ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup: ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಸೂರ್ಯಕುಮಾರ್‌ ಯಾದವ್‌ಗೆ ದಂಡ!

2025ರ ಏಷ್ಯಾ ಕಪ್‌ ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ಟೀಮ್‌ ಇಂಡಿಯಾ ನಾಯಕ ಎರಡೂ ದೇಶಗಳ ನಡುವಣ ಗಡಿ ಭಾಗದಲ್ಲಿ ಉಂಟಾಗಿದ್ದ ಉದ್ವಿಗ್ನತೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂರ್ಯಕುಮಾರ್‌ ಯಾದವ್‌ಗೆ ದಂಡವನ್ನು ವಿಧಿಸಲಾಗಿದೆ.

ಪಾಕ್‌ ಪಂದ್ಯಕ್ಕೂ ಮುನ್ನ ಸೂರ್ಯಕುಮಾರ್‌ ಯಾದವ್‌ಗೆ ದಂಡ!

ಭಾರತದ ನಾಯಕ ಸೂರ್ಯಕುಮಾರ್‌ ಯಾದವ್‌ಗೆ ದಂಡ ವಿಧಿಸಿದ ಐಸಿಸಿ. -

Profile Ramesh Kote Sep 26, 2025 9:36 PM

ನವದೆಹಲಿ: ಪ್ರಸ್ತುತ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿಯ ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಪಂದ್ಯದ ಸಮಯದಲ್ಲಿ ಭುಗಿಲೆದ್ದ ವಿವಾದಕ್ಕೆ ಸಂಬಂಧಿಸಿದಂತೆ ಐಸಿಸಿ ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಎರಡೂ ತಂಡಗಳ ಕ್ರಿಕೆಟ್ ಮಂಡಳಿಗಳು ಐಸಿಸಿಗೆ ದೂರುಗಳನ್ನು ಸಲ್ಲಿಸಿದ್ದು, ಇದರ ಪರಿಣಾಮವಾಗಿ ಭಾರತೀಯ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಪಂದ್ಯದ ಶುಲ್ಕದ ಶೇಕಡಾ 30 ರಷ್ಟು ದಂಡವನ್ನು ವಿಧಿಸಲಾಗಿದೆ. ಏಷ್ಯಾ ಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಲೀಗ್ ಹಂತದ ಪಂದ್ಯದ ನಂತರ, ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಈ ಗೆಲುವನ್ನು ಪೆಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತ ಕುಟುಂಬಗಳಿಗೆ ಮತ್ತು ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಿದ್ದರು.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಐಸಿಸಿಗೆ ದೂರು ನೀಡಿತ್ತು. ಪಂದ್ಯದ ನಂತರ ಭಾರತೀಯ ನಾಯಕ ಐಸಿಸಿ ನಿಯಮಗಳನ್ನು ಉಲ್ಲಂಘಿಸುವ ರಾಜಕೀಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿತ್ತು. ಈ ದೂರಿಗೆ ಸಂಬಂಧಿಸಿದಂತೆ ಸೂರ್ಯಕುಮಾರ್ ಯಾದವ್ ಗುರುವಾರ ಐಸಿಸಿ ಕಚೇರಿಗೆ ಭೇಟಿ ನೀಡಿದ್ದರು. ಆದಾಗ್ಯೂ, ಅವರ ವಿರುದ್ಧದ ನಿರ್ಧಾರವನ್ನು ಶುಕ್ರವಾರ ಪ್ರಕಟಿಸಲಾಯಿತು. ಭವಿಷ್ಯದಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಅವರಿಗೆ ಸೂಚನೆಯನ್ನು ನೀಡಲಾಗಿದೆ.

IND vs SL: ಶ್ರೀಲಂಕಾ ಎದುರು ಟಾಸ್‌ ಗೆದ್ದುಬೌಲಿಂಗ್‌ ಆಯ್ದುಕೊಂಡ ಶ್ರೀಲಂಕಾ, ಭಾರತ ಮೊದಲ ಬ್ಯಾಟಿಂಗ್‌!

ಪಾಕಿಸ್ತಾನ ಆಟಗಾರರಿಗೂ ಛೀಮಾರಿ

ಸೂರ್ಯಕುಮಾರ್ ಯಾದವ್ ಮಾತ್ರವಲ್ಲದೆ, ಐಸಿಸಿ ಇಬ್ಬರು ಪಾಕಿಸ್ತಾನಿ ಆಟಗಾರರಾದ ಸಾಹಿಬ್ಝಾದಾ ಫರ್ಹಾನ್ ಮತ್ತು ಹ್ಯಾರಿಸ್ ರೌಫ್ ವಿರುದ್ಧವೂ ತೀರ್ಪು ನೀಡಿದೆ. ಭಾರತ ವಿರುದ್ಧದ ಸೂಪರ್ ಫೋರ್ ಪಂದ್ಯದ ವೇಳೆ ಅರ್ಧಶತಕ ಗಳಿಸಿದ ನಂತರ ಫರ್ಹಾನ್ ಗುಂಡು ಹಾರಿಸುವ ರೀತಿ ಸನ್ನೆ ಮಾಡಿ ಸಂಭ್ರಮಿಸಿದ್ದರು. ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುವಾಗ ಹ್ಯಾರಿಸ್ ರೌಫ್ ಸಹ ಪ್ರಚೋದನಾಕಾರಿ ಸನ್ನೆ ಮಾಡಿದ್ದರು. ಪಾಕಿಸ್ತಾನಿ ಆಟಗಾರರ ಈ ವರ್ತನೆಯ ಬಗ್ಗೆ ಬಿಸಿಸಿಐ ಕೂಡ ದೂರು ದಾಖಲಿಸಿತ್ತು.

ಬಿಸಿಸಿಐ ನೀಡಿದ ದೂರಿನ ಮೇರೆಗೆ ಐಸಿಸಿ ಪಾಕಿಸ್ತಾನದ ಹ್ಯಾರಿಸ್ ರೌಫ್ ಅವರ ವರ್ತನೆಗೆ ಪಂದ್ಯದ ಶುಲ್ಕದ ಶೇಕಡಾ 30ರಷ್ಟು ದಂಡವನ್ನು ವಿಧಿಸಿದೆ. ಫರ್ಹಾನ್ ಅವರ ಗುಂಡಿನ ಸಂಭ್ರಮಾಚರಣೆಗೆ ಎಚ್ಚರಿಕೆ ನೀಡಿ ಅವರನ್ನು ಬಿಡುಗಡೆ ಮಾಡಲಾಯಿತು. ಈ ಐಸಿಸಿ ನಿರ್ಧಾರವು ಏಷ್ಯಾ ಕಪ್ ಫೈನಲ್‌ಗೆ ಮುನ್ನ ಭಾರತ ಮತ್ತು ಪಾಕಿಸ್ತಾನ ನಡುವೆ ಹೊಸ ಉದ್ವಿಗ್ನತೆಯನ್ನು ಉಂಟುಮಾಡಬಹುದು.

Asia Cup 2025: ʻನಿಮ್ಮ ಮಾತು ತಪ್ಪುʼ-ಮೊಹಮ್ಮದ್‌ ಕೈಫ್‌ಗೆ ಜಸ್‌ಪ್ರೀತ್‌ ತಿರುಗೇಟು!

ಏಷ್ಯಾ ಕಪ್‌ ಫೈನಲ್‌ ಯಾವಾಗ?

ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಪ್ಟಂಬರ್‌ 28 ರಂದು ಭಾನುವಾರ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ 2025ರ ಏಷ್ಯಾ ಕಪ್‌ ಫೈನಲ್‌ ಪಂದ್ಯದಲ್ಲಿ ಕಾದಾಟ ನಡೆಸಲಿವೆ. 41 ವರ್ಷಗಳ ಏಷ್ಯಾ ಕಪ್‌ ಇತಿಹಾಸದಲ್ಲಿಯೇ ಸಾಂಪ್ರದಾಯಿಕ ಎದುರಾಳಿಗಳು ಇದೇ ಮೊದಲ ಬಾರಿ ಈ ಟೂರ್ನಿಯ ಫೈನಲ್‌ನಲ್ಲಿ ಕಾದಾಟ ನಡೆಸಲಿವೆ. ಭಾರತ ತಂಡ ಲೀಗ್‌ ಹಾಗೂ ಸೂಪರ್‌-4ರಲ್ಲಿ ಒಟ್ಟು ಎರಡು ಬಾರಿ ಪಾಕಿಸ್ತಾನವನ್ನು ಮಣಿಸಿದೆ. ಇದೀಗ ಫೈನಲ್‌ನಲ್ಲಿಯೂ ಪಾಕ್‌ ವಿರುದ್ಧ ಗೆಲ್ಲಲು ಎದುರು ನೋಡುತ್ತಿದೆ.