ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಭಾರತ ಏಷ್ಯಾ ಕಪ್‌ ತಂಡದಲ್ಲಿ ಸ್ಥಾನ ಪಡೆಯದ ಟಾಪ್‌ 5 ಆಟಗಾರರು!

2025ರ ಏಷ್ಯಾ ಕಪ್ ಟೂರ್ನಿಗೆ ಆಗಸ್ಟ್‌ 19 ರಂದು ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ 15 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೆಲ ಸ್ಟಾರ್‌ ಆಟಗಾರರು ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇವರ ಪೈಕಿ ಶ್ರೇಯಸ್‌ ಅಯ್ಯರ್‌ ಕೂಡ ಒಬ್ಬರು.

ಏಷ್ಯಾ ಕಪ್‌ ಭಾರತ ತಂಡದಲ್ಲಿ ಸ್ಥಾನ ಸಿಗದ 5 ಆಟಗಾರರು!

ಏಷ್ಯಾ ಕಪ್‌ ಭಾರತ ತಂಡದಲ್ಲಿ ಸ್ಥಾನ ಸಿಗದ ಐವರು ಸ್ಟಾರ್‌ ಆಟಗಾರರು.

Profile Ramesh Kote Aug 19, 2025 6:55 PM

ನವದೆಹಲಿ: ಬಹುನಿರೀಕ್ಷಿತ 2025ರ ಏಷ್ಯಾ ಕಪ್ (Asia Cup 2025) ಟೂರ್ನಿಯು ಸೆಪ್ಟೆಂಬರ್ 9 ರಂದು ಪ್ರಾರಂಭವಾಗಲಿದೆ. ಈ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು (India's Squad for Asia Cup) ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿ ಆಗಸ್ಟ್‌ 19 ರಂದು ಮಂಗಳವಾರ ಪ್ರಕಟಿಸಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕತ್ವದಲ್ಲಿ ಆಯ್ಕೆದಾರರು 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಕಳೆದ ವರ್ಷ ಟಿ20 ವಿಶ್ವಕಪ್ ವಿಜೇತ ತಂಡದಲ್ಲಿದ್ದ 8 ಆಟಗಾರರು ಸೇರಿದ್ದಾರೆ. ಆದಾಗ್ಯೂ, ಈ ಹಿಂದೆ ಉತ್ತಮ ಪ್ರದರ್ಶನ ತೋರಿದ್ದ ಹಲವು ಆಟಗಾರರಿಗೆ ಏಷ್ಯಾ ಕಪ್‌ ಭಾರತ ತಂಡದಲ್ಲಿ ಅವಕಾಶ ನೀಡಲಾಗಿಲ್ಲ. ಅಂಥಾ ಐವರು ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ.

2025ರ ಏಷ್ಯಾ ಕಪ್‌ ಟೂರ್ನಿಯ ಭಾರತ ತಂಡ

ಸೂರ್ಯ ಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿ.ಕೀ), ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿ.ಕೀ), ಹರ್ಷಿತ್ ಸಿಂಗ್ ರಾಣಾ

Asia Cup 2025: ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ; ಗಿಲ್‌ಗೆ ಉಪನಾಯಕನ ಪಟ್ಟ

1 . ರವಿ ಬಿಷ್ಣೋಯ್

ರವಿ ಬಿಷ್ಣೋಯ್ ಭಾರತ ಪರ ಟಿ20 ಅಂtAರಾಷ್ಟ್ರೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು 42 ಪಂದ್ಯಗಳಲ್ಲಿ 61 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರು ಟಿ20ಐ ಬೌಲಿಂಗ್ ಶ್ರೇಯಾಂಕದಲ್ಲಿ 7ನೇ ಸ್ಥಾನದಲ್ಲಿದ್ದಾರೆ. ಇದರ ಹೊರತಾಗಿಯೂ, ಬಲಗೈ ಲೆಗ್ ಸ್ಪಿನ್ನರ್‌ಗೆ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

2. ಶ್ರೇಯಸ್ ಅಯ್ಯರ್

ಭಾರತದ ಟಿ20ಐ ತಂಡದಿಂದ ಶ್ರೇಯಸ್ ಅಯ್ಯರ್ ಹೊರಗುಳಿದಿರುವುದು ಏಕೆ ಎಂದು ಯಾರಿಗೂ ತಿಳಿದಿಲ್ಲ. 51 ಪಂದ್ಯಗಳಲ್ಲಿ ಅವರು ಭಾರತಕ್ಕಾಗಿ ಸುಮಾರು 31ರ ಸರಾಸರಿ ಮತ್ತು 136ರ ಸ್ಟ್ರೈಕ್ ರೇಟ್‌ನಲ್ಲಿ 1104 ರನ್ ಗಳಿಸಿದ್ದಾರೆ. ಅವರು 8 ಅರ್ಧಶತಕಗಳನ್ನು ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಅವರ ದಾಖಲೆಯೂ ಅದ್ಭುತವಾಗಿತ್ತು. ಇದರ ಹೊರತಾಗಿಯೂ, ಅವರು 2023ರ ನಂತರ ಭಾರತ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಾಧ್ಯವಾಗಿಲ್ಲ.

Asia Cup 2025: ಪಾಕಿಸ್ತಾನ ವಿರುದ್ಧ ಭಾರತ ತಂಡ ಆಡಬಾರದೆಂದ ಕೇದರ್‌ ಜಾಧವ್!

3. ಯಶಸ್ವಿ ಜೈಸ್ವಾಲ್

ಯಶಸ್ವಿ ಜೈಸ್ವಾಲ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಸ್ಥಿರವಾಗಿ ರನ್ ಗಳಿಸಿದ್ದಾರೆ. 23 ಪಂದ್ಯಗಳಿಂದ ಅವರ ಸರಾಸರಿ 36 ಮತ್ತು ಸ್ಟ್ರೈಕ್ ರೇಟ್ 164. ಅವರು ಇದರಲ್ಲಿ ಒಂದು ಶತಕ ಗಳಿಸಿದ್ದಾರೆ. ಅವರ ಹೆಸರಿನಲ್ಲಿ 5 ಅರ್ಧಶತಕಗಳಿವೆ. ಇದರ ಹೊರತಾಗಿಯೂ ತಂಡದಲ್ಲಿ ಆಯ್ಕೆಯಾಗದಿರುವುದು ಎಲ್ಲರಿಗೂ ಆಘಾತಕಾರಿಯಾಗಿದೆ.

4. ಮೊಹಮ್ಮದ್ ಸಿರಾಜ್

ವೇಗದ ಬೌಲರ್ ಮೊಹಮ್ಮದ್ ಸಿರಾಜ್ 2024ರ ಟಿ20ಐ ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಿದ್ದರು. ಅಮೆರಿಕದಲ್ಲಿ ನಡೆದಿದ್ದ ಪಂದ್ಯಗಳಲ್ಲಿ ಆಡಲು ಅವರಿಗೆ ಅವಕಾಶವೂ ಸಿಕ್ಕಿತು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಅವರು ಅದ್ಭುತ ಬೌಲಿಂಗ್ ಪ್ರದರ್ಶನವನ್ನು ತೋರಿದ್ದರು. 2025ರ ಐಪಿಎಲ್‌ ಟೂರ್ನಿಯ ಪವರ್‌ಪ್ಲೇನಲ್ಲಿ ಅವರು ಅದ್ಭುತ ಬೌಲಿಂಗ್ ತೋರಿದ್ದಾರೆ.

Asia Cup squad: ಏಷ್ಯಾಕಪ್‌ಗೆ ಭಾರತ ಪ್ಲೇಯಿಂಗ್ ಇಲೆವೆನ್ ಅಂತಿಮ; ಹೀಗಿದೆ ತಂಡ

5. ವಾಷಿಂಗ್ಟನ್ ಸುಂದರ್

ವಾಷಿಂಗ್ಟನ್ ಸುಂದರ್ ಸ್ಪಿನ್‌ ಆಲ್‌ರೌಂಡರ್. ಟಿ20 ಯಲ್ಲಿ ಅವರು ಯಾವುದೇ ಸಂದರ್ಭದಲ್ಲೂ ಬ್ಯಾಟ್ಸ್‌ಮನ್‌ಗಳನ್ನು ಮುಕ್ತವಾಗಿ ಆಡಲು ಬಿಡುವುದಿಲ್ಲ. 54 ಪಂದ್ಯಗಳಿಂದ ಅವರು 6.94ರ ಎಕಾನಮಿಯಲ್ಲಿ 48 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಕೆಳ ಕ್ರಮಾಂಕದಲ್ಲಿ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಇದರ ಹೊರತಾಗಿಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.