ಪ್ರಸ್ತುತ ತಲೆಮಾರಿನ ಮೂವರು ಅಗ್ರ ಟಿ20 ಬ್ಯಾಟ್ಸ್‌ಮನ್‌ಗಳನ್ನು ಆರಿಸಿದ ಸುರೇಶ್ ರೈನಾ!
ಭಾರತ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ ಅವರು, ಪ್ರಸ್ತುತ ತಲೆ ಮಾರಿನ ಟಿ20 ಕ್ರಿಕೆಟ್‌ನ ಶ್ರೇಷ್ಠ ಮೂವರು ಬ್ಯಾಟ್ಸ್‌ಮನ್‌ಗಳನ್ನು ಆಯ್ಕೆ ಮಾಡಿದ್ದಾರೆ. ಭಾರತದಿಂದ ಇಬ್ಬರು ಹಾಗೂ ದಕ್ಷಿಣ ಆಫ್ರಿಕಾ ತಂಡದಿಂದ ಒಬ್ಬರು ಆಟಗಾರನನ್ನು ಆರಿಸಿದ್ದಾರೆ.

ಪ್ರಸ್ತುತ ತಲೆ ಮಾರಿನ ಮೂವರು ಶ್ರೇಷ್ಠ ಟಿ20 ಬ್ಯಾಟ್ಸ್‌ಮನ್‌ಗಳನ್ನು ಆರಿಸಿದ ಸುರೇಶ್ ರೈನಾ. -

ನವದೆಹಲಿ: ಭಾರತ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ಸುರೇಶ್ ರೈನಾ (Suresh Raina) ಅವರು, ಟಿ20 ಕ್ರಿಕೆಟ್‌ನಲ್ಲಿ ಪ್ರಸ್ತುತ ತಲೆಮಾರಿನ ಮೂವರು ಅತ್ಯಂತ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳನ್ನು ಆರಿಸಿದ್ದಾರೆ. ಅವರು ಭಾರತದ ತಂಡದಿಂದ ಇಬ್ಬರು ಆಟಗಾರರ ಹಾಗೂ ದಕ್ಷಿಣ ಆಫ್ರಿಕಾ ತಂಡದಿಂದ ಒಬ್ಬರನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಅವರು ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಅವರನ್ನು ಆರಿಸಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ತಂಡದ ಹೆನ್ರಿಚ್ ಕ್ಲಾಸೆನ್ ಅವರನ್ನು ಕೂಡ ರೈನಾ ತಮ್ಮ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ಇಂಗ್ಲೆಂಡ್ ತಂಡದ ವಿರುದ್ಧ ಕೊನೆಯ ಟಿ20ಐ ಸರಣಿಯ ಪಂದ್ಯವೊಂದರಲ್ಲಿ ಅಭಿಷೇಕ್ ಶರ್ಮಾ ಕೇವಲ 54 ಎಸೆತಗಳಲ್ಲಿ 135 ರನ್‌ಗಳನ್ನು ದಾಖಲಿಸಿದ್ದಾರೆ. ಇಲ್ಲಿಯ ತನಕ ಟಿ20ಐ ಕ್ರಿಕೆಟ್‌ನಲ್ಲಿ ಆಡಿದ ಅಭಿಷೇಕ್ ಶರ್ಮಾ ಅವರು 17 ಇನಿಂಗ್ಸ್‌ಗಳಲ್ಲಿ 193ರ ಸ್ಟ್ರೈಕ್ ರೇಟ್‌ನಲ್ಲಿ 535 ರನ್‌ಗಳನ್ನು ಕಲೆ ಹಾಕಿದ್ದಾರೆ. ಇದರಲ್ಲಿ ಅವರು ಎರಡು ಶತಕಗಳು ಹಾಗೂ ಹಲವು ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಇವರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 77 ಪಂದ್ಯಗಳಿಂದ 163ರ ಸ್ಟ್ರೈಕ್ ರೇಟ್‌ನಲ್ಲಿ 1816 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ 9 ಅರ್ಧಶತಕಗಳನ್ನು ಸಿಡಿಸಿದ್ದಾರೆ.
ಸಾರ್ವಕಾಲಿಕ ಶ್ರೇಷ್ಠ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI ಆರಿಸಿದ ಸುರೇಶ್ ರೈನಾ!
ಇನ್ನು ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು 83 ಟಿ20ಐ ಪಂದ್ಯಗಳಿಂದ 167.07ರ ಸ್ಟ್ರೈಕ್ ರೇಟ್‌ನ್ಲಿ 2,598 ರನ್‌ಗಳನ್ನು ಬಾರಿಸಿದ್ದಾರೆ. ಇವರು ನಾಲ್ಕು ಶತಕಗಳು ಹಾಗೂ 21 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇವರು ಐಪಿಎಲ್ ಟೂರ್ನಿಯಲ್ಲಿ 166 ಪಂದ್ಯಗಳಿಂದ 148.65ರ ಸ್ಟ್ರೈಕ್ ರೇಟ್‌ನಲ್ಲಿ 4,311 ರನ್‌ಗಳನ್ನು ಬಾರಿಸಿದ್ದಾರೆ. ಅವರು ಐಪಿಎಲ್‌ನಲ್ಲಿ ಎರಡು ಶತಕ ಹಾಗೂ 29 ಅರ್ಧಶತಕಗಳನ್ನು ಹೊಂದಿದ್ದಾರೆ.
ಸುರೇಶ್ ರೈನಾ ಹೇಳಿದ್ದೇನು?
ಶುಭಾಂಕರ್ ಮಿಶ್ರಾ ಯೂಟ್ಯೂಬ್ ಚಾನೆಲ್‌ನಲ್ಲಿ ಸುರೇಶ ರೈನಾಗೆ ಪ್ರಸ್ತುತ ತಲೆಮಾರಿನ ಅಗ್ರ ಮೂವರು ಟಿ20 ಬ್ಯಾಟ್ಸ್‌ಮನ್‌ಗಳು ಯಾರೆಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, "ಹೆನ್ರಿಚ್ ಕ್ಲಾಸೆನ್, ಅಭಿಷೇಕ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್. ಇಂಗ್ಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಶತಕವನ್ನು ಬಾರಿಸಿದ್ದರು. ಸೂರ್ಯಕುಮಾರ್ ಯಾದವ್ ಅದ್ಭುತ ಹೊಡೆತಗಳನ್ನು ಹೊಂದಿದ್ದಾರೆ. ಹೆನ್ರಿಚ್ ಕ್ಲಾಸೆನ್ ಸಿಕ್ಸರ್ ಹೊಡೆಯುವ ಸಾಮರ್ಥ್ಯ ಅದ್ಭುತವಾಗಿದೆ," ಎಂದು ಶ್ಲಾಘಿಸಿದ್ದಾರೆ.
ಭಾರತ ಏಕದಿನ ತಂಡಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರ ಮಹತ್ವವನ್ನು ತಿಳಿಸಿದ ಸುರೇಶ್ ರೈನಾ!
2025ರ ಐಪಿಎಲ್ ಮೆಗಾ ಹರಾಜಿಗೆ ಮುಂಚಿತವಾಗಿ ಸನ್‌ರೈಸರ್ಸ್ ಹೈದರಾಬಾದ್, ಕ್ಲಾಸೆನ್ ಅವರನ್ನು 23 ಕೋಟಿ ರು. ಗಳಿಗೆ ಉಳಿಸಿಕೊಂಡಿತ್ತು. ಹೈದರಾಬಾದ್ ಮೂಲದ ಫ್ರಾಂಚೈಸಿಯೊಂದಿಗೆ ಕಳೆದ ಮೂರು ಋತುಗಳಲ್ಲಿ ಬಲಗೈ ಬ್ಯಾಟ್ಸ್‌ಮನ್ 39 ಇನಿಂಗ್ಸ್‌ಗಳಲ್ಲಿ 173.50ರ ಸ್ಟ್ರೈಕ್ ರೇಟ್‌ನಲ್ಲಿ 1,414 ರನ್ ಗಳಿಸಿದ್ದಾರೆ, ಇದರಲ್ಲಿ ಎರಡು ಶತಕಗಳು ಮತ್ತು ಏಳು ಅರ್ಧಶತಕಗಳು ಸೇರಿವೆ.