ನವದೆಹಲಿ: ವೆಸ್ಟ್ ಇಂಡೀಸ್ ತಂಡವನ್ನು 2026ರ ಐಸಿಸಿ ಟಿ20 ವಿಶ್ವಕಪ್(ICC T20 World Cup 2026) ಟೂರ್ನಿಯ ಸೂಪರ್-8 ರ ಪಂದ್ಯದಲ್ಲಿ ಸೋಲಿಸುವ ಮೂಲಕ ಭಾರತ ತಂಡ (India's Probable Playing XI)ಸೆಮಿಫೈನಲ್‌ಗೆ ಪ್ರವೇಶ ಮಾಡಿದೆ. ಈ ಪಂದ್ಯ ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ವಿಂಡೀಸ್ ಎದುರು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 196 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡದ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ ಅಜೇಯ 97 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಭಾರತ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು.
ಭಾರತ ತಂಡ ಸೂಪರ್-8ರ ಹಂತದಲ್ಲಿಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಪಡೆದಿತ್ತು. ಎದುರಾಳಿ ಇಂಗ್ಲೆಂಡ್ ತಂಡ ಅಂತಿಮ ಎಂಟರ ಘಟ್ಟದಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದಿತ್ತು. ಆಂಗ್ಲರು ಸದ್ಯ ಅದ್ಭುತ ಫಾರ್ಮ್‌ನಲ್ಲಿದ್ದು, ಭಾರತವನ್ನು ಮಣಿಸುವ ತವಕದಲ್ಲಿದ್ದಾರೆ. ಆದರೆ, ಟೀಮ್ ಇಂಡಿಯಾದಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಸಮಸ್ಯೆಯನ್ನು ತಂದುಕೊಟ್ಟಿದೆ.
ವಿಂಡೀಸ್ ಎದುರು ಭಾರತ ತಡವನ್ನು ಗೆಲ್ಲಿಸಿದ ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ವಿಶೇಷ ಸಂದೇಶ!
ಅಭಿಷೇಕ್ ಶರ್ಮಾ ಔಟ್, ರಿಂಕು ಸಿಂಗ್ ಇನ್?
ಸೆಮಿಫೈನಲ್ ಪಂದ್ಯಕ್ಕೆ ಭಾರತ ತಂಡ, ತನ್ನ ಪ್ಲೇಯಿಂಗ್ Xiನಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಅವರು ಸದ್ಯ ವಿಶ್ವಾಸವನ್ನು ಕಳೆದುಕೊಂಡವಂತೆ ಕಾಣುತ್ತಿದ್ದಾರೆ, ಹಾಗಾಗಿ ಅವರಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಬಹುದು. ಹಾಗಾಗಿ ಸಂಜು ಸ್ಯಾಮ್ಸನ್ ಜೊತೆಗೆ ಇಶಾನ್ ಕಿಶನ್‌ಗೆ ಇನಿಂಗ್ಸ್ ಆರಂಭಿಸಲು ಅವಕಾಶ ನೀಡಬಹುದು. ಅಭಿಷೇಕ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿ ಮ್ಯಾಚ್ ಫಿನಿಷರ್ ರಿಂಕು ಸಿಂಗ್‌ಗೆ ಅವಕಾಶ ನೀಡಬಹುದು.
ಅಭಿಷೇಕ್ ಶರ್ಮಾ ಅವರನ್ನು ಕೂರಿಸುವುದು ನಿಜಕ್ಕೂ ಸರಳ ನಿರ್ಧಾರವಾಗಿಲ್ಲ. ಏಕೆಂದರೆ ಅವರು ತಂಡಕ್ಕಾಗಿ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಆದರೆ ಅವರ ಆತ್ಮವಿಶ್ವಾಸ ಮತ್ತು ಪಂದ್ಯದ ಮಹತ್ವವನ್ನು ಗಮನಿಸಿದರೆ, ಅವರಿಗೆ ಸ್ವಲ್ಪ ವಿರಾಮ ನೀಡುವುದು ಉತ್ತಮ ಎಂದು ಟೀಮ್ ಮ್ಯಾನೇಜ್‌ಮೆಂಟ್ ಚಿಂತಿಸುತ್ತಿದೆ. ಇದು ಸಂಭವಿಸಿದರೆ, ಭಾರತ ತಂಡ ತಿಲಕ್ ವರ್ಮಾ ಅವರನ್ನು ಮೂರನೇ ಕ್ರಮಾಂಕಕ್ಕೆ ಮರಳಿ ಕರೆಸಿಕೊಳ್ಳಬಹುದು.
ಟಿ20 ವಿಶ್ವಕಪ್ ಟೂರ್ನಿಯಲ್ಲಿನ ವೈಫಲ್ಯ; ಪಾಕ್ ಆಟಗಾರರಿಗೆ 16 ಲಕ್ಷ ರು ದಂಡ ವಿಧಿಸಿದ ಪಿಸಿಬಿ!
ಮೊಹಮ್ಮದ್ ಸಿರಾಜ್‌ಗೆ ಅವಕಾಶ?
ಇನ್ನು ಬೌಲಿಂಗ್ ವಿಭಾಗ ಕೂಡ ಸ್ಥಿರ ಪ್ರದರ್ಶನವನ್ನು ತೋರುವಲ್ಲಿ ವಿಫಲವಾಗುತ್ತಿದೆ. ಆದರೆ ಜಸ್‌ಪ್ರೀತ್ ಬುಮ್ರಾ ಅವರು ಪರಿಣಾಮಕಾರಿಯಾಗಿ ಬೌಲ್ ಮಾಡುತ್ತಿದ್ದರೆ, ಅಭಿಷೇಕ್ ಶರ್ಮಾ ಹೊಸ ಚೆಂಡಿನಲ್ಲಿ ವಿಕೆಟ್‌ಗಳನ್ನು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಇವರ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ಅವರನ್ನ ಕರೆಸಿಕೊಳ್ಳಬಹುದು. ಆದರೆ, ಮುಂದಿನ ಪಂದ್ಯ ಸೆಮಿಫೈನಲ್ ಆಗಿರುವ ಕಾರಣ, ಅದೇ ಬೌಲಿಂಗ್ ವಿಭಾಗವನ್ನು ಉಳಿಸಿಕೊಳ್ಳಲು ಟೀಮ್ ಮ್ಯಾನೇಜ್‌ಮೆಂಟ್ ಬಯಸುತ್ತಿದೆ.
ಇಂಗ್ಲೆಂಡ್ ವಿರುದ್ಧ ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ