18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಕೈರೊನ್ ಪೊಲಾರ್ಡ್ ದಾಖಲೆ ಮುರಿದ ಅಭಿಷೇಕ್ ಶರ್ಮಾ!
ಪ್ರಸ್ತುತ ನಡೆಯುತ್ತಿರುವ 2025ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಪಂಜಾಬ್ ತಂಡದ ನಾಯಕ ಅಭಿಷೇಕ್ ಶರ್ಮಾ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಅವರು ಬರೋಡಾ ವಿರುದ್ಧ ಕೇವಲ 18 ಎಸೆತಗಳಲ್ಲಿ ಸ್ಪೋಟಕ ಅರ್ಧಶತಕ ಬಾರಿಸಿದ್ದಾರೆ. ಆ ಮೂಲಕ ವೆಸ್ಟ್ ಇಂಡೀಸ್ ಆಲ್‌ರೌಂಡರ್ ಕೈರೊನ್ ಪೊಲಾರ್ಡ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಕೈರೊನ್ ಪೊಲಾರ್ಡ್ ದಾಖಲೆ ಮುರಿದ ಅಭಿಷೇಕ್ ಶರ್ಮಾ. -
ಹೈದರಾಬಾದ್: ಭಾರತ ಟಿ20 ತಂಡದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma), ಪ್ರಸ್ತುತ ನಡೆಯುತ್ತಿರುವ 2025-26ರ ಸಾಲಿನ ಸೈಯದ್ ಮುಷ್ತಾಕ್ ಅಲಿ ಟ್ರೋಫಿ (Syed Musthaq Ali Trophy 2025-26) ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಮಂಗಳವಾರ ಇಲ್ಲಿನ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಬರೋಡಾ ವಿರುದ್ಧದ ಪಂದ್ಯದಲ್ಲಿ (Baroda vs Punjab) ಪಂಜಾಬ್ ತಂಡದ ನಾಯಕ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ ಸ್ಪೋಟಕ ಅರ್ಧಶತಕವನ್ನು ಬಾರಿಸಿದರು. ಆ ಮೂಲಕ ವೆಸ್ಟ್ ಇಂಡೀಸ್ ತಂಡದ ಮಾಜಿ ಆಲ್‌ರೌಂಡರ್ ಕೈರೊನ್ ಪೊಲಾರ್ಡ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಭಾನುವಾರ ಬಂಗಾಳ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದ ಅಭಿಷೇಕ್ ಶರ್ಮಾ ಕೇವಲ 52 ಎಸೆತಗಳಲ್ಲಿ 148 ರನ್‌ಗಳನ್ನು ಬಾರಿಸಿದ್ದರು. ಇದೀಗ ಬರೋಡಾ ವಿರುದ್ಧದ ಪಂದ್ಯದಲ್ಲಿಯೂ ಅವರು ಮಿಂಚಿದರು. ಅವರು ಆಡಿದ ಕೇವಲ 18 ಎಸೆತಗಳಲ್ಲಿ ಅರ್ಧಶತಕವನ್ನು ಬಾರಿಸಿದರು. ನಂತರ ತಮ್ಮ 19ನೇ ಎಸೆತದಲ್ಲಿ ರಾಜ್ ಲಿಂಬಾಣಿಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಪಂಜಾಬ್ ತನ್ನ ಪಾಲಿನ 20 ಓವರ್‌ಗಳಿಗೆ 222 ರನ್‌ಗಳನ್ನು ಕಲೆ ಹಾಕಿತು.
KAR vs TN: ದೇವದತ್ ಪಡಿಕ್ಕಲ್ ಶತಕ, ತಮಿಳುನಾಡಿಗೆ ಶಾಕ್ ನೀಡಿದ ಕರ್ನಾಟಕ!
ಇತಿಹಾಸ ಬರೆದ ಅಭಿಷೇಕ್ ಶರ್ಮಾ
ಅಭಿಷೇಕ್ ಶರ್ಮಾ ಅವರು ತಮ್ಮ ಟಿ20 ವೃತ್ತಿ ಜೀವನದಲ್ಲಿ 20ಕ್ಕೂ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದ್ದು ಇದು 7ನೇ ಬಾರಿ. ಇದರಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಪಂಜಾಬ್ ಪರ ಮೂರು ಬಾರಿ ಈ ಸಾಧನೆ ಮಾಡಿದ್ದಾರೆ. ಇನ್ನುಳಿದ ಮೂರು ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೂಡಿ ಬಂದಿವೆ. ಇನ್ನು 17 ಎಸೆತಗಳಲ್ಲಿ ಅರ್ಧಶತಕವನ್ನು ಭಾರತ ತಂಡದ ಪರ ಹೊಡೆದಿದ್ದಾರೆ. ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಅವರು ಅರ್ಧಶತಕವನ್ನು ಸಿಡಿಸಿದ್ದರು.
ಅಭಿಷೇಕ್ ಶರ್ಮಾ ಅವರು ಸಿಡಿಸಿದ ಈ 7 ಅರ್ಧಶತಕಗಳು 19ಕ್ಕಿಂತ ಕಡಿಮೆ ಎಸೆತಗಳಲ್ಲಿ ಗಳಿಸಿದ್ದಾರೆ. 2024ರ ಬಳಿಕ ಅವರು ಇಷ್ಟು ಅರ್ಧಶತಕಗಳನ್ನು ಬಾರಿಸಿದ್ದಾರೆ. ಬಂಗಾಳ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು 12 ಎಸೆತಗಳಲ್ಲಿ ಅರ್ಧಶತಕವನ್ನು ಬಾರಿಸಿದ್ದರು. ಆ ಮೂಲಕ ವಿಶ್ವದ ಮೂರನೇ ಜಂಟಿ ವೇಗದ ಅರ್ಧಶತಕವನ್ನು ಬಾರಿಸಿದ್ದರು.
SMAT 2025: 47 ಎಸೆತಗಳಲ್ಲಿ ಚೊಚ್ಚಲ ಟಿ20 ಶತಕ ಸಿಡಿಸಿದ ಸರ್ಫರಾಝ್ ಖಾನ್!
ತಮ್ಮ ಸ್ಪೋಟಕ ಅರ್ಧಶತಕ ಬಾರಿಸುವ ಮೂಲಕ ಅಭಿಷೇಕ್ ಶರ್ಮಾ, ವೆಸ್ಟ್ ಇಂಡೀಸ್ ಕ್ರಿಕೆಟ್ ದಂತಕಥೆ ಕೈರೊನ್ ಪೊಲಾರ್ಡ್ ಅವರ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅತಿ ಹೆಚ್ಚು ಅರ್ಧಶತಕಗಳ ದಾಖಲೆಯನ್ನು ಮುರಿದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್‌ನಲ್ಲಿ ಅಭಿಷೇಕ್ ಅವರ ಆರಂಭಿಕ ಪಾಲುದಾರ ಟ್ರಾವಿಸ್ ಹೆಡ್, ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
19 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಬ್ಯಾಟರ್ಸ್
ಅಣಭಿಷೇಜ್ ಶರ್ಮಾ : 7 (12,14,16,17,17,19)
ಕೈರೊನ್ ಪೊಲಾರ್ಡ್: 6 (14,17,17,18,19,19)
ಟ್ರಾವಿಸ್ ಹೆಡ್: 5 (16,16,17,18,19)
ಅನೆರುನ್ ಡೊನಾಲ್ಡ್: 4 (13,17,19,19)
ನಿಕೋಲಸ್ ಪೂರನ್: 4 (15,17,18,19)