ನವದೆಹಲಿ: ಇಂಗ್ಲೆಂಡ್ ವಿರುದ್ಧ ಆಶಸ್ ಟೆಸ್ಟ್ (Ashes) ಸರಣಿಯ ಮೊದಲನೇ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್ XI ಅನ್ನು (Australia Playing XI) ಪ್ರಕಟಿಸಲಾಗಿದ್ದು, ಆರಂಭಿಕ ಬ್ಯಾಟ್ಸ್‌ಮನ್ ಜೇಕ್ ವೆದರಾಲ್ಡ್ (Jake Weatherald) ಹಾಗೂ ಜೇಕ್ ಡಗೆಟ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ. ನಿಯಮಿತ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದು, ಹಂಗಾಮಿ ನಾಯಕ ಸ್ಟೀವನ್ ಸ್ಮಿತ್ ಅವರು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ ತಂಡ ತನ್ನ ಅಗ್ರ ಹಾಗೂ ಮಧ್ಯಮ ಕ್ರಮಾಂಕದಲ್ಲಿ ತನ್ನ ಸಂಯೋಜನೆಯನ್ನು ಉತ್ತಮಪಡಿಸಿಕೊಂಡಿದೆ.
ಆಲ್‌ರೌಂಡರ್ ಬೇ ವೆಬ್‌ಸ್ಟರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹಿರಿಯ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜ ಅವರ ಜೊತೆಗೆ ಜೇಕ್ ವೆದರಾಲ್ಡ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಆಡಲಿದ್ದಾರೆ. ಇವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಲಾಬುಶೇನ್ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದರು. ಮಾರ್ನಸ್ ಲಾಬುಶೇನ್ ಅವರಿಂದ ಕ್ಯಾಮೆರಾನ್ ಗ್ರೀನ್ ಆರನೇ ಕ್ರಮಾಂಕಕ್ಕೆ ಇಳಿದಿದ್ದಾರೆ. ಇದರ ಪರಿಣಾಮ ಬೇ ವೆಬ್‌ಸ್ಟರ್ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ.
IND vs SA: ಗೌತಮ್ ಗಂಭೀರ್ ಕೋಚಿಂಗ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಎಬಿ ಡಿ ವಿಲಿಯರ್ಸ್!
ಜೇಕ್ ಡಗೆಸ್ಟ್‌ಗೆ ಚೊಚ್ಚಲ ಅವಕಾಶ
ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿರುವ ಜಾಶ್ ಹೇಝಲ್‌ವುಡ್ ಅವರ ಸ್ಥಾನದಲ್ಲಿ ಬ್ರೆಂಡನ್ ಡಗೆಟ್ ಅವರು ಆಡುತ್ತಿದ್ದಾರೆ. ಆದರೆ, ಮಾರ್ನಸ್ ಲಾಬುಶೇನ್ ಅವರನ್ನು ಇನಿಂಗ್ಸ್ ಆರಂಭಿಸಲು ಅವಕಾಶ ನೀಡಲಾಗುವುದೇ? ಅಥವಾ ವಿಶೇಷ ಬ್ಯಾಟ್ಸ್‌ಮನ್ ಆಗಿ ಆಡಿಸಲಾಗುತ್ತದೆಯೇ ಎಂದು ಕಾದು ನೋಡಬೇಕಾಗುತ್ತದೆ. ಹಂಗಾಮಿ ನಾಯಕ ಸ್ಟೀವನ್ ಸ್ಮಿತ್ ಅವರು ಆಸ್ಟ್ರೇಲಿಯಾ ಪ್ಲೇಯಿಂಗ್ XI ಅನ್ನು ಖಚಿತಪಡಿಸಿದ್ದಾರೆ. ಪರ್ತ್ ಟೆಸ್ಟ್ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.
ಕುರ್ಟಿಸ್ ಪ್ಯಾಟರ್ಸನ್ ಹಾಗೂ ಜೇ ರಿಚರ್ಡ್ಸನ್ ಅವರ ಬಳಿಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಮೊದಲ ಜೋಡಿ ಎಂಬ ಕೀರ್ತಿಗೆ ವೆದರಾಲ್ಡ್ ಹಾಗೂ ಡಕೆಟ್ ಪಾತ್ರರಾಗಿದ್ದಾರೆ. ಜೇ ರಿಚರ್ಡ್ಸನ್ ಹಾಗೂ ಕುರ್ಟಿಸ್ ಅವರು 2019ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
ಮಾರ್ನಸ್ ಲಾಬುಶೇನ್ ಅವರು ಕ್ವೀನ್ಸ್‌ಲ್ಯಾಂಡ್ ಪರ ಅತ್ಯುತ್ತಮ ದೇಶಿ ಕ್ರಿಕೆಟ್ ಆಡಿದ್ದಾರೆ. ಇದೀಗ ಅವರ ಫಾರ್ಮ್ ಆಸ್ಟ್ರೇಲಿಯಾ ತಂಡಕ್ಕೆ ನೆರವು ನೀಡಬಹುದು. ಲಾಬುಶೇನ್ ಆಗಮನದಿಂದ ಕ್ಯಾಮೆರಾನ್ ಗ್ರೀನ್ ಆರನೇ ಕ್ರಮಾಂಕಕ್ಕೆ ಸ್ಥಳಾಂತರವಾಗಿದ್ದಾರೆ. ನಾಯಕ ಸ್ಟೀವನ್ ಸ್ಮಿತ್ ನಾಲ್ಕನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಲಿದ್ದಾರೆ.
ಇಂಗ್ಲೆಂಡ್ ಕೂಡ ಮೊದಲನೇ ಟೆಸ್ಟ್‌ಗೆ 12 ಸದಸ್ಯರ ತಂಡವನ್ನು ಪ್ರಕಟಿಸಿದೆ. ಜೋಫ್ರಾ ಆರ್ಚರ್ ಹಾಗೂ ಮಾರ್ಕ್‌ವಡ್ ಅವರು ತಂಡದ ಪ್ಲೇಯಿಂಗ್XIನಲ್ಲಿಆಡಲಿದ್ದಾರೆ.
ಮೊದಲನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ಪ್ಲೇಯಿಂಗ್ XI
ಜೇಕ್ ವೆದರಾಲ್ಡ್, ಉಸ್ಮಾನ್ ಖವಾಜ, ಮಾರ್ನಸ್ ಲಾಬುಶೇನ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕೇರಿ, ಮಿಚೆಲ್ ಸ್ಟಾರ್ಕ್, ನೇಥನ್ ಲಯಾನ್, ಸ್ಕಾಟ್ ಬೋಲೆಂಡ್, ಬ್ರೆಂಡನ್ ಡಗೆಟ್
ಮೊದಲನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ
ಬೆನ್ ಸ್ಟೋಕ್ಸ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಝ್ಯಾಕ್ ಕ್ರಾವ್ಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜೇಮಿ ಸ್ಮಿತ್ (ವಿಕೆಟ್ ಕೀಪರ್), ಮಾರ್ಕ್‌ವುಡ್