T20I Rankings: ಎರಡನೇ ಸ್ಥಾನದಲ್ಲಿಯೇ ಉಳಿದ ಅಭಿಷೇಕ್ ಶರ್ಮಾ, ವರುಣ್ ಚಕ್ರವರ್ತಿ!
T20I Rankings: ಇತ್ತೀಚಿಗೆ ಪರಿಷ್ಕೃತಗೊಂಡಿರುವ ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಕ್ರಮವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳಲ್ಲಿ ಎರಡನೇ ಸ್ಥಾನದಲ್ಲಿ ಉಳಿದಿದ್ದಾರೆ. ಆಲ್‌ರೌಂಡರ್ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಅಗ್ರಸ್ಥಾನದಲ್ಲಿದ್ದರೆ, ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ವೆಸ್ಟ್ ಇಂಡೀಸ್‌ನ ಅಕಿಲ್ ಹುಸೇನ್ ಅಗ್ರ ಸ್ಥಾನದಲ್ಲಿದ್ದಾರೆ.

ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ, ವರುಣ್ ಚಕ್ರವರ್ತಿಗೆ ಎರಡನೇ ಸ್ಥಾನ.

ನವದೆಹಲಿ: ಭಾರತದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ( Varun Chakravarthy) ಅವರು ಇತ್ತೀಚಿಗೆ ಪರಿಷ್ಕೃತಗೊಳಿಸಿರುವ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20I Rankings) ಕ್ರಮವಾಗಿ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳ ವಿಭಾಗಗಳಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಆಲ್‌ರೌಂಡರ್ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ 252 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದು, ನೇಪಾಳದ ದೀಪೇಂದ್ರ ಸಿಂಗ್ ಐರಿ (233 ಅಂಕ) ಮತ್ತು ಆಸ್ಟ್ರೇಲಿಯಾದ ಮಾರ್ಕಸ್ ಸ್ಟೋಯ್ನಿಸ್ (210 ಅಂಕ) ಮೂರನೇ ಸ್ಥಾನದಲ್ಲಿದ್ದಾರೆ.
ಬುಧವಾರ ಪರಿಷ್ಕೃತಗೊಂಡ ಶ್ರೇಯಾಂಕದಲ್ಲಿ ತಿಲಕ್ ವರ್ಮಾ ಮತ್ತು ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ 856 ರೇಟಿಂಗ್ ಅಂಕಗಳೊಂದಿಗೆ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್‌ನ ಫಿಲ್ ಸಾಲ್ಟ್ 815 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಅಭಿಷೇಕ್ 829, ತಿಲಕ್ ವರ್ಮಾ 804 ಮತ್ತು ಸೂರ್ಯಕುಮಾರ್ 739 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ.
NZ vs PAK: ಎರಡನೇ ಟಿ20ಐ ಪಂದ್ಯದಲ್ಲಿಯೂ ಪಾಕ್‌ಗೆ ಸೋಲಿನ ಬರೆ ಎಳೆದ ಕಿವೀಸ್!
ಇನ್ನು ಟಿ20ಐ ಬೌಲಿಂಗ್ ಶ್ರೇಯಾಂಕದಲ್ಲಿ ವೆಸ್ಟ್ ಇಂಡೀಸ್ ತಂಡದ ಅಕೀಲ್ ಹುಸೇನ್ (707) ಅವರು ವರುಣ್ ಚಕ್ರವರ್ತಿ (706) ಅವರಿಗಿಂತ ಒಂದು ಅಂಕವನ್ನು ಹೆಚ್ಚು ಹೊಂದಿರುವ ಕಾರಣ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನುಳಿದ ಸ್ಥಾನಗಳಲ್ಲಿ ಕ್ರಮವಾಗಿ ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ (705), ಶ್ರೀಲಂಕಾ ಸ್ಪಿನ್ನರ್ ವಾನಿಂದು ಹಸರಂಗ (700) ಇದ್ದಾರೆ. ಭಾರತದ ಸ್ಪಿನ್ನರ್ ರವಿ ಬಿಷ್ನೋಯ್ ಅವರು 674 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಇನ್ನು ಟೀಮ್ ಇಂಡಿಯಾ ಯುವ ವೇಗಿ ಅರ್ಷದೀಪ್ ಸಿಂಗ್ ಅವರು 653 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.
IPL 2025: ಸಿಎಸ್‌ಕೆ ಎದುರು ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ!
ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿ ಆಡಿದ್ದ ಬಳಿಕ ಜನವರಿ ಮತ್ತು ಫೆಬ್ರವರಿ ಬಳಿಕ ಭಾರತ ತಂಡ ಯಾವುದೇ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿಲ್ಲ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಯಾವುದೇ ಆಟಗಾರ ಟಿ20ಐ ಶ್ರೇಯಾಂಕದಲ್ಲಿ ಏರಿಕೆಯನ್ನು ಕಂಡಿಲ್ಲ. ಆದರೆ, ಪಾಕಿಸ್ತಾನ ವಿರುದ್ದದ ಆರಂಭಿಕ ಎರಡು ಟಿ20ಐ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ನ್ಯೂಜಿಲೆಂಡ್ ತಂಡ ಟಿಮ್ ಸೀಫರ್ಟ್, ಫಿನ್ ಆಲೆನ್ ಹಾಗೂ ಜಾಕೋಬ್ ಡಫಿ ಅವರು ಟಿ20ಐ ಶ್ರೇಯಾಂಕದಲ್ಲಿ ಮಹತ್ವದ ಬೆಳವಣಿಗೆಯನ್ನು ಕಂಡಿದ್ದಾರೆ.
ಪಾಕಿಸ್ತಾನ ವಿರುದ್ದದ ಟಿ20ಐ ಸರಣಿಯ ಆರಂಭಿಕ ಎರಡು ಪಂದ್ಯಗಳ್ಲಲಿ ಸೀಫರ್ಟ್ ಹಾಗೂ ಆಲೆನ್ ಅವರು ಸ್ಪೋಟಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದರು. ಡ್ಯೂನ್‌ಡಿನ್‌ನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಈ ಜೋಡಿ 66 ರನ್‌ಗಳ ಜೊತೆಯಾಟವನ್ನು ಆಡಿದ್ದರು. ಪಾಕ್ ನೀಡಿದ್ದ 136 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಕಿವೀಸ್ ಈ ಇಬ್ಬರ ಸ್ಪೋಟಕ ಬ್ಯಾಟಿಂಗ್ ಬಲದಿಂದ ಇನ್ನೂ 11 ಎಸೆತಗಳು ಬಾಕಿ ಇರುವಾಗಲೇ ಗೆಲುವು ಪಡೆಯಿತು.