Asia Cup 2025: 2007ರ ಘಟನೆ ನೆನೆದ ಪಾಕಿಸ್ತಾನವನ್ನು ಟೀಕಿಸಿದ ಇರ್ಫಾನ್ ಪಠಾಣ್!
ಪ್ರಸ್ತುತ ನಡಯುತ್ತಿರುವ 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸುತ್ತಿವೆ. ಈ ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು ಭಾರತ ಎರಡು ಬಾರಿ ಮಣಿಸಿದೆ. ಆದರೂ ಪಾಕಿಸ್ತಾನ ಆಟಗಾರರು ಭಾರತವನ್ನುಪರೋಕ್ಷವಾಗಿ ಟೀಕಿಸುತ್ತಿದ್ದಾರೆ. ಇದೀಗ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಪಾಕಿಸ್ತಾನವನ್ನು ಟೀಕಿಸಿದ್ದಾರೆ.

ಪಾಕಿಸ್ತಾನ ತಂಡವನ್ನು ಟೀಕಿಸಿದ ಇರ್ಫಾನ್ ಪಠಾಣ್. -

ನವದೆಹಲಿ: ಭಾರತ ಕ್ರಿಕೆಟ್ ತಂಡದ ಐತಿಹಾಸಿಕ ಟಿ20 ವಿಶ್ವಕಪ್ ಗೆಲುವನ್ನು ಸ್ಮರಿಸಿದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ (Irfan Pathan), ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು (Pakistan) ಟೀಕಿಸಿದ್ದಾರೆ. 2007ರ ಐಸಿಸಿ ಟಿ20 ವಿಶ್ವಕಪ್ (T20I World Cup 2025) ಟೂರ್ನಿಯ ಬಳಿಕ ಭಾರತ ತಂಡ ನಿಯಮಿತವಾಗಿ ಪಾಕಿಸ್ತಾನ ತಂಡವನ್ನು ಮಣಿಸುತ್ತಿದೆ ಎಂದು ಹೇಳಿದ್ದಾರೆ. ರಾಜಕೀಯ ಕಾರಣಗಳಿಂದ ಭಾರತ ಹಾಗೂ ಪಾಕಿಸ್ತಾನ ತಂಡಗಳು 2012ರಿಂದ ಇಲ್ಲಿಯವರೆಗೂ ರಾಜಕೀಯ ಕಾರಣಗಳಿಂದ ದ್ವಿಪಕ್ಷೀಯ ಸರಣಿಗಳಲ್ಲಿ ಆಡುತ್ತಿಲ್ಲ ಹಾಗೂ ಕೇವಲ ಐಸಿಸಿ ಹಾಗೂ ಎಸಿಸಿ ಅಡಿಯ ಟೂರ್ನಿಗಳಲ್ಲಿ ಮಾತ್ರ ಆಡುತ್ತಿವೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಇರ್ಫಾನ್ ಪಠಾಣ್, "ಹಿಂದೆ 2007ರಲ್ಲಿ ಎಂಥಾ ದಿನ. ನಮ್ಮ ವಿಶ್ವಕಪ್ ಕನಸು ನನಸಾಗಿತ್ತು. ಅಂದಿನಿಂದ ನಾವು ಪಾಕಿಸ್ತಾನ ತಂಡವನ್ನು ಟಿ20 ಕ್ರಿಕೆಟ್‌ನಲ್ಲಿ ನಿಯಮಿತವಾಗಿ ಸೋಲಿಸುತ್ತಾ ಬಂದಿದ್ದೇವೆ,"ಎಂದು ಹೇಳಿದ್ದಾರೆ.
ಏಷ್ಯಾ ಕಪ್ ಟೂರ್ನಿಯ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿನ ಪಾಕಿಸ್ತಾನ ಆಟಗಾರರ ಹೈಡ್ರಾಮಾ ಸಂಬಂಧ ಇರ್ಫಾನ್ ಪಠಾಣ್ ಟೀಕಿಸಿದ್ದಾರೆ. ಭಾರತ ವಿರುದ್ದದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಬಳಿಕ ಸಾಹಿಬ್ದಾಜ್ ಫರ್ಹಾನ್ ಅವರು ಗನ್ ಸೆಲೆಬ್ರೆಷನ್ ಮಾಡಿದ್ದರು ಹಾಗೂ ವೇಗದ ಬೌಲರ್ ಹ್ಯಾರಿಸ್ ರೌಫ್ ಅವರು ಫೈಟರ್ ಜೆಟ್ ರೀತಿಯಲ್ಲಿ ಸನ್ನೆ ಮಾಡಿದ್ದರು. ಈ ಪಂದ್ಯದಲ್ಲಿ ಭಾರತ ತಂಡ ಅತ್ಯುತ್ತಮ ಪ್ರದರ್ಶನವನ್ನು ತೋರಿತ್ತು. ಆ ಮೂಲಕ 6 ವಿಕೆಟ್‌ಗಳ ಗೆಲುವು ಪಡೆದಿತ್ತು. ಅಂದ ಹಾಗೆ ಎರಡೂ ಪಂದ್ಯಗಳ ಬಳಿಕವೂ ಟೀಮ್ ಇಂಡಿಯಾ ಆಟಗಾರರು ಪಾಕ್ ಆಟಗಾರರಿಗೆ ಹ್ಯಾಂಡ್‌ಶೇಕ್ ನೀಡಲು ನಿರಾಕರಿಸಿದ್ದರು. ಇದರಿಂದ ಪಾಕಿಸ್ತಾನ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿತ್ತು.
Asia Cup 2025: ಪಾಕಿಸ್ತಾನ ತಂಡದ ವೈಫಲ್ಯಕ್ಕೆ ಸಲ್ಮಾನ್ ಆಘಾ ಕಾರಣ ಎಂದ ಶೋಯೆಬ್ ಅಖ್ತರ್!
ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ಥಾನ ತಂಡಗಳು ಈಗಾಗಲೇ ಎರಡು ಬಾರಿ ಕಾದಾಟ ನಡೆಸಲಿವೆ. ಮೊದನೇ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಭಾರತ ಗೆದ್ದಿದ್ದರೆ, ಸೂಪರ್-4ರ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು. ಐಸಿಸಿ ಹಾಗೂ ಎಸಿಸಿ ಟೂರ್ನಿಗಳಲ್ಲಿ ಭಾರತ ತಂಡ, ಪಾಕಿಸ್ತಾನದ ಎದುರು ಪ್ರಾಬಲ್ಯವನ್ನು ಮೆರೆದಿದೆ. ಕೆಲವೊಮ್ಮೆ ಭಾರತದ ವಿರುದ್ಧ ಪಾಕಿಸ್ತಾನ ತಂಡ ಗೆಲುವು ಪಡೆದಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಂದು ಪಂದ್ಯದಲ್ಲಿಯೂ ಮುಖಾಮುಖಿಯಾಗುವ ಸಾಧ್ಯತೆ ಇದೆ. ಒಂದು ಈ ಎರಡೂ ತಂಡಗಳು ಸೂಪರ್-4 ಹಂತದ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಿದರೆ, ಸೆಪ್ಟಂಬರ್ 28 ರಂದು ನಡೆಯುವ ಏಷ್ಯಾ ಕಪ್ ಟೂರ್ನಿಯ ಫೈನಲ್‌ನಲ್ಲಿ ಕಾದಾಟ ನಡೆಸಲಿವೆ. ಸೂಪರ್-4ರಲ್ಲಿ ಭಾರತ ಆಡಿದ ಒಂದು ಪಂದ್ಯವನ್ನು ಗೆದ್ದುಕೊಂಡಿದ್ದರೆ, ಪಾಕಿಸ್ತಾನ ಆಡಿದ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಸೋತಿದ್ದು, ಇನ್ನೊಂದು ಪಂದ್ಯದಲ್ಲಿ ಗೆಲುವು ಪಡೆದಿದೆ.
Asia Cup 2025: ಕೆಣಕಿದ ರೌಫ್‌ಗೆ ಚಳಿ ಬಿಡಿಸಿದ ಅಭಿಷೇಕ್, ಗಿಲ್; ವಿಡಿಯೊ ವೈರಲ್
ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಬುಧವಾರ ನಡೆಯುವ ಸೂಪರ್-4ರ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯದಲ್ಲಿ ಗೆದ್ದರೆ, ಟೀಮ್ ಇಂಡಿಯಾ ಬಹುತೇಕ ಫೈನಲ್‌ಗೆ ಅರ್ಹತೆ ಪಡೆಯಲಿದೆ.