ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಮೂರನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯದಲ್ಲಿ (IND vs AFG) ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಆಫ್ಘನ್ ನಾಯಕ ಇಬ್ರಾಹಿಂ ಝದ್ರಾನ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ ಹಾಗೂ ಎದುರಾಳಿ ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ, ಇದೀಗ ಕೊನೆಯ ಪಂದ್ಯವನ್ನೂ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ಎದುರು ನೋಡುತ್ತಿದೆ.
ಮೂರನೇ ಪಂದ್ಯಕ್ಕೂ ಮುನ್ನ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಹಲವು ಬದಲಾವನೆಗಳನ್ನು ಮಾಡಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಅದರಂತೆ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ಸಿಗಬಹುದೆಂದು ಭಾವಿಸಲಾಗಿತ್ತು. ಆದರೆ, ಟಾಸ್ ವೇಳೆ ಶ್ರೇಯಸ್ ಅಯ್ಯರ್ ಅವರು, ತಂಡದ ಆಡುವ ಬಳಗದಲ್ಲಿ ಕೇವಲ ಒಂದು ಬದಲಾವಣೆ ಮಾತ್ರ ಎಂದು ಹೇಳಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಮಿಂಚಿದ್ದ ಅರ್ಷದೀಪ್ ಸಿಂಗ್ ಅವರಿಗೆ ವಿಶ್ರಾಂತಿಯನ್ನು ನೀಡಲಾಗಿದ್ದು, ಅವರ ಸ್ಥಾನಕ್ಕೆ ಯಶ್ ಠಾಕೂರ್‌ಗೆ ಸ್ಥಾನವನ್ನು ನೀಡಲಾಗಿದೆ.
ಮುಂದಿನ 10 ಪಂದ್ಯಗಳಲ್ಲಿ ಅಭಿಷೇಕ್, ಸಂಜು ಇನಿಂಗ್ಸ್ ಆರಂಭಿಸಬೇಕೆಂದ ಎಸ್ ಬದ್ರಿನಾಥ್!
ಇನ್ನು ಅಫ್ಘಾನಿಸ್ತಾನ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ಗುಲ್ಬದ್ದಿನ್ ನೈಬ್ ಹಾಗೂ ನೂರ್ ಅಹ್ಮದ್ ಅವರು ಪ್ಲೇಯಿಂಗ್ Xiನಿಂದ ಹೊರ ನಡೆದಿದ್ದಾರೆ. ಇವರ ಸ್ಥಾನಕ್ಕೆ ಅಬ್ದುಲ್ಲಾ ಅಹಮದ್‌ಜಾಯ್ ಹಾಗೂ ನೂರ್ ಉಲ್ ರಹಮಾನ್ ಆಡುವ ಬಳಗಕ್ಕೆ ಬಂದಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ XI ವಿವರ
ಅಫ್ಘಾನಿಸ್ತಾನ : ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ಕೀಪರ್), ಸಿದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ನೂರ್ ಉಲ್ ರಹಮಾನ್, ಅಜಮತ್‌ವುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ಅಬ್ದುಲ್ಲಾ ಅಹ್ಮದ್‌ಜಾಯ್
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯಶ್ ಠಾಕೂರ್, ಜಸ್‌ಪ್ರೀತ್ ಬುಮ್ರಾ
ಟಿ20ಐ ಸರಣಿಯನ್ನು ಗೆದ್ದಿದ್ದ ಭಾರತ
ಭಾರತ ತಂಡ ಆರಂಭಿಕ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಟಿ20ಐ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿತ್ತು. ಈ ಎರಡೂ ಪಂದ್ಯಗಳಲ್ಲಿ ಭಾರತ ತಂಡ, ತಲಾ 7 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆಫ್ಘನ್ ತಂಡ ಈ ಎರಡರಲ್ಲಿಯೂ ಮೊದಲು ಬ್ಯಾಟ್ ಮಾಡಿ, 150ಕ್ಕೂ ಹೆಚ್ಚಿನ ಸಾಧಾರಣ ಗುರಿಯನ್ನು ನೀಡಿತ್ತು. ಭಾರತ ತಂಡ, ಈ ಗುರಿಯನ್ನು ಮೂರು ವಿಕೆಟ್‌ಗಳನ್ನು ಕಳೆದುಕೊಂಡು ತಲುಪಿತ್ತು.