ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs SL: ಮೊದಲನೇ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್‌ Xi ಆರಿಸಿದ ಆಕಾಶ್‌ ಚೋಪ್ರಾ!

ಶ್ರೀಲಂಕಾ ವಿರುದ್ಧದ ಮೊದಲನೇ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ XI ಅನ್ನು ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ಆಯ್ಕೆ ಮಾಡಿದ್ದಾರೆ. ಅವರು ಸಾಯಿಸುದರ್ಶನ್‌ ಅವರ ಸ್ಥಾನಕ್ಕೆ ಕನ್ನಡಿಗ ದೇವದತ್‌ ಪಡಿಕ್ಕಲ್‌ ಅವರನ್ನು ಆಯ್ಕೆ ಮಾಡಿದ್ದಾರೆ. ಮೊದಲನೇ ಟೆಸ್ಟ್‌ ಪಂದ್ಯ ಆಗಸ್ಟ್‌ 15 ರಂದು ಗಾಲೆ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತದ ಪ್ಲೇಯಿಂಗ್‌ XI ಆರಿಸಿದ ಆಕಾಶ್‌ ಚೋಪ್ರಾ.

ನವದೆಹಲಿ: ಭಾರತ ಹಾಗೂ ಶ್ರೀಲಂಕಾ ತಂಡಗಳ (IND vs SL) ನಡುವಣ ಟೆಸ್ಟ್‌ ಸರಣಿಯ ಮೊದಲನೇ ಪಂದ್ಯ ಆಗಸ್ಟ್‌ 15 ರಂದು ಗಾಲೆ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕೆ ಮಾಜಿ ಟೆಸ್ಟ್‌ ಆರಂಭಿಕ ಆಕಾಶ್‌ ಚೋಪ್ರಾ (Aakash Chopra) ಅವರು ಭಾರತ ತಂಡದ ಪ್ಲೇಯಿಂಗ್‌ Xi ಅನ್ನು ಪ್ರಕಟಿಸಿದ್ದಾರೆ. ಗಾಯದಿಂದ ಸರಣಿಯಿಂದ ಹೊರಬಿದ್ದಿರುವ ಸಾಯಿ ಸುದರ್ಶನ್‌ ಅವರ ಮೂರನೇ ಕ್ರಮಾಂಕಕ್ಕೆ ಆಕಾಶ್‌ ಚೋಪ್ರಾ, ಕನ್ನಡಿಗ ದೇವದತ್‌ ಪಡಿಕ್ಕಲ್‌ ಅವರನ್ನು ಆಯ್ಕೆ ಮಾಡಿದ್ದಾರೆ. ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಅವರು ಸರಣಿಯಿಂದ ಹೊರ ನಡೆದಿದ್ದಾರೆ.

ದೇವದತ್‌ ಪಡಿಕ್ಕಲ್‌ ಅವರು 2024ರಲ್ಲಿಯೇ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು, ಆದರೆ ಅಂದಿನಿಂದ ಅವರು ಕೇವಲ ಎರಡು ಪಂದ್ಯಗಳನ್ನು ಆಡಿದ್ದಾರೆ. ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಅವರು ಶತಕವನ್ನು ಬಾರಿಸಿದ್ದರು. ಇದೀಗ ಅದೇ ಲಯವನ್ನು ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಇನ್ನು ಸಾರಾಂಶ್‌ ಜೈನ್‌ ಅಥವಾ ಆಕಿಬ್‌ ನಬಿ ಅವರ ಪೈಕಿ ಯಾರನ್ನೂ ಟೆಸ್ಟ್‌ಗೆ ಪದಾರ್ಪಣೆ ಮಾಡಲು ಅವಕಾಶ ನೀಡಲಿಲ್ಲ. ಭಾರತ ಎ ತಂಡದ ಪರ ಉತ್ತಮ ಪ್ರದರ್ಶನವನ್ನು ತೋರಿದ್ದರ ಫಲವಾಗಿ ಸಾರಾಂಶ್‌ ಜೈನ್‌ ಭಾರತ ತಂಡದಲ್ಲಿ ಚೊಚ್ಚಲ ಅವಕಾಶವನ್ನು ಪಡೆದಿದ್ದರು. ಇವರು ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌.

IND vs SL: ಭಾರತ ಟೆಸ್ಟ್‌ ತಂಡದ ಮುಂದಿನ ದೊಡ್ಡ ಗುರಿ ಯಾವುದೆಂದು ತಿಳಿಸಿದ ಶುಭಮನ್‌ ಗಿಲ್!

ಆಕಿಬ್‌ ನಬಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಸ್ಪರ್ಧೆಯಲ್ಲಿದ್ದರೂ ಅಂತಿಮವಾಗಿ ಆಡುವ ಬಳಗದಲ್ಲಿ ಅವಕಾಶ ಪಡೆಯಲಿಲ್ಲ. ಬಲಗೈ ವೇಗದ ಬೌಲರ್ ನಬಿ, ಮೊಣಕಾಲಿನ ಗಾಯದಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಜಸ್‌ಪ್ರೀತ್‌ ಬುಮ್ರಾ ಅವರ ಬದಲಿಗೆ ತಂಡಕ್ಕೆ ಕರೆಸಿಕೊಳ್ಳಲಾಗಿತ್ತು. ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ಭಾರತ ತಂಡದ ಇಬ್ಬರು ವೇಗದ ಬೌಲರ್‌ಗಳಾಗಿ ಮೊಹಮ್ಮದ್ ಸಿರಾಜ್ ಮತ್ತು ಪ್ರಸಿಧ್‌ ಕೃಷ್ಣ ಅವರನ್ನು ಆಯ್ಕೆ ಮಾಡಿದ್ದಾರೆ.

ಜಸ್‌ಪ್ರೀತ್‌ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಭಾರತ ತಂಡದ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಶುಭಮನ್‌ ಗಿಲ್‌ ಅಲ್ಲವೇ ಅಲ್ಲ; ಸರ್ಫರಾಝ್‌ ಖಾನ್‌ ಉಪಖಂಡದ ರಾಜ ಎಂದ ಆರ್‌ ಅಶ್ವಿನ್‌! ಏಕೆ ಗೊತ್ತೆ?

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ಗೆ ಆಕಾಶ್ ಚೋಪ್ರಾ ಆಯ್ಕೆ ಮಾಡಿದ ಭಾರತದ ಪ್ಲೇಯಿಂಗ್‌ XI

ಮಾಜಿ ಕ್ರಿಕೆಟಿಗ ಹಾಗೂ ವಿಶ್ಲೇಷಕ ಆಕಾಶ್ ಚೋಪ್ರಾ, ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ ಭಾರತದ ಸಂಭಾವ್ಯ ಆಡುವ XI ಅನ್ನು ಆಯ್ಕೆ ಮಾಡಿದ್ದಾರೆ.

  1. ಕೆಎಲ್ ರಾಹುಲ್
  2. ಯಶಸ್ವಿ ಜೈಸ್ವಾಲ್
  3. ದೇವದತ್ ಪಡಿಕ್ಕಲ್
  4. ಶುಭ್‌ಮನ್ ಗಿಲ್
  5. ರಿಷಭ್ ಪಂತ್
  6. ಧ್ರುವ್ ಜುರೆಲ್
  7. ರವೀಂದ್ರ ಜಡೇಜಾ
  8. ಮಾನವ್ ಸುಥಾರ್
  9. ಕುಲದೀಪ್ ಯಾದವ್
  10. ಪ್ರಸಿಧ್‌ ಕೃಷ್ಣ
  11. ಮೊಹಮ್ಮದ್ ಸಿರಾಜ್

ಆಕಾಶ್‌ ಚೋಪ್ರಾ ಅವರ ತಂಡದಲ್ಲಿ ಮೂರು ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ, ಮಾನವ್ ಸುತಾರ್ ಮತ್ತು ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ವೇಗದ ಬೌಲಿಂಗ್ ಜವಾಬ್ದಾರಿಯನ್ನು ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ವಹಿಸಲಿದ್ದಾರೆ.