ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೇವಲ 28 ಎಸೆತಗಳಲ್ಲಿ 15 ಸಿಕ್ಸರ್‌ಗಳೊಂದಿಗೆ ಶತಕ ಸಿಡಿಸಿದ ಎಬಿ ಡಿವಿಲಿಯರ್ಸ್‌!

AB De Villiers scored 28 balls Century: 2021ರಲ್ಲಿಯೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌, ಇತ್ತೀಚೆಗೆ ಸ್ಥಳೀಯ ಪಂದ್ಯವೊಂದರಲ್ಲಿ ಆಡಿದ್ದಾರೆ. ಈ ಪಂದ್ಯದಲ್ಲಿ ಅವರು ಕೇವಲ 28 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ. ಇದರಲ್ಲಿ ಅವರು 15 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ಕೇವಲ 28 ಎಸೆತಗಳಲ್ಲಿ ಸೆಂಚುರಿ ಬಾರಿಸಿದ ಎಬಿ ಡಿ ವಿಲಿಯರ್ಸ್!

ಎಬಿ ಡಿ ವಿಲಿಯರ್ಸ್‌ ಭರ್ಜರಿ ಶತಕ

Profile Ramesh Kote Mar 11, 2025 9:44 PM

ನವದೆಹಲಿ: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಕ್ರಿಕೆಟ್‌ಗೆ ಅದ್ಭುತವಾಗಿ ಕಮ್‌ಬ್ಯಾಕ್‌ ಮಾಡಿದ್ದಾರೆ. ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿದ್ದಾರೆ. ಮಾರ್ಚ್ 9 ರಂದು ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆದಿದ್ದ, ಬುಲ್ಸ್ ಲೆಜೆಂಡ್ಸ್ ವಿರುದ್ಧ ಟೈಟನ್ ಲೆಜೆಂಡ್ಸ್ ಪರ ಆಡಿದ್ದ ಅವರು ಕೇವಲ 28 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದರು. ತಮ್ಮ ವಿಶಿಷ್ಟ ಶೈಲಿಯಲ್ಲಿ ಬ್ಯಾಟಿಂಗ್ ಮೂಲಕ ಡಿವಿಲಿಯರ್ಸ್ 15 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಮೈದಾನದಲ್ಲಿ ಸಂಚಲನ ಮೂಡಿಸಿದರು. ಎಬಿ ಡಿ ವಿಲಿಯರ್ಸ್ ಅವರ ಸ್ಫೋಟಕ ಇನಿಂಗ್ಸ್‌ ನೆರವಿನಿಂದ ಟೈಟನ್ ಲೆಜೆಂಡ್ಸ್ ತಂಡ ದೊಡ್ಡ ಮೊತ್ತವನ್ನು ಕಲೆ ಹಾಕಲು ನೆರವು ನೀಡಿತು.

ಮೊದಲು ಬ್ಯಾಟ್‌ ಮಾಡಿದ್ದ ಟೈಟನ್ ಲೆಜೆಂಡ್ಸ್ ತಂಡ, ಡಿವಿಲಿಯರ್ಸ್ ಭರ್ಜರಿ ಶತಕದ ಮೂಲಕ ತನ್ನ ಪಾಲಿನ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 278 ರನ್‌ಗಳನ್ನು ಕಲೆ ಹಾಕಿತು. ಅವರು ಸಿಕ್ಸರ್ ಬಾರಿಸುವ ಮೂಲಕ ಸ್ಫೋಟಕ ಶೈಲಿಯಲ್ಲಿ ಶತಕವನ್ನು ಪೂರ್ಣಗೊಳಿಸಿದರು. ಇವರ ಸ್ಪೋಟಕ ಬ್ಯಾಟಿಂಗ್‌ ಅಭಿಮಾನಿಗಳಿಗೆ ಅವರ ಸುವರ್ಣ ದಿನಗಳನ್ನು ನೆನಪಿಸಿತು. ಬಳಿಕ ಬೃಹತ್‌ ಮೊತ್ತದ ಗುರಿಯನ್ನು ಹಿಂಬಾಲಿಸಿದ ಬುಲ್ಸ್ ಲೆಜೆಂಡ್ಸ್, 14 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 125 ರನ್‌ಗಳನ್ನು ಕಲೆ ಹಾಕಿತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯ ಸ್ಥಗಿತಗೊಂಡಿತು, ಇದು ಟೈಟನ್ಸ್‌ ತಂಡದ ಸುಲಭ ಗೆಲುವಿಗೆ ನೆರವು ನೀಡಿತು.

ODI tri-series: 47ನೇ ಶತಕ ಸಿಡಿಸಿ ಎಬಿ ಡಿ ವಿಲಿಯರ್ಸ್‌ ದಾಖಲೆ ಸರಿಗಟ್ಟಿದ ಕೇನ್‌ ವಿಲಿಯಮ್ಸನ್‌!

2021ರ ನಂತರದ ಮೊದಲ ಸ್ಪರ್ಧಾತ್ಮಕ ಪಂದ್ಯ

2021ರಲ್ಲಿ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ಎಬಿ ಡಿ ವಿಲಿಯರ್ಸ್ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಇವರ ಮೊದಲ ಸ್ಪರ್ಧಾತ್ಮಕ ಪಂದ್ಯ ಇದಾಗಿದೆ. ಇದಕ್ಕೂ ಮೊದಲು, ಅವರ ಕೊನೆಯ ವೃತ್ತಿಪರ ಪಂದ್ಯವು ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರವಾಗಿತ್ತು. 2018ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಅವರು ಇನ್ನೂ ದಕ್ಷಿಣ ಆಫ್ರಿಕಾದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಅವರು ಎಲ್ಲಾ ಸ್ವರೂಪಗಳಲ್ಲಿ 48.33ರ ಸರಾಸರಿಯಲ್ಲಿ 19,864 ರನ್ ಗಳಿಸಿದ್ದಾರೆ. ಅವರು ಕೇವಲ 31 ಎಸೆತಗಳಲ್ಲಿ ಶತಕ ಗಳಿಸಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.

ಎಬಿ ಡಿ ವಿಲಿಯರ್ಸ್‌ ಪ್ರತಿಭೆಗೆ ಆರ್‌ಸಿಬಿ ಸೂಕ್ತ ತಂಡವಲ್ಲ: ಸಂಜಯ್‌ ಮಾಂಜ್ರೇಕರ್ ಅಚ್ಚರಿ ಹೇಳಿಕೆ!

ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಮೇಲೆ ಕಣ್ಣು

ಜನವರಿಯಲ್ಲಿ ಎಬಿ ಡಿ ವಿಲಿಯರ್ಸ್ ವೃತ್ತಿಪರ ಕ್ರಿಕೆಟ್‌ಗೆ ಮರಳುವುದಾಗಿ ಘೋಷಿಸಿದರು ಮತ್ತು ಈಗ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ ಎರಡನೇ ಸೀಸನ್‌ನಲ್ಲಿ ಆಡಲು ಸಿದ್ಧರಾಗಿದ್ದಾರೆ. ಅವರನ್ನು ಆಧುನಿಕ ಕ್ರಿಕೆಟ್‌ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ ಉತ್ತಮ ದಾಖಲೆಗಳನ್ನು ಹೊಂದಿದ್ದಾರೆ. ಅವರು ಟೆಸ್ಟ್‌ನಲ್ಲಿ 50.66ರ ಸರಾಸರಿಯಲ್ಲಿ 8,765 ರನ್‌ಗಳನ್ನು ಮತ್ತು ಏಕದಿನ ಪಂದ್ಯಗಳಲ್ಲಿ 53.50ರ ಸರಾಸರಿಯಲ್ಲಿ 9,577 ರನ್‌ಗಳನ್ನು ಗಳಿಸಿದ್ದಾರೆ. ತಮ್ಮ ಇತ್ತೀಚಿನ ಸ್ಫೋಟಕ ಇನಿಂಗ್ಸ್‌ನೊಂದಿಗೆ, ಡಿವಿಲಿಯರ್ಸ್ ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂಬುದನ್ನು ಸಾಬೀತುಪಡಿಸಿದ್ದಾರೆ. ಈಗ ಅವರ ಮುಂದಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.