IND vs BAN: ಗೌತಮ್ ಗಂಭೀರ್‌ರ ದಾಖಲೆ ಮುರಿಯುವ ಸನಿಹದಲ್ಲಿ ಸಂಜು ಸ್ಯಾಮ್ಸನ್!
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಷ್ಯಾ ಕಪ್ ಟೂರ್ನಿಯ ಸೂಪರ್-4ರ ಪಂದ್ಯ ಸೆಪ್ಟಂಬರ್ 24ರಂದು ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರು ಕೇವಲ ಮೂರು ರನ್ ಗಳಿಸಿದರೆ, ಎಲೈಟ್ ಲಿಸ್ಟ್‌ನಲ್ಲಿ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಲ್ಲಿದ್ದಾರೆ.

ಗೌತಮ್ ಗಂಭೀರ್ ದಾಖಲೆ ಮುರಿಯುವ ಸನಿಹದಲ್ಲಿ ಸಂಜು ಸ್ಯಾಮ್ಸನ್. -

ನವದೆಹಲಿ: ಭಾರತ ತಂಡದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (Sanju Samson) ಅವರು 2025ರ ಏಷ್ಯಾ ಕಪ್ (Asia Cup 2025) ಟೂರ್ನಿಯಲ್ಲಿ ಆಡುತ್ತಿದ್ದಾರೆ. ಅವರು ಇಲ್ಲಿಯವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಆಡಿದ್ದಾರೆ. ಈ ನಾಲ್ಕೂ ಪಂದ್ಯಗಳ ಪೈಕಿ ಕಳೆದ ಎರಡು ಪಂದ್ಯಗಳಲ್ಲಿ ಮಾತ್ರ ಬ್ಯಾಟಿಂಗ್‌ಗೆ ಅವಕಾಶ ಸಿಕ್ಕಿತ್ತು. ಒಮಾನ್ ವಿರುದ್ದ ಅರ್ಧಶತಕ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಸಂಜು, ಪಾಕಿಸ್ತಾನ ವಿರುದ್ಧ ಸೂಪರ್-4ರ ಪಂದ್ಯದಲ್ಲಿ 17 ಎಸೆತಗಳಲ್ಲಿ ಕೇವಲ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಸೆಪ್ಟಂಬರ್ 24 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿಯೂ (IND vs BAN) ಕೇರಳ ಮೂಲದ ಆಟಗಾರ ಆಡುವುದು ಬಹುತೇಕ ಖಚಿತ. ಅಂದ ಹಾಗೆ ಈ ಪಂದ್ಯದಲ್ಲಿ ಅವರು ಕೇವಲ ಮೂರು ರನ್ ಗಳಿಸಿದರೆ, ಎಲೈಟ್ ಲಿಸ್ಟ್‌ನಲ್ಲಿ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಲಿದ್ದಾರೆ.
ಸಂಜು ಸ್ಯಾಮ್ಸನ್ ಸದ್ಯ 46 ಟಿ20ಐ ಪಂದ್ಯಗಳಿಂದ 930 ರನ್‌ಗಳನ್ನು ದಾಖಲಿಸಿದ್ದಾರೆ ಹಾಗೂ 1000 ರನ್‌ಗಳ ಸನಿಹದಲ್ಲಿದ್ದಾರೆ. 1000 ರನ್‌ಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಸಂಜು ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರನ್ನು ಎಲೈಟ್ ಲಿಸ್ಟ್‌ನಲ್ಲಿ ಹಿಂದಿಕ್ಕಲಿದ್ದಾರೆ. ಭಾರತದ ಪರ ಟಿ20ಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಗಂಭೀರ್ ಅವರನ್ನು ಸಂಜು ಹಿಂದಕ್ಕಲು ಕೇವಲ ಮೂರು ರನ್‌ಗಳ ಅಗತ್ಯವಿದೆ. ಗೌತಮ್ ಗಂಭೀರ್ ಅವರು 37 ಪಂದ್ಯಗಳಿಂದ 932 ರನ್‌ಗಳನ್ನು ಕಲೆ ಹಾಕಿದ್ದಾರೆ. ಭಾರತದ ಪರ ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ 12ನೇ ಸಾಲಿನಲ್ಲಿದ್ದಾರೆ.
ಜಸ್‌ಪ್ರೀತ್ ಬುಮ್ರಾ ಔಟ್?: ಬಾಂಗ್ಲಾದೇಶ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XIನಲ್ಲಿ 2 ಬದಲಾವಣೆ ಸಾಧ್ಯತೆ!
2015ರಲ್ಲಿ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಸಂಜು ಸ್ಯಾಮ್ಸನ್ ಅವರು ಇದೀಗ ತಮ್ಮ ಮುಂದಿನ ಇನಿಂಗ್ಸ್‌ನಲ್ಲಿ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಲಿದ್ದಾರೆ. ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಹಿಟ್‌ಮ್ಯಾನ್ 159 ಪಂದ್ಯಗಳಿಂದ 4231 ರನ್‌ಗಳನ್ನು ದಾಖಲಿಸಿದ್ದಾರೆ. ಭಾರತದ ಪರ ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಎರಡನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ. ವಿರಾಟ್ ಆಡಿದ 125 ಪಂದ್ಯಗಳಿಂದ 4188 ರನ್‌ಗಳನ್ನು ಗಳಿಸಿದ್ದಾರೆ. ರೋಹಿತ್ ಹಾಗೂ ಕೊಹ್ಲಿ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಟಿ20ಐ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ನಂತರದ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ 87 ಪಂದ್ಯಗಳಿಂದ 2652 ರನ್‌ಗಳನ್ನು ದಾಖಲಿಸಿದ್ದಾರೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿ.ಕೀ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್