IND vs IRE: ಮೊದಲನೇ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಪಾತ್ರವನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ!
IND vs IRE: ಐರ್ಲೆಂಡ್ ವಿರುದ್ಧದ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ನೀಡಿದ ಬಗ್ಗೆ ಮಾಜಿ ಟೆಸ್ಟ್ ಓಪನರ್ ಆಕಾಶ್ ಚೋಪ್ರಾ ಪ್ರಶ್ನೆ ಮಾಡಿದ್ದಾರೆ. ಅವರನ್ನು ಪಂದ್ಯದಲ್ಲಿ ಟೀಮ್ ಮ್ಯಾನೇಜ್‌ಮೆಂಟ್ ಸರಿಯಾಗಿ ನಿರ್ವಹಿಸಿಲ್ಲ ಎಂದು ಹೇಳಿದ್ದಾರೆ.
ವಾಷಿಂಗ್ಟನ್ ಸುಂದರ್‌ರ ಪಾತ್ರವನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ. -
ನವದೆಹಲಿ: ಭಾರತ ತಂಡ ಬ್ಯಾಟಿಂಗ್ ವೈಫಲ್ಯದಿಂದ ಐರ್ಲೆಂಡ್ ಎದುರು ಮೊದಲನೇ ಟಿ20ಐ ಪಂದ್ಯದಲ್ಲಿ (IND vs IRE) 34 ರನ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಟೀಮ್ ಇಂಡಿಯಾ 0-1 ಹಿನ್ನಡೆಯನ್ನು ಅನುಭವಿಸಿದೆ. ಅಂದ ಹಾಗೆ ಈ ಪಂದ್ಯದ ಬಳಿಕ ಭಾರತ ಟೆಸ್ಟ್ ತಂಡದ ಮಾಜಿ ಆರಂಭಿಕ ಆಕಾಶ್ ಚೋಪ್ರಾ (Aakash Chopra), ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ (washington Sundar) ಅವರ ಪಾತ್ರವನ್ನು ಪ್ರಶ್ನೆ ಮಾಡಿದ್ದಾರೆ. ಪಂದ್ಯದಲ್ಲಿ ಅವರನ್ನು ಸರಿಯಾಗಿ ಬಳಿಸಿಕೊಳ್ಳುತ್ತಿಲ್ಲ ಅವರು ದೂರಿದ್ದಾರೆ.
ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಭಾರತ ತಂಡದ ಹಲವು ಆಟಗಾರರ ಪ್ರದರ್ಶನ ತೀವ್ರ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ತಂಡದಲ್ಲಿ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಹೇಗೆ ಬಳಸಿಕೊಳ್ಳಲಾಗುತ್ತಿದೆ ಎಂಬುದರ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ಟೀಮ್ ಮ್ಯಾನೇಜ್‌ಮೆಂಟ್ ನಿರ್ಧಾರಗಳನ್ನು ಪ್ರಶ್ನಿಸಿದ ಚೋಪ್ರಾ, ವಾಷಿಂಗ್ಟನ್ ಸುಂದರ್ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಅವರಿಗೆ ಅವಕಾಶಗಳು ಮತ್ತು ಜವಾಬ್ದಾರಿಗಳನ್ನು ನೀಡಲಾಗುತ್ತಿದೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಅವರಂತಹ ಪ್ರತಿಭಾವಂತ ಆಲ್‌ರೌಂಡರ್‌ನ ಕೌಶಲವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ತಂಡದ ಯಶಸ್ಸಿಗೆ ಅತ್ಯಂತ ಮಹತ್ವದ್ದು ಎಂದು ಅವರು ಅಭಿಪ್ರಾಯಪಟ್ಟರು.
IPL 2027: ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಲು ಕಾರಣ ತಿಳಿಸಿದ ಎಬಿ ಡಿ ವಿಲಿಯರ್ಸ್!
ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಬಳಸಿಕೊಳ್ಳುತ್ತಿರುವ ರೀತಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ.
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಚೋಪ್ರಾ, "ವಾಷಿಂಗ್ಟನ್ ಸುಂದರ್ ವಿಚಾರದಲ್ಲಿ ನಾವು ಏನು ಮಾಡುತ್ತಿದ್ದೇವೆ? ಅವರನ್ನು ತಂಡದಲ್ಲಿ ಆಡಿಸುತ್ತಿದ್ದೇವೆ, ಆದರೆ ನಿಜವಾಗಿ ಅವರಿಗೆ ಆಡಲು ಅವಕಾಶ ನೀಡುತ್ತಿಲ್ಲ. ಕೇವಲ ತಂಡದಲ್ಲಿ ಸ್ಥಾನ ಕೊಡುವುದೇ ಅವಕಾಶ ನೀಡಿದಂತಾಗುವುದಿಲ್ಲ. ಅವರಿಗೆ ಸಂಪೂರ್ಣ ಓವರ್‌ಗಳನ್ನು ಬೌಲ್ ಮಾಡಲು ನೀಡಬೇಕು, ಸೂಕ್ತ ಬ್ಯಾಟಿಂಗ್ ಕ್ರಮಾಂಕದಲ್ಲಿ ಕಣಕ್ಕಿಳಿಸಬೇಕು ಮತ್ತು ದೊಡ್ಡ ಜವಾಬ್ದಾರಿಯನ್ನು ವಹಿಸಬೇಕು. ಮುಖ್ಯವಾಗಿ, ಅವರ ಪಾತ್ರವನ್ನು ಸ್ಪಷ್ಟವಾಗಿ ನಿರ್ಧರಿಸಬೇಕು. ಪಾತ್ರ ಸ್ಪಷ್ಟವಾಗದಿದ್ದರೆ ಆಟಗಾರ ಹಲವು ಬಾರಿ ದಿಕ್ಕು ತಪ್ಪುತ್ತಾರೆ," ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಕೇವಲ ಒಂದು ಓವರ್ ಮಾತ್ರ ಬೌಲ್ ಮಾಡಿ 19 ರನ್ ನೀಡಿ ವಿಕೆಟ್ ಪಡೆಯಲು ವಿಫಲರಾಗಿದ್ದರು. ಬ್ಯಾಟಿಂಗ್‌ನಲ್ಲೂ 12 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿ ಔಟಾಗಿದ್ದು, ಎರಡೂ ವಿಭಾಗಗಳಲ್ಲಿ ತಂಡಕ್ಕೆ ನಿರೀಕ್ಷಿತ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ.
19 ಎಸೆತದಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದ ಅಭಿಷೇಕ್ ಶರ್ಮಾ; ವಿಶ್ವದ ಮೊದಲ ಆಟಗಾರ
ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರ ಬೌಲಿಂಗ್ ಬಳಕೆ ಕುರಿತು ಮತ್ತೊಮ್ಮೆ ಪ್ರಶ್ನೆ ಎತ್ತಿದ್ದು, ಅವರ ಅಂಕಿ-ಅಂಶಗಳನ್ನು ಉಲ್ಲೇಖಿಸಿ ತಂಡದ ನಿರ್ವಹಣೆಯ ನಿರ್ಧಾರವನ್ನು ಟೀಕಿಸಿದ್ದಾರೆ.
"ಬೌಲಿಂಗ್ ವಿಚಾರಕ್ಕೆ ಬಂದರೆ, ವಾಷಿಂಗ್ಟನ್ ಸುಂದರ್ 61 ಪಂದ್ಯಗಳಲ್ಲಿ 51 ವಿಕೆಟ್ ಪಡೆದಿದ್ದಾರೆ. ಇದು ಕೆಟ್ಟ ದಾಖಲೆಯಲ್ಲ. ಅವರ ಎಕಾನಮಿ ದರವೂ ಸುಮಾರು ಏಳು ರನ್‌ಗಳಷ್ಟಿದ್ದು, ಅದು ಕೂಡ ಉತ್ತಮವಾಗಿದೆ. ಸರಾಸರಿಯೂ ಸಮರ್ಪಕವಾಗಿದೆ. ಆದರೂ ಅವರು ಪ್ರತಿ ಪಂದ್ಯದಲ್ಲಿ ಸರಾಸರಿ ಮೂರು ಓವರ್‌ಗಳಿಗಿಂತಲೂ ಕಡಿಮೆ ಬೌಲ್ ಮಾಡುತ್ತಾರೆ. ಅವರಿಗೆ ಸಂಪೂರ್ಣ ಸ್ಪೆಲ್ ಬೌಲ್ ಮಾಡುವ ಅವಕಾಶವನ್ನೇ ನೀಡುವುದಿಲ್ಲ," ಎಂದು ಚೋಪ್ರಾ ತಿಳಿಸಿದ್ದಾರೆ.
ಐರ್ಲೆಂಡ್ ವಿರುದ್ಧದ ಮೊದಲ ಟಿ20ಐ ಪಂದ್ಯದಲ್ಲಿ ಸೋಲು ಕಂಡಿರುವ ಭಾರತ, ಇದೀಗ ಜೂನ್ 28ರಂದು ಬೆಲ್‌ಫಾಸ್ಟ್‌ನಲ್ಲಿ ನಡೆಯಲಿರುವ ಎರಡನೇ ಟಿ20ಐ ಪಂದ್ಯದಲ್ಲಿ ಆತಿಥೇಯರನ್ನು ಎದುರಿಸಲಿದೆ. ಸರಣಿಯಲ್ಲಿ ಸಮಬಲ ಸಾಧಿಸಲು ಭಾರತಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.