ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup: ಟಿ20ಐ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆ ಬರೆಯುವ ಸನಿಹದಲ್ಲಿ ಅರ್ಷದೀಪ್‌ ಸಿಂಗ್‌!

ಭಾರತ ತಂಡದ ಯುವ ವೇಗಿ ಅರ್ಷದೀಪ್‌ ಸಿಂಗ್ ಮಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ದೊಡ್ಡ ದಾಖಲೆಯನ್ನು ಬರೆಯುವ ಸನಿಹದಲ್ಲಿದ್ದಾರೆ. ಅವರು ಇದುವರೆಗೆ 63 ಟಿ20ಐ ಪಂದ್ಯಗಳಲ್ಲಿ 99 ವಿಕೆಟ್ ಪಡೆದಿದ್ದಾರೆ. ಈ ಟೂರ್ನಿಯಲ್ಲಿ ಒಂದೇ ಒಂದು ವಿಕೆಟ್ ಪಡೆದರೆ, ಭಾರತ ಪರ ಟಿ20ನಲ್ಲಿ 100 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆಯನ್ನು ಬರೆಯಲಿದ್ದಾರೆ.

ದೊಡ್ಡ ದಾಖಲೆ ಬರೆಯುವ ಸನಿಹದಲ್ಲಿ ಅರ್ಷದೀಪ್‌ ಸಿಂಗ್‌!

ಟಿ20ಐ ಕ್ರಿಕೆಟ್‌ನಲ್ಲಿ ನೂತನ ದಾಖಲೆಯ ಸನಿಹದಲ್ಲಿ ಅರ್ಷದೀಪ್‌ ಸಿಂಗ್‌.

Profile Ramesh Kote Aug 9, 2025 8:56 PM

ನವದೆಹಲಿ: ಬಹುನಿರೀಕ್ಷಿತ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿಯು ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್‌ನಲ್ಲಿ ಯುಎಇಯಲ್ಲಿ ಆರಂಭವಾಗಲಿದೆ. ಈ ಟೂರ್ನಿಯು ಸೆಪ್ಟೆಂಬರ್ 9 ರಿಂದ ಸೆಪ್ಟೆಂಬರ್ 28 ರವರೆಗೆ ಯುಎಇಯಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ದುಬೈ ಮತ್ತು ಅಬುಧಾಬಿಯಲ್ಲಿ ನಡೆಯಲಿವೆ. ಭಾರತ ತಂಡ (India) ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲನೇ ಪಂದ್ಯವನ್ನು ಆಡುವ ಮೂಲಕ ಈ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಟೂರ್ನಿಯಲ್ಲಿ ಭಾರತ ತಂಡದಯುವ ವೇಗಿ ಅರ್ಷದೀಪ್‌ ಸಿಂಗ್‌ (Arshdeep Singh) ಟಿ20ಐ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಲಿದ್ದಾರೆ.

ಭಾರತ ತಂಡದ ವೇಗದ ಬೌಲರ್ ಅರ್ಷದೀಪ್‌ ಸಿಂಗ್ ದೀರ್ಘಕಾಲದವರೆಗೆ ಟಿ20ಐ ಸ್ವರೂಪದಲ್ಲಿ ಭಾರತದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದಾರೆ. ಅವರು ಟಿ20ಐ ಯಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದಾರೆ. 2024 ರಲ್ಲಿ ಭಾರತ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಅರ್ಷದೀಪ್‌ ಸಿಂಗ್‌ ಕೂಡ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಏಷ್ಯಾ ಕಪ್‌ ಟೂರ್ನಿಯ ಭಾರತ ತಂಡಕ್ಕೆ ಅವರ ಆಯ್ಕೆಯೂ ಬಹುತೇಕ ಖಚಿತವಾಗಿದೆ. ಈ ಟೂರ್ನಿಯಲ್ಲಿ ಅವರು ಒಂದು ದೊಡ್ಡ ದಾಖಲೆಯನ್ನು ಬರೆಯಲಿದ್ದಾರೆ.

Rishabh Pant: ಏಷ್ಯಾ ಕಪ್‌ ಟೂರ್ನಿಗೂ ಮುನ್ನ ಭಾರತ ತಂಡಕ್ಕೆ ದೊಡ್ಡ ತಲೆ ನೋವು!

100ನೇ ಟಿ2ಐ ವಿಕೆಟ್‌ ಸನಿಹದಲ್ಲಿ ಅರ್ಷದೀಪ್‌ ಸಿಂಗ್‌

ವೇಗದ ಬೌಲರ್ ಅರ್ಷ್‌ದೀಪ್ ಸಿಂಗ್ ಇದುವರೆಗೆ ಭಾರತ ಪರ 63 ಟಿ20ಐ ಪಂದ್ಯಗಳನ್ನು ಆಡಿದ್ದಾರೆ, ಅದರಲ್ಲಿ ಅವರು 99 ವಿಕೆಟ್‌ಗಳನ್ನು ಪಡೆದಿದ್ದಾರೆ. ಅರ್ಷ್‌ದೀಪ್ ಟಿ20ಐ ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್. ಅರ್ಷ್‌ದೀಪ್ ನಂತರ ಯುಜ್ವೇಂದ್ರ ಚಹಲ್ 96 ವಿಕೆಟ್‌ಗಳನ್ನು ಪಡೆದಿದ್ದಾರೆ. ಏಷ್ಯಾ ಕಪ್‌ ಟೂರ್ನಿಯಲ್ಲಿ ಅರ್ಷ್‌ದೀಪ್ ಸಿಂಗ್‌ ಒಂದು ವಿಕೆಟ್ ಪಡೆದರೂ, ಭಾರತ ಪರ ಟಿ20ಐ ನಲ್ಲಿ 100 ವಿಕೆಟ್‌ಗಳನ್ನು ಪಡೆದ ಮೊದಲ ಬೌಲರ್ ಆಗಲಿದ್ದಾರೆ. ಇಲ್ಲಿಯವರೆಗೆ, ಯಾವುದೇ ಭಾರತೀಯ ಆಟಗಾರ ಟಿ20ಐನಲ್ಲಿ 100 ವಿಕೆಟ್‌ಗಳನ್ನು ಪಡೆದಿಲ್ಲ.

26ರ ಪ್ರಾಯದ ಅರ್ಷದೀಪ್‌ ಸಿಂಗ್ ಭಾರತ ತಂಡದ ಪರ 63 ಟಿ20ಐ ಪಂದ್ಯಗಳು ಮತ್ತು 9 ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇತ್ತೀಚೆಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಭಾರತ ತಂಡದಲ್ಲಿ ಅರ್ಷದೀಪ್‌ ಸಿಂಗ್‌ ಇದ್ದರು. ಆದರೆ, ಅವರು ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಆದಾಗ್ಯೂ, ಅವರು ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಸನಿಹದಲ್ಲಿದ್ದಾರೆ. ಆದರೆ, ಗಾಯದಿಂದಾಗಿ ಅವರು ತಮ್ಮ ಚೊಚ್ಚಲ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಅವರ ಬದಲು ಅನ್ಶುಲ್‌ ಕಾಂಬೋಜ್‌ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

Asia Cup 2025: ಏಷ್ಯಾ ಕಪ್‌ಗೆ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಆಯ್ಕೆ ಸಾಧ್ಯತೆ!

2025ರ ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ತಂಡದ ವೇಳಾಪಟ್ಟಿ

ಮೊದಲನೇ ಪಂದ್ಯ

ಭಾರತ vs ಯುಎಇ

ಸೆಪ್ಟಂಬರ್‌ 10

ದುಬೈ

ಸಂಜೆ 07:30ಕ್ಕೆ

ಎರಡನೇ ಪಂದ್ಯ

ಭಾರತ vs ಪಾಕಿಸ್ತಾನ

ಸೆಪ್ಟಂಬರ್‌ 14

ದುಬೈ

ಸಂಜೆ 07:30ಕ್ಕೆ

ಮೂರನೇ ಪಂದ್ಯ

ಭಾರತ vs ಒಮನ್‌

ಸೆಪ್ಟಂಬರ್‌ 19

ಅಬುಧಾಬಿ

ಸಂಜೆ 07:30ಕ್ಕೆ