ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಐಸಿಸಿ ಸೆಪ್ಟಂಬರ್‌ ತಿಂಗಳ ಪ್ರಶಸ್ತಿಗೆ ಭಾಜನರಾದ ಅಭಿಷೇಕ್‌ ಶರ್ಮಾ, ಸ್ಮೃತಿ ಮಂಧಾನಾ!

ಐಸಿಸಿ ಸೆಪ್ಟೆಂಬರ್ ತಿಂಗಳ ಐಸಿಸಿ ತಿಂಗಳ ಆಟಗಾರ ಹಾಗೂ ಆಟಗಾರ್ತಿ ಪ್ರಶಸ್ತಿಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಗುರುವಾರ ಘೋಷಿಸಿದೆ. ಪುರುಷರ ವಿಭಾಗದಲ್ಲಿ ಅಭಿಷೇಕ್ ಶರ್ಮಾ ವಿಜೇತರಾದರೆ, ಮಹಿಳಾ ವಿಭಾಗದಲ್ಲಿ ಭಾರತದ ಸ್ಮೃತಿ ಮಂಧಾನಾ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಐಸಿಸಿ ಸೆಪ್ಟಂಬರ್‌ ತಿಂಗಳ ಪ್ರಶಸ್ತಿಗೆ ಭಾಜನರಾದ ಅಭಿಷೇಕ್‌, ಮಂಧಾನಾ!

ಸೆಪ್ಟಂಬರ್‌ ತಿಂಗಳ ಐಸಿಸಿ ಆಟಗಾರ, ಆಟಗಾರ್ತಿ ಪ್ರಶಸ್ತಿಗೆ ಭಾಜನರಾದ ಅಭಿಷೇಕ್‌ ಶರ್ಮಾ, ಸ್ಮೃತಿ ಮಂಧಾನಾ. -

Profile Ramesh Kote Oct 16, 2025 5:57 PM

ದುಬೈ: ಭಾರತದ ಆಕ್ರಮಣಕಾರಿ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಸೆಪ್ಟೆಂಬರ್ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರೆ, ಮಹಿಳೆಯರ ವಿಭಾಗದಲ್ಲಿ ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ (Smriti Mandhana) ಅವರು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. 25ರ ಪ್ರಾಯದ ಆಟಗಾರ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಅವರು ಆಡಿದ್ದ ಏಳು ಪಂದ್ಯಗಳಲ್ಲಿ 200ರ ಪ್ರಭಾವಶಾಲಿ ಸ್ಟ್ರೈಕ್ ರೇಟ್‌ನಲ್ಲಿ 314 ರನ್ ಬಾರಿಸಿದ್ದರು. ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದರು ಹಾಗೂ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅಂದ ಹಾಗೆ ಫೈನಲ್‌ ಹಣಾಹಣಿಯಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಭಾರತ ಚಾಂಪಿಯನ್‌ ಆಗಿತ್ತು.

ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಈ ಸ್ವರೂಪದಲ್ಲಿ ಅವರು ಅತ್ಯಧಿಕ ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಆಟಗಾರರಾಗಿದ್ದಾರೆ. ಅವರು ತಂಡದ ಸಹ ಆಟಗಾರ ಕುಲ್ದೀಪ್ ಯಾದವ್ ಮತ್ತು ಜಿಂಬಾಬ್ವೆಯ ಬ್ರಿಯಾನ್ ಬೆನೆಟ್ ಅವರನ್ನು ಹಿಂದಿಕ್ಕಿ ಸೆಪ್ಟಂಬರ್‌ ತಿಂಗಳ ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದಿದ್ದಾರೆ.

IND vs AUS: ಆಸ್ಟ್ರೇಲಿಯಾದ ಜನತೆಗೆ ರೋಹಿತ್-ಕೊಹ್ಲಿ ನೋಡಲು ಇದು ಕೊನೆಯ ಅವಕಾಶ: ಪ್ಯಾಟ್ ಕಮ್ಮಿನ್ಸ್

ಈ ಬಗ್ಗೆ ಪ್ರತಿಕ್ರಿಯಿಸಿದ ಅಭಿಷೇಕ್‌ ಶರ್ಮಾ, "ಈ ಐಸಿಸಿ ಪ್ರಶಸ್ತಿಯನ್ನು ಗೆದ್ದಿರುವುದು ತುಂಬಾ ಸಂತೋಷವಾಗಿದೆ ಮತ್ತು ನಾನು ಗೆಲುವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡಿದ ಕೆಲವು ನಿರ್ಣಾಯಕ ಪಂದ್ಯಗಳಿಗಾಗಿ ಇದನ್ನು ನನಗೆ ನೀಡಲಾಗಿದೆ ಎಂದು ನನಗೆ ಸಂತೋಷವಾಗಿದೆ. ಅತ್ಯಂತ ಕಠಿಣ ಸಂದರ್ಭಗಳಲ್ಲಿಯೂ ಗೆಲ್ಲಬಲ್ಲ ತಂಡದ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಟಿ20 ಪಂದ್ಯಗಳಲ್ಲಿನ ನಮ್ಮ ಇತ್ತೀಚಿನ ದಾಖಲೆಯು ನಮ್ಮ ಅತ್ಯುತ್ತಮ ತಂಡದ ಸಂಸ್ಕೃತಿ ಮತ್ತು ಸಕಾರಾತ್ಮಕ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ," ಎಂದು ಹೇಳಿದ್ದಾರೆ.

ಮಹಿಳಾ ವಿಭಾಗದಲ್ಲಿ ಸ್ಮೃತಿ ಮಂಧಾನಾ

ಭಾರತದ ಆರಂಭಿಕ ಬ್ಯಾಟ್ಸ್‌ವುಮೆನ್‌ ಸ್ಮೃತಿ ಮಂಧಾನಾ ಮಹಿಳಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ತವರು ಏಕದಿನ ಸರಣಿಯಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದರು, ಮೂರು ಪಂದ್ಯಗಳಲ್ಲಿ 58, 117 ಮತ್ತು 125 ರನ್ ಗಳಿಸಿದರು. ಭಾರತೀಯ ಮಹಿಳಾ ತಂಡದ ಉಪನಾಯಕಿ ನಾಲ್ಕು ಏಕದಿನ ಪಂದ್ಯಗಳಲ್ಲಿ 77ರ ಸರಾಸರಿ ಮತ್ತು 135.68ರ ಸ್ಟ್ರೈಕ್ ರೇಟ್‌ನಲ್ಲಿ 308 ರನ್ ಗಳಿಸಿದರು. ಈ ಅವಧಿಯಲ್ಲಿ, ಅವರು ಏಕದಿನ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಗಳಿಸಿದ ಭಾರತೀಯ ಕ್ರಿಕೆಟಿಗರಾಗುವ ಮೂಲಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

IND vs AUS: ಮೊದಲನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI ವಿವರ!

ದಕ್ಷಿಣ ಆಫ್ರಿಕಾದ ತಜ್ಮಿನ್ ಬ್ರಿಟ್ಸ್ ಮತ್ತು ಪಾಕಿಸ್ತಾನದ ಸಿದ್ರಾ ಅಮೀನ್ ಕೂಡ ಈ ಪ್ರಶಸ್ತಿಗೆ ಅರ್ಹರಾಗಿದ್ದರು. "ಒಬ್ಬ ಆಟಗಾರ್ತಿಯಾಗಿ, ಅಂತಹ ಗೌರವವು ನಿಮ್ಮನ್ನು ಮುಂದೆ ಸಾಗಲು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೇರೇಪಿಸುತ್ತದೆ. ನನ್ನ ಗುರಿ ಯಾವಾಗಲೂ ನನ್ನ ಅತ್ಯುತ್ತಮ ಪ್ರದರ್ಶನ ನೀಡುವುದು ಮತ್ತು ತಂಡಕ್ಕಾಗಿ ಪಂದ್ಯಗಳನ್ನು ಗೆಲ್ಲುವುದು," ಎಂದು ಸ್ಮತಿ ಮಂಧಾನಾ ಶ್ಲಾಘಿಸಿದ್ದಾರೆ.