ಮುಂಬಯಿ: ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸದ ಬಾರ್ಡರ್-ಗವಾಸ್ಕರ್ ಟೆಸ್ಟ್(Border Gavaskar Trophy) ಸರಣಿಯಲ್ಲಿ ಭಾರತ ತಂಡದ ಗೆಲುವಿಗೆ ನೋವನ್ನು ಲೆಕ್ಕಿಸದೆ ಚೆಂಡಿನೇಡು ತಿಂದಿದ್ದ ಚೇತೇಶ್ವರ್ ಪೂಜಾರ(Cheteshwar Pujara) ಈ ಬಾರಿಯ ಪ್ರವಾಸದಲ್ಲಿ ಅವಕಾಶ ಪಡೆಯಲು ವಿಫಲರಾಗಿದ್ದಾರೆ. ಇದೀಗ ಅವರು ಸ್ಟಾರ್ ಸ್ಪೋರ್ಟ್ಸ್ ಹಿಂದಿ(Star Sports Hindi) ಚಾನೆಲ್ನಲ್ಲಿ ಟೆಸ್ಟ್ ಸರಣಿಯ ಕಾಮೆಂಟರಿ ಮಾಡಲಿದ್ದಾರೆ.
2020-21ರ ಬಾರ್ಡರ್- ಗಾವಸ್ಕರ್ ಟ್ರೋಫಿ (Border Gavaskar Trophy) ಭಾರತದ ಪಾಲಿಗೆ ಅವಿಸ್ಮರಣೀಯ ಸರಣಿ. ಅಂದು ಆಸೀಸ್ ಬೌಲರ್ಗಳ ಬೆಂಕಿ ಎಸೆತಕ್ಕೆ ಚೇತೇಶ್ವರ ಪೂಜಾರ ತಿಂದ ಪೆಟ್ಟಿನ ನೋವು ಭಾರತೀಯರು ಮರೆಯಲು ಅಸಾಧ್ಯ. ಈ ಬಾರಿ ಅವರು ಬ್ಯಾಟ್ ಬದಲು ಮೈಕ್ ಹಿಡಿದು ಆಟಗಾರರ ಪ್ರದರ್ಶನವನ್ನು ವರ್ಣಿಸಲಿದ್ದಾರೆ. ಮೊದಲ ಬಾರಿಗೆ ಕಾಮೆಂಟ್ರಿ ಪ್ಯಾನಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಭಾರತ ತಂಡ 2018-19 ಮತ್ತು 2020-21ರ ಕೊನೇ ಎರಡು ಆಸ್ಟ್ರೆಲಿಯಾ ಪ್ರವಾಸದ ಟೆಸ್ಟ್ ಸರಣಿಗಳಲ್ಲಿ 2-1 ಅಂತರದಿಂದ ಜಯಿಸಿತ್ತು. ಅಲ್ಲದೆ 2016-17ರಿಂದ ಬಾರ್ಡರ್-ಗಾವಸ್ಕರ್ ಟ್ರೋಫಿ ಭಾರತದ ಕೈಯಲ್ಲೇ ಇದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿ ಫೈನಲ್ಗೇರಲು ಆಸೀಸ್ನಲ್ಲಿ 4-0ಯಿಂದ ಸರಣಿ ಗೆಲ್ಲುವ ಸವಾಲು ಕೂಡ ಭಾರತದ ಮುಂದಿದೆ.
35 ವರ್ಷದ ಪೂಜಾರ ಕೊನೆಯ ಬಾರಿ ಭಾರತ ಪರ ಆಡಿದ್ದು ಜುಲೈ 2023 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ. ಕಳಪೆ ಬ್ಯಾಟಿಂಗ್ ಫಾರ್ಮ್ನಿಂದಾಗಿ ಅವರು ತಂಡದಿಂದ ಹೊರಬಿದ್ದಿದ್ದರು. ಪೂಜಾರ ಎರಡೂ ಇನಿಂಗ್ಸ್ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಅದರಲ್ಲೂ ಮೊದಲ ಇನಿಂಗ್ಸ್ನಲ್ಲಿ ವಿಕೆಟ್ಗೆ ಬಂದ ಚೆಂಡನ್ನು ಬ್ಯಾಟ್ ಎತ್ತಿ ಹಿಡಿದು ಕ್ಲೀನ್ ಬೌಲ್ಡ್ ಆಗಿದ್ದರು. ಪೂಜಾರ ಈ ರೀತಿ ವಿಕೆಟ್ ಒಪ್ಪಿಸಿದ್ದನ್ನು ಕಂಡು ಅನೇಕ ಮಾಜಿ ಕ್ರಿಕೆಟಿಗರು ಟೀಕೆ ವ್ಯಕ್ತಪಡಿಸಿದ್ದರು. ಪೂಜಾರ ಇದುವರೆಗೆ ಭಾರತ ಪರ 103 ಟೆಸ್ಟ್ ಪಂದ್ಯ ಆಡಿ 7195 ರನ್ ಬಾರಿಸಿದ್ದಾರೆ. ಇದರಲ್ಲಿ 19 ಶತಕ ಮತ್ತು 35 ಅರ್ಧಶತಕ ಒಳಗೊಂಡಿದೆ.
ಇದನ್ನೂ ಓದಿ IND vs AUS: ಜಸ್ಪ್ರೀತ್ ಬುಮ್ರಾರಲ್ಲಿ ನಾಯಕತ್ವದ ಗುಣ ಇದೆಯಾ? ಸುರೇಶ್ ರೈನಾ ಹೇಳಿದ್ದಿದು!
ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅತ್ಯಧಿಕ ದ್ವಿಶತಕ ಬಾರಿಸಿದ ಮೊದಲ ಭಾರತೀಯ ಎಂಬ ದಾಖಲೆ ಚೇತೇಶ್ವರ ಹೆಸರಿನಲ್ಲಿದೆ. ಅವರು ಒಟ್ಟು 17* ದ್ವಿಶತಕ ಬಾರಿಸಿದ್ದಾರೆ. 61 ಶತಕಗಳು ಹಾಗೂ 78 ಅರ್ಧಶತಕಗಳು ಕೂಡ ಬಾರಿಸಿದ್ದಾರೆ. ಇನ್ನು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 20 ಸಾವಿರ ರನ್ ಪೂರೈಸಿದ ಭಾರತದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಪೂಜಾರ ಅವರದ್ದಾಗಿದೆ.