ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MI vs CSK: ಟಾಸ್‌ ಗೆದ್ದ ಚೆನ್ನೈ; ಮುಂಬೈಗೆ ಬ್ಯಾಟಿಂಗ್‌ ಆಹ್ವಾನ

ಮಂಡಿ ನೋವಿನಿಂದ ಬಳಲುತ್ತಿರುವ ಧೋನಿ ಈ ಬಾರಿ ಇಂಪ್ಯಾಕ್ಟ್‌ ಆಟಗಾರನಾಗಿ ಆಡಲಿದ್ದಾರಾ ಎಂಬ ಅನುಮಾನವಿತ್ತು. ಆದರೆ ಧೋನಿ ಪೂರ್ಣ ಪ್ರಮಾಣದ ಕೀಪರ್‌ ಆಗಿ ಕಣಕ್ಕಿಳಿದರು. ಆರ್‌ ಅಶ್ವಿನ್‌ 10 ವರ್ಷದ ಬಳಿಕ ಚೆನ್ನೈ ತಂಡದ ಪರ ಆಡಲಿಳಿದರು.

ಟಾಸ್‌ ಗೆದ್ದ ಚೆನ್ನೈ; ಮುಂಬೈಗೆ ಬ್ಯಾಟಿಂಗ್‌ ಆಹ್ವಾನ

Profile Abhilash BC Mar 23, 2025 7:11 PM

ಚೆನ್ನೈ: ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾನುವಾರದ 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಟಾಸ್‌ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಋತುರಾಜ್‌ ಗಾಯಕ್ವಾಡ್‌ ಬೌಲಿಂಗ್‌ ಆಯ್ದುಕೊಂಡು ಎದುರಾಳಿ ತಂಡಕ್ಕೆ ಬ್ಯಾಟಿಂಗ್‌ ಆಹ್ವಾನ ನೀಡಿದರು. ಮುಂಬೈ ಕಾಯಂ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಪ್ರಮುಖ ವೇಗಿ ಬೂಮ್ರಾರ ಅನುಪಸ್ಥಿತಿಯಲ್ಲಿ ಆಡಲಿಳಿದಿದೆ. ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್‌ ತಂಡಕ್ಕೆ ಮೊದಲ ಪಂದ್ಯದಲ್ಲೇ ಯಶಸ್ಸು ತಂದುಕೊಡಬಹುದೇ ಎಂದು ಕಾದು ನೋಡಬೇಕಿದೆ.

ಕಳೆದ ಆವೃತ್ತಿಯಲ್ಲಿ ಮುಂಬೈ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿತ್ತು. ಇತ್ತೀಚೆಗಷ್ಟೇ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಜೋಶ್‌ನಲ್ಲಿರುವ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮ ಮೇಲೂ ಹೆಚ್ಚಿನ ನಿರೀಕ್ಷೆ ಇಡಲಾಗಿದೆ.

ಚೆನ್ನೈನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಬ್ಯಾಟರ್‌ಗಳು ರನ್ ಗಳಿಸಲು ಸಾಕಷ್ಟು ಶ್ರಮವಹಿಸಬೇಕಾಗುತ್ತೆ. ಪಂದ್ಯ ಸಾಗಿದಂತೆ ಪಿಚ್ ನಿಧಾನವಾಗಿ ವರ್ತಿಸಲಿದೆ. ಹೀಗಾಗಿ ಈ ಪಂದ್ಯವನ್ನು ಲೋ ಸ್ಕೋರ್‌ ಎಂದು ನಿರೀಕ್ಷೆ ಮಾಡಬಹುದು. ಮಂಡಿ ನೋವಿನಿಂದ ಬಳಲುತ್ತಿರುವ ಧೋನಿ ಈ ಬಾರಿ ಇಂಪ್ಯಾಕ್ಟ್‌ ಆಟಗಾರನಾಗಿ ಆಡಲಿದ್ದಾರಾ ಎಂಬ ಅನುಮಾನವಿತ್ತು. ಆದರೆ ಧೋನಿ ಪೂರ್ಣ ಪ್ರಮಾಣದ ಕೀಪರ್‌ ಆಗಿ ಕಣಕ್ಕಿಳಿದರು.

ಮುಖಾಮುಖಿ

ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ಇದುವರೆಗೆ ಐಪಿಎಲ್‌ನಲ್ಲಿ 37 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಚೆನ್ನೈ 17 ಗೆಲುವು ಸಾಧಿಸಿದರೆ, ಮುಂಬೈ 20 ಗೆಲುವು ಸಾಧಿಸಿದೆ.

ಉಭಯ ತಂಡಗಳು

ಚೆನ್ನೈ ಸೂಪರ್‌ ಕಿಂಗ್ಸ್‌: ಋತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ದೀಪಕ್ ಹೂಡಾ, ಶಿವಂ ದುಬೆ, ರವೀಂದ್ರ ಜಡೇಜಾ, ಸ್ಯಾಮ್ ಕರನ್‌, ಎಂಎಸ್ ಧೋನಿ(ವಿ.ಕೀ), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ನಾಥನ್ ಎಲ್ಲಿಸ್, ಖಲೀಲ್ ಅಹ್ಮದ್.

ಮುಂಬಯಿ ಇಂಡಿಯನ್ಸ್‌: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್(ವಿ.ಕೀ), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ನಮನ್ ಧೀರ್, ರಾಬಿನ್ ಮಿಂಜ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಸತ್ಯನಾರಾಯಣ ರಾಜು.