25th November 2024

Champions Trophy 2025: ಹೈಬ್ರಿಡ್ ಮಾಡೆಲ್‌ಗೆ ಒಪ್ಪಿದ ಪಾಕಿಸ್ತಾನ

ಮುಂಬಯಿ: ಕಳೆದೊಂದು ವರ್ಷದಿಂದ ನಡೆಯುತ್ತಿದ್ದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ(Champions Trophy 2025) ಆತಿಥ್ಯ ವಿವಾದ ಬಹುತೇಕ ಅಂತ್ಯವಾಗುವ ಲಕ್ಷಣ ತೋರುತ್ತಿದೆ. ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದ ಕಾರಣದಿಂದ ಕೂಟವನ್ನು ಹೈಬ್ರೀಡ್‌ ಮಾದರಿಯಲ್ಲಿ ನಡೆಸಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(Pakistan Cricket Board) ಸಮ್ಮತಿ ಸೂಚಿಸಿದೆ ಎನ್ನಲಾಗಿದೆ.

ಟೂರ್ನಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಲ್ಲೇ ನಡೆಸಲು ಪಿಸಿಬಿ ಹಲವು ತಂತ್ರಗಳನ್ನು ಅನುಸರಿಸಿ ಭಾರತವನ್ನು ಕರೆಸಿಕೊಳ್ಳುವ ಪ್ರಯುತ್ನ ನಡೆಸಿತ್ತು. ಆದರೆ ಪಾಕಿಸ್ತಾನದ ತಂತ್ರ ಫಲಿಸದ ಮತ್ತು ಆಯೋಜನೆಯನ್ನು ಕಳೆದುಕೊಳ್ಳುವ ಭೀತಿಯಿಂದ ಇದೀಗ ಅಂತಿಮವಾಗಿ ಹೈಬ್ರೀಡ್‌ ಮಾದರಿಯಲ್ಲಿ ಪಂದ್ಯವಾವಳಿಯನ್ನು ನಡೆಸಲು ಪಾಕ್‌ ಕ್ರಿಕೆಟ್‌ ಮಂಡಳಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ. ಅದರಂತೆ ಭಾರತ ತನ್ನ ಎಲ್ಲ ಪಂದ್ಯವನ್ನು ತಟಸ್ಥ ಸ್ಥಳವಾದ ಯುಎಇಯಲ್ಲಿ ಆಡಲಿದೆ ಎನ್ನಲಾಗಿದೆ. ಭಾರತ ತನ್ನ ಪಂದ್ಯಗಳನ್ನು ಶಾರ್ಜಾ ಅಥವಾ ದುಬೈನಲ್ಲಿ ಆಡುವ ಸಾಧ್ಯತೆ ಇದೆ. ನವೆಂಬರ್‌ 11 ಅಥವಾ 12ರಂದು ಐಸಿಸಿ ಟೂರ್ನಿಯ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎನ್ನಲಾಗಿದೆ. ಚಾಂಪಿಯನ್ಸ್ ಟ್ರೋಫಿ ಕೂಟವು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಟೂರ್ನಿಗೆ ಅರ್ಹತೆ ಪಡೆದ ತಂಡಗಳಾಗಿವೆ.

ಇದನ್ನೂ ಓದಿ Women’s Champions Trophy: ಮಹಿಳೆಯರಿಗೂ ಐಸಿಸಿ ಚಾಂಪಿಯನ್ಸ್‌ ಟ್ರೋಫಿ

2014ರಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನೆರೆಯ ರಾಷ್ಟ್ರದೊಂದಿಗೆ ಯಾವುದೇ ಸ್ನೇಹಪರ ರೀತಿಯಲ್ಲಿ ಸಂಬಂಧ ಹೊಂದಿಲ್ಲ. ಶತ್ರು ದೇಶದ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪುಲ್ವಾಮಾ ಮತ್ತು ಉರಿ ದಾಳಿಯ ನಂತರ ಎರಡೂ ದೇಶಗಳ ಸಂಬಂಧ ಹದಗೆಟ್ಟಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಯು ಎನ್​ಡಿಎ ಜತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದರೂ ಕೂಡ ಈ ಸರ್ಕಾರದ ವಿದೇಶಾಂಗ ನೀತಿ ಬದಲಾಗುವ ಸಾಧ್ಯತೆಗಳು ಇಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲು ಅನುಮತಿ ನೀಡುವ ಸಾಧ್ಯತೆಗಳಿಲ್ಲ.

ಕಳೆದ ವರ್ಷ ಪಾಕ್​ ಆತಿಥ್ಯದಲ್ಲಿಯೇ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ತಂಡವು ಪಾಕ್​ಗೆ ಪ್ರಯಾಣಿಸಲು ನಿರಾಕರಿಸಿದ ಕಾರಣ, ಟೂರ್ನಿಯನ್ನು ಹೈಬ್ರಿಡ್(champions trophy hybrid model) ಮಾದರಿಯಲ್ಲಿ ಆಯೋಜಿಸಲಾಯಿತ್ತು. ಕೇವಲ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಭಾರತ ಎಲ್ಲ ಪಂದ್ಯಗಳನ್ನು ಲಂಕಾದಲ್ಲಿ ಆಡಿತ್ತು. ಇದೀಗ ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳನ್ನು ಯುಎಇಯಲ್ಲಿ ಆಡಲಿದೆ.