Thursday, 12th December 2024

ಗೌತಮ್ ಗಂಭೀರ್‌ಗೆ ಕರೋನಾ ಸೋಂಕು

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಗಂಭೀರ್ ಅವರು, ತಾವು ಕರೋನಾ ಸೋಂಕಿತ ನಾಗಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೋವಿಡ್ ಟೆಸ್ಟ್ ಮಾಡಿಸಿದಾಗ ಕರೋನಾ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಕಳೆದ ಕೆಲವು ದಿನಗಳಲ್ಲಿ ತನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ಪರೀಕ್ಷೆಗೆ ಒಳಗಾಗುವಂತೆ ಕೇಳಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಗೌತಮ್ ಗಂಭೀರ್ ಅವರನ್ನು ಹೊಸ ಐಪಿಎಲ್ ತಂಡವಾದ ಲಕ್ನೋದ ಮೆಂಟರ್ ಆಗಿ ಆಯ್ಕೆ ಮಾಡಲಾಗಿದೆ. ಈ ವೇಳೆ, ಕೋವಿಡ್ ಸೋಂಕಿಗೆ ತುತ್ತಾಗಿರುವ ಮಾಜಿ ಆಟಗಾರ ಗಂಭೀರ್, ಚಿಕಿತ್ಸೆ ಪಡೆಯುತ್ತಿದ್ದಾರೆ.