ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿರಾಟ್‌ ಕೊಹ್ಲಿ ಔಟ್‌; ಭಾರತ ತಂಡದ ಸಾರ್ವಕಾಲಿಕ ಟೆಸ್ಟ್‌ ಪ್ಲೇಯಿಂಗ್‌ XI ಆರಿಸಿದ ಅಜಿಂಕ್ಯ ರಹಾನೆ!

ಮಾಜಿ ಕ್ರಿಕೆಟಿಗ ಅಜಿಂಕ್ಯ ರಹಾನೆ ಅವರು ಭಾರತೀಯ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್‌ ಪ್ಲೇಯಿಂಗ್‌ XI ಅನ್ನು ಆರಿಸಿದ್ದಾರೆ. ಆದರೆ, ಅವರು ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಹಾಗೂ ಜಸ್‌ಪ್ರೀತ್‌ ಬುಮ್ರಾ ಅವರನ್ನು ಕೈಬಿಟ್ಟು ಅಚ್ಚರಿ ಮೂಡಿಸಿದ್ದಾರೆ. ಅವರು ಈ ತಂಡಕ್ಕೆ ಎಂಎಸ್‌ ಧೋನಿಯನ್ನು ನಾಯಕನನ್ನಾಗಿ ನೇಮಕ ಮಾಡಿದ್ದಾರೆ.

ಸಾರ್ವಕಾಲಿಕ ಭಾರತದ ಟೆಸ್ಟ್‌ ಪ್ಲೇಯಿಂಗ್‌ XI ಆರಿಸಿದ ಅಜಿಂಕ್ಯ ರಹಾನೆ!

ಭಾರತದ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್‌ ಪ್ಲೇಯಿಂಗ್‌ XI ಆರಿಸಿದ ರಹಾನೆ. -

Profile
Ramesh Kote Oct 25, 2026 2:20 PM

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಅಜಿಂಕ್ಯ ರಹಾನೆ (Ajinkya Rahane) ಅವರು ತಮ್ಮ ನೆಚ್ಚಿನ ಭಾರತ ತಂಡದ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್‌ ಪ್ಲೇಯಿಂಗ್‌ XI ಅನ್ನು ಆರಿಸಿದ್ದಾರೆ. ಆದರೆ, ಅವರು ಆಧುನಿಕ ಕ್ರಿಕೆಟ್‌ ದಿಗ್ಗಜರಾದ ವಿರಾಟ್‌ ಕೊಹ್ಲಿ (Virat Kohli), ರೋಹಿತ್‌ ಶರ್ಮಾ ಹಾಗೂ ಜಸ್‌ಪ್ರೀತ್‌ ಬುಮ್ರಾ ಅವರನ್ನು ಕೈಬಿಡುವ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರನ್ನು ನಾಲ್ಕನೇ ಕ್ರಮಾಂಕಕ್ಕೆ ಆಯ್ಕೆ ಮಾಡಿದ್ದು, ಮೊಹಮ್ಮದ್‌ ಶಮಿ, ಇಶಾಂತ್‌ ಶರ್ಮಾ ಹಾಗೂ ಭುವನೇಶ್ವರ್‌ ಕುಮಾರ್‌ ಅವರನ್ನು ವೇಗದ ಬೌಲಿಂಗ್‌ಗೆ ಆಯ್ಕೆ ಮಾಡಿದ್ದಾರೆ.

ಸೋನಿ ಸ್ಪೋರ್ಟ್ಸ್‌ ವಾಹಿನಿಯಲ್ಲಿ ಸಂಭಾಷಣೆ ನಡೆಸುವ ವೇಳೆ ಅಜಿಂಕ್ಯ ರಹಾನೆ ಈ ತಂಡವನ್ನು ಕಟ್ಟಿದ್ದಾರೆ. ಅವರು ಆರಂಭಿಕ ಬ್ಯಾಟ್ಸ್‌ಮನ್‌ಗಳ ಸ್ಥಾನಕ್ಕೆ ಶಿಖರ್‌ ಧವನ್‌ ಮತ್ತು ಮುರಳಿ ವಿಜಯ್‌ ಅವರನ್ನು ಆಯ್ಕೆ ಮಾಡಿದ್ದು, ರೋಹಿತ್‌ ಶರ್ಮಾ ಅವರನ್ನು ಕೈ ಬಿಟ್ಟಿದ್ದಾರೆ. ಇನ್ನು ದಿಗ್ಗಜ ರಾಹುಲ್‌ ದ್ರಾವಿಡ್‌ ಅವರನ್ನು ಮೂರನೇ ಕ್ರಮಾಂಕಕ್ಕೆ ರಹಾನೆ ಆರಿಸಿದ್ದಾರೆ.

ನಾಲ್ಕನೇ ಕ್ರಮಾಂಕಕ್ಕೆ ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಹಾಗೂ ಐದನೇ ಕ್ರಮಾಂಕಕ್ಕೆ ತನ್ನನ್ನೇ ರಹಾನೆ ಆರಿಸಿದ್ದಾರೆ. ಇನ್ನು ನಾಯಕ ಹಾಗೂ ವಿಕೆಟ್‌ ಕೀಪರ್‌ ಸ್ಥಾನಕ್ಕೆ ಎಂಎಸ್‌ ಧೋನಿಗೆ ಅವಕಾಶವನ್ನು ನೀಡಲಾಗಿದೆ. ಇನ್ನು ಆಲ್‌ರೌಂಡರ್‌ಗಳ ಸ್ಥಾನಕ್ಕೆ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್‌ ಅಶ್ವಿನ್‌ ಅವರನ್ನು ಆಯ್ಕೆ ಮಾಡಲಾಗಿದ್ದು, ಭುವನೇಶ್ವರ್‌ ಕುಮಾರ್‌, ಮೊಹಮ್ಮದ್‌ ಶಮಿ ಹಾಗೂ ಇಶಾಂತ್‌ ಶರ್ಮಾ ಅವರನ್ನು ವೇಗದ ಬೌಲಿಂಗ್‌ಗೆ ಆರಿಸಲಾಗಿದೆ.

IND vs NZ: ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್‌ ಕೊಹ್ಲಿ!

ರಹಾನೆ ತಂಡದಲ್ಲಿ ಧೋನಿಗೆ ಸ್ಥಾನ, ಕೊಹ್ಲಿ–ರೋಹಿತ್‌ಗೆ ಕೊಕ್

ಅಜಿಂಕ್ಯ ರಹಾನೆ ತಮ್ಮ ಸಾರ್ವಕಾಲಿಕ ಅತ್ಯುತ್ತಮ ಟೆಸ್ಟ್ ತಂಡವನ್ನು ಆಯ್ಕೆ ಮಾಡುವಾಗ ಭಾರತದ ಯಶಸ್ವಿ ಟೆಸ್ಟ್ ತಂಡಗಳಲ್ಲಿ ಆಡಿದ್ದ ಹಲವು ಮಾಜಿ ಸಹ ಆಟಗಾರರಿಗೆ ಮಣೆ ಹಾಕಿದ್ದಾರೆ. ತಮ್ಮನ್ನು ಮಧ್ಯಮ ಕ್ರಮಾಂಕದಲ್ಲಿ ಸೇರಿಸಿಕೊಂಡಿರುವ ರಹಾನೆ, ನಾಯಕ ಹಾಗೂ ವಿಕೆಟ್‌ಕೀಪರ್ ಆಗಿದ್ದ ಎಂ.ಎಸ್. ಧೋನಿಗೂ ತಂಡದಲ್ಲಿ ಸ್ಥಾನ ನೀಡಿದ್ದಾರೆ.

ಧೋನಿ ಆಯ್ಕೆ ರಹಾನೆ ಪಾಲಿಗೆ ವಿಶೇಷ ಮಹತ್ವ ಹೊಂದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರಹಾನೆಗೆ ಮೊದಲ ನಾಯಕನಾಗಿದ್ದವರು ಧೋನಿ. ಹೀಗಾಗಿ ತಮ್ಮ ಸಾರ್ವಕಾಲಿಕ ತಂಡದ ನಾಯಕತ್ವದ ಜವಾಬ್ದಾರಿಯನ್ನೂ ಧೋನಿಗೆ ನೀಡಿದ್ದಾರೆ.

ಆರಂಭಿಕರಾಗಿ ಮುರಳಿ ವಿಜಯ್ ಮತ್ತು ಶಿಖರ್ ಧವನ್ ಅವರನ್ನು ಆಯ್ಕೆ ಮಾಡಿದ್ದಾರೆ. ಈ ಇಬ್ಬರೂ ಆಟಗಾರರು ರಹಾನೆ ಅವರೊಂದಿಗೆ ಭಾರತ ತಂಡದಲ್ಲಿ ಆಡಿದ್ದಾರೆ. ಮೂರನೇ ಮತ್ತು ನಾಲ್ಕನೇ ಕ್ರಮಾಂಕಗಳಲ್ಲಿ ರಾಹುಲ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅವರಿಗೆ ಸ್ಥಾನ ಕಲ್ಪಿಸಿದ್ದಾರೆ. ಆದರೆ, ಕಳೆದ ಒಂದು ದಶಕದಲ್ಲಿ ಭಾರತದ ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ತಂಡದಲ್ಲಿ ಸ್ಥಾನ ಸಿಗದಿರುವುದು ಅಚ್ಚರಿ ತಂದಿದೆ.

ಟಿ20ಐ ಕ್ರಿಕೆಟ್‌ನಲ್ಲಿ ತಿಲಕ್ ವರ್ಮಾ ವಿಶ್ವದಾಖಲೆ: ಏಕೈಕ ವರ್ಷದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ!

ಬೌಲಿಂಗ್ ವಿಭಾಗದಲ್ಲಿ ಬುಮ್ರಾಗೆ ಸ್ಥಾನವಿಲ್ಲ

ರಹಾನೆ ಅವರ ವೇಗದ ಬೌಲಿಂಗ್ ಆಯ್ಕೆಯೂ ಚರ್ಚೆಗೆ ಕಾರಣವಾಗಿದೆ. ಭಾರತದ ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರನ್ನು ಕೈಬಿಟ್ಟು, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ ಅವರಿಗೆ ಸ್ಥಾನ ನೀಡಿದ್ದಾರೆ.

2010ರ ದಶಕದ ಕೊನೆಯ ಭಾಗದಲ್ಲಿ ಭಾರತದ ಬಲಿಷ್ಠ ವೇಗದ ಬೌಲಿಂಗ್ ಪಡೆಯನ್ನು ರೂಪಿಸುವಲ್ಲಿ ಈ ಮೂವರು ಪ್ರಮುಖ ಪಾತ್ರ ವಹಿಸಿದ್ದರು. ವಿಶೇಷವಾಗಿ ವಿದೇಶಿ ನೆಲದಲ್ಲಿ ಟೆಸ್ಟ್ ಪಂದ್ಯಗಳನ್ನು ಗೆಲ್ಲುವಲ್ಲಿ ಅವರ ಪ್ರದರ್ಶನ ತಂಡಕ್ಕೆ ನೆರವಾಗಿತ್ತು.

ಇನ್ನೊಂದೆಡೆ, ಬುಮ್ರಾ ಇತ್ತೀಚಿನ ವರ್ಷಗಳಲ್ಲಿ ಭಾರತದ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನಲ್ಲಿಯೂ ಅವರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಆದರೂ, ರಹಾನೆ ತಮ್ಮ ಅಂತಾರಾಷ್ಟ್ರೀಯ ಅಥವಾ ದೇಶಿ ಕ್ರಿಕೆಟ್‌ನಲ್ಲಿ ಒಟ್ಟಿಗೆ ಆಡಿದ್ದ ಆಟಗಾರರನ್ನಷ್ಟೇ ಪರಿಗಣಿಸಿರುವುದು ಈ ಆಯ್ಕೆಗಳಿಗೆ ಪ್ರಮುಖ ಹಿನ್ನೆಲೆಯಾಗಿದೆ.

ಸ್ಪಿನ್ ಬೌಲಿಂಗ್ ಹಾಗೂ ಆಲ್‌ರೌಂಡ್ ಆಯ್ಕೆಗಳಿಗಾಗಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಒಟ್ಟಿನಲ್ಲಿ, ತಮ್ಮ ಕ್ರಿಕೆಟ್ ಜೀವನದ ವಿವಿಧ ಹಂತಗಳಲ್ಲಿ ಜೊತೆ ಆಡಿದ್ದ ಹಲವು ಆಟಗಾರರನ್ನು ಒಳಗೊಂಡ ತಂಡವನ್ನು ರಹಾನೆ ಆಯ್ಕೆ ಮಾಡಿದ್ದಾರೆ.

ಅಜಿಂಕ್ಯ ರಹಾನೆ ಅವರ ಸಾರ್ವಕಾಲಿಕ ಭಾರತದ ಟೆಸ್ಟ್ ತಂಡ: ಮುರಳಿ ವಿಜಯ್, ಶಿಖರ್ ಧವನ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ಅಜಿಂಕ್ಯ ರಹಾನೆ, ಎಂ.ಎಸ್. ಧೋನಿ (ನಾಯಕ, ವಿಕೆಟ್‌ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ