Champions Trophy: ಗೆಳೆಯ ಕ್ರಿಸ್ ಗೇಲ್ ದಾಖಲೆ ಮುರಿಯಲು ಕೊಹ್ಲಿ ಸಜ್ಜು
Virat Kohli: ಗೇಲ್ 2002-2013ರ ಅವಧಿಯಲ್ಲಿ 17 ಪಂದ್ಯಗಳನ್ನಾಡಿ 791 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 13 ಪಂದ್ಯಗಳಿಂದ 529* ರನ್ ಬಾರಿಸಿ ಸದ್ಯ 11ನೇ ಸ್ಥಾನದಲ್ಲಿದ್ದಾರೆ. ಭಾರತೀಯ ದಾಖಲೆ ಸದ್ಯ ಮಾಜಿ ಬ್ಯಾಟರ್ ಶಿಖರ್ ಧವನ್ ಹೆಸರಿನಲ್ಲಿದೆ. ಧವನ್ 10 ಪಂದ್ಯಗಳಿಂದ 701 ಗಳಿಸಿದ್ದಾರೆ.


ದುಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(Virat Kohli) ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ(Champions Trophy) ವಿಶೇಷ ಮೈಲುಗಲ್ಲು ನಿರ್ಮಿಸುವ ಸನಿಹದಲ್ಲಿದ್ದಾರೆ. ಟೂರ್ನಿಯಲ್ಲಿ ಒಟ್ಟಾರೆ 263 ಕಲೆ ಹಾಕಿದರೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯಧಿಕ ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಸದ್ಯ ದಾಖಲೆ ವಿಂಡೀಸ್‌ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ.
ಗೇಲ್ 2002-2013ರ ಅವಧಿಯಲ್ಲಿ 17 ಪಂದ್ಯಗಳನ್ನಾಡಿ 791 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 13 ಪಂದ್ಯಗಳಿಂದ 529* ರನ್ ಬಾರಿಸಿ ಸದ್ಯ 11ನೇ ಸ್ಥಾನದಲ್ಲಿದ್ದಾರೆ. ಭಾರತೀಯ ದಾಖಲೆ ಸದ್ಯ ಮಾಜಿ ಬ್ಯಾಟರ್ ಶಿಖರ್ ಧವನ್ ಹೆಸರಿನಲ್ಲಿದೆ. ಧವನ್ 10 ಪಂದ್ಯಗಳಿಂದ 701 ಗಳಿಸಿದ್ದಾರೆ. ಕೊಹ್ಲಿ 2017ರ ಆವೃತ್ತಿಯ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅಜೇಯ 96 ರನ್ ಬಾರಿಸಿದ್ದರು.
ಕೊನೆಯ ಟೂರ್ನಿ?
ವಿರಾಟ್ ಕೊಹ್ಲಿ ಪಾಲಿಗೆ ಇದು ಕೊನೆಯ ಐಸಿಸಿ ಕೂಟವಾಗುವ ಸಾಧ್ಯತೆ ಇದೆ. ಮುಂದಿನ ವರ್ಷ ಫೆಬ್ರವರಿ, ಮಾರ್ಚ್‌ನಲ್ಲಿ ಭಾರತದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈಗಾಗಲೇ ಈ ಮಾದರಿಯಲ್ಲಿ ಕೊಹ್ಲಿ ಆಡುತ್ತಿಲ್ಲ. ಏಕದಿನ ವಿಶ್ವಕಪ್ 2027ರಲ್ಲಿ ನಡೆಯಲಿದೆ. ಅಲ್ಲಿಯ ತನಕ ಬ್ಯಾಟಿಂಗ್ ಫಾರ್ಮ್ ನಿಭಾಯಿಸುವುದು ಅನುಮಾನ ಎನ್ನುವಂತಿದೆ. ಒಂದೊಮ್ಮೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ ಇನ್ನೊಂದು ವಿಶ್ವಕಪ್ ಆಡುವುದು ಅಂದಾಜಿಸಲಾಗಿದೆ.
Raw mode 🔛
— BCCI (@BCCI) February 17, 2025
Presenting 𝙎𝙤𝙪𝙣𝙙𝙨 𝙤𝙛 𝙏𝙧𝙖𝙞𝙣𝙞𝙣𝙜 🔊 from #TeamIndia's first practice session of #ChampionsTrophy 2025 in Dubai 😎
WATCH 🎥🔽
ಭಾರತ ತಂಡಕ್ಕೆ ಬಿಸಿಸಿಐ ಕೆಲವೊಂದು ಕಠಿಣ ನಿಯಮಗಳನ್ನು ವಿಧಿಸಿದೆ. ಆದರೆ ವಿರಾಟ್ ಕೊಹ್ಲಿಗೆ ಮಾತ್ರ ಈ ನಿಯಮ ಅನ್ವಯ ಆಗುವಂತೆ ಕಾಣುತ್ತಿಲ್ಲ. ನಿಯಮದ ಪ್ರಕಾರ ಯಾವುದೇ ಆಟಗಾರರೂ ಪರ್ಸನಲ್ ಕೋಚ್, ಭದ್ರತಾ ಸಿಬ್ಬಂದಿಗಳು, ಸಹಾಯಕರನ್ನು ಕರೆದೊಯ್ಯುವಂತಿಲ್ಲ ಆದರೆ ದುಬೈನಲ್ಲಿ ಕೊಹ್ಲಿಗೆ ವಿಶೇಷ ಆಹಾರ ವ್ಯವಸ್ಥೆ ಮಾಡಲಾಗಿದ್ದು ಕೊಹ್ಲಿಗೆ ಈ ನಿಯಮ ಅನ್ವಯ ಆಗುದಿಲ್ಲವೇ ಎಂದು ಪ್ರಶ್ನಿಸುವಂತಾಗಿದೆ.
ಇದನ್ನೂ ಓದಿ ICC Champions Trophy: 'ಮಿನಿ ವಿಶ್ವಕಪ್' ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮಾನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್.