ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs NZ: ಟಿ20ಐ ಕ್ರಿಕೆಟ್‌ನ ಪವರ್‌ಪ್ಲೇನಲ್ಲಿ 100 ಸಿಕ್ಸರ್‌ ಬಾರಿಸಿ ರೋಹಿತ್‌ ಶರ್ಮಾ ದಾಖಲೆ ಮುರಿದ ಅಭಿಷೇಕ್‌ ಶರ್ಮಾ!

ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾ ತಮ್ಮ ಟಿ20ಐ ಕ್ರಿಕೆಟ್‌ನ ಪವರ್‌ನಲ್ಲಿ 100 ಸಿಕ್ಸರ್‌ ಹಾಗೂ 1000 ಟಿ20ಐ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧದ ಎರಡನೇ ಟಿ20ಐ ಪಂದ್ಯದಲ್ಲಿ ಬ್ಯಾಟ್‌ ಮಾಡುವಾಗ ಅಭಿಷೇಕ್‌ ಶರ್ಮಾ ಈ ಮೈಲುಗಲ್ಲು ತಲುಪಿದ್ದಾರೆ.

ಪವರ್‌ಪ್ಲೇನಲ್ಲಿ 100 ಸಿಕ್ಸರ್‌ ಬಾರಿಸಿದ ಅಭಿಷೇಕ್‌ ಶರ್ಮಾ.

ಕ್ರೈಸ್ಟ್‌ ಚರ್ಚ್‌: ಭಾರತ ಕ್ರಿಕೆಟ್‌ ತಂಡದ ಸ್ಪೋಟಕ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾ (Abhishek Sharma) ಅವರು ಟಿ20ಐ ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನ ಪವರ್‌ಪ್ಲೇನಲ್ಲಿ 100 ಸಿಕ್ಸರ್‌ ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಅಭಿಷೇಕ್‌ ಶರ್ಮಾ ಬರೆದಿದ್ದಾರೆ. ಶನಿವಾರ ಇಲ್ಲಿನ ಹ್ಯಾಗ್ಲಿ ಓವಲ್‌ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20ಐ ಪಂದ್ಯದಲ್ಲಿ (IND vs NZ) ಅಭಿಷೇಕ್‌ ಈ ದಾಖಲೆಯನ್ನು ಬರೆದಿದ್ದಾರೆ.

2024ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಅಲ್ಪಾವಧಿಯಲ್ಲೇ ಹಲವು ಮಹತ್ವದ ಸಾಧನೆಗಳಿಗೆ ಭಾಜನರಾಗಿದ್ದಾರೆ. ಟಿ20ಐ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗದ ಶತಕಗಳನ್ನು ಸಿಡಿಸಿರುವ ಅವರು, ಇದೀಗ ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಪವರ್‌ಪ್ಲೇ ಅವಧಿಯಲ್ಲಿ 100 ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಅಭಿಷೇಕ್ ಶರ್ಮಾ ಪಾತ್ರರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಅವರು ಈ ಮಹತ್ವದ ಮೈಲುಗಲ್ಲು ತಲುಪಿದರು.

IND vs NZ: 38 ವಿಕೆಟ್‌ಗಳೊಂದಿಗೆ ಭುವನೇಶ್ವರ್‌ ಕುಮಾರ್‌ ದಾಖಲೆ ಮುರಿದ ಅರ್ಷದೀಪ್‌ ಸಿಂಗ್!

ಇದಕ್ಕೂ ಮೊದಲು ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಪವರ್‌ಪ್ಲೇನಲ್ಲಿ 98 ಸಿಕ್ಸರ್‌ಗಳನ್ನು ಬಾರಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ರೋಹಿತ್ ಅವರನ್ನು ಹಿಂದಿಕ್ಕಿರುವ ಅಭಿಷೇಕ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಆರಂಭದಿಂದಲೇ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹೇರುವ ಅಭಿಷೇಕ್ ಅವರ ಸಾಮರ್ಥ್ಯ ಈ ಸಾಧನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಯುವ ವಯಸ್ಸಿನಲ್ಲೇ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಅವರು, ಭಾರತದ ಟಿ20 ತಂಡದ ಪ್ರಮುಖ ಆಟಗಾರನಾಗಿ ಹೊರಹೊಮ್ಮುತ್ತಿದ್ದಾರೆ.



2026ರಲ್ಲಿ ಟಿ20ಐ ಕ್ರಿಕೆಟ್‌ನಲ್ಲಿ 1,000 ರನ್ ಪೂರೈಸಿದ ಅಭಿಷೇಕ್ ಶರ್ಮಾ

2026ರ ವರ್ಷ ಟಿ20 ಕ್ರಿಕೆಟ್‌ನಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಪಾಲಿಗೆ ಸ್ಮರಣೀಯವಾಗಿದೆ. ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿರುವ ಅವರು, ಈ ವರ್ಷ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 1,000 ರನ್‌ಗಳ ಮೈಲುಗಲ್ಲು ತಲುಪಿದ್ದಾರೆ.

ಈ ಸಾಧನೆಯೊಂದಿಗೆ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಭಿಷೇಕ್ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಸೂರ್ಯಕುಮಾರ್ ಯಾದವ್ 2022ರಲ್ಲಿ 1,164 ರನ್ ಗಳಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇಶಾನ್ ಕಿಶನ್ 2026ರಲ್ಲಿ 1,159 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟರ್‌ಗಳು

ಸ್ಥಾನ ಆಟಗಾರ ತಂಡ ಪವರ್‌ಪ್ಲೇ ಸಿಕ್ಸರ್‌ಗಳು ಟಿ20ಐ ಪಂದ್ಯಗಳು
1 ಅಭಿಷೇಕ್ ಶರ್ಮಾ ಭಾರತ 100 69
2 ರೋಹಿತ್ ಶರ್ಮಾ ಭಾರತ 98 159
3 ಮಾರ್ಟಿನ್ ಗಪ್ಟಿಲ್ ನ್ಯೂಜಿಲೆಂಡ್ 97 122
4 ಮುಹಮ್ಮದ್ ವಸೀಮ್ ಯುಎಇ 95 99
5 ಪಾಲ್ ಸ್ಟರ್ಲಿಂಗ್ ಐರ್ಲೆಂಡ್ 94 158
6 ಕ್ವಿಂಟನ್ ಡಿ ಕಾಕ್ ದಕ್ಷಿಣ ಆಫ್ರಿಕಾ 87 110