ಸೂರ್ಯಕುಮಾರ್ ಯಾದವ್ ನಾಯಕತ್ವದ ಬಗ್ಗೆ ತಮ್ಮದೇ ಅಭಿಪ್ರಾಯ ವ್ಯಕ್ತಪಡಿಸಿದ ಮೊಹಮ್ಮದ್ ಕೈಫ್!
ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿರುವ ಸೂರ್ಯಕುಮಾರ್ ಯಾದವ್ ಅವರನ್ನು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಶ್ಲಾಘಿಸಿದ್ದಾರೆ. ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಸೂಕ್ತ ಆಯ್ಕೆ ಎಂದು ಹೇಳಿದ್ದಾರೆ.

ಸೂರ್ಯಕುಮಾರ್ ಯಾದವ್‌ಗೆ ಮೊಹಮ್ಮದ್ ಕೈಫ್ ಮೆಚ್ಚುಗೆ. -

ನವದೆಹಲಿ: ಭಾರತ ಟಿ20ಐ ತಂಡದ ನಾಯಕನಾಗಿ ರೋಹಿತ್ ಶರ್ಮಾ (Rohit sharma) ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ (Suryakumar Yadav) ಅವರು ಸೂಕ್ತ ಆಯ್ಕೆ ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ (Mohammad kaif) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದಾದ ಬಳಿಕ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ಟಿ20 ತಂಡದ ನಾಯಕನನ್ನಾಗಿ ನೇಮಿಸಲಾಗಿತ್ತು. ಅದರಂತೆ ಸೂರ್ಯಕುಮಾರ್ ನಾಯಕತ್ವದಲ್ಲಿ ಭಾರತ ಟಿ20 ತಂಡ ಅತ್ಯುತ್ತಮ ಪ್ರದರ್ಶನವನ್ನು ತೋರುತ್ತಿದೆ.
ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ ಭಾರತ ತಂಡ, ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯ ಸೂಪರ್-4ಕ್ಕೆ ಪ್ರವೇಶ ಮಾಡಿದೆ. ಲೀಗ್ ಹಂತದ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ತಂಡ, ಯುಎಇ ಮತ್ತು ಪಾಕಿಸ್ತಾನ ವಿರುದ್ಧ ಗೆಲುವು ಪಡೆದಿತ್ತು. ಶುಕ್ರವಾರ ಕೊನೆಯ ಲೀಗ್ ಪಂದ್ಯದಲ್ಲಿ ಒಮಾನ್ ವಿರುದ್ಧ ಕಾದಾಟ ನಡೆಸಲಿದೆ. ಬ್ಯಾಟ್ಸ್‌ಮನ್ ಆಗಿ ಹಾಗೂ ನಾಯಕನಾಗಿ ಸೂರ್ಯಕುಮಾರ್ ಯಾದವ್ ಅವರು ಅತ್ಯುತ್ತಮ ಪಾತ್ರವನ್ನು ನಿರ್ವಹಿಸಿದ್ದಾರೆ. ಅಲ್ಲದೆ ಹ್ಯಾಂಡ್‌ಶೇಕ್ ವಿವಾದದ ಸಂಬಂಧದಲ್ಲಿಯೂ ಅವರು ಮಾಧ್ಯಮಗಳನ್ನು ಅತ್ಯುತ್ತಮ ನಿಭಾಯಿಸಿದ್ದರು.
ಸೂರ್ಯಕುಮಾರ್ ಯಾದವ್‌ರನ್ನು ʻಹಂದಿʼ ಕರೆದಿದ್ದ ಮೊಹಮ್ಮದ್ ಯೂಸಫ್‌ಗೆ ಮದನ್ ಲಾಲ್ ತರಾಟೆ!
ತನ್ನ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೊದಲ್ಲಿ ಮಾತನಾಡಿದ ಮೊಹಮ್ಮದ್ ಕೈಫ್,"ಬ್ಯಾಟಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರು ಅದ್ಭುತ ಪ್ರದರ್ಶನವನ್ನು ತೋರಿದರು ಹಾಗೂ ತಂಡವನ್ನು ಗೆಲ್ಲಿಸಿ ಅಜೇಯರಾಗಿ ಉಳಿದರು. ಅಲ್ಲದೆ ನಾಯಕನಾಗಿ ಹಲವು ಸಂಗತಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅತ್ಯಂತ ದೊಡ್ಡದು. ಈ ಪರಿಸ್ಥಿತಿಯನ್ನು ಅವರು ನಾಯಕನಾಗಿ ಅದ್ಭುತವಾಗಿ ನಿರ್ವಹಿಸಿದ್ದಾರೆ. ಹಾಗಾಗಿ ಭಾರತ ಟಿ20 ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಸೂಕ್ತ ಆಟಗಾರ. ಮಾತನಾಡುವ ವೇಳೆ ಅವರ ಮುಗುಳ್ನಗೆ ಹಾಗೂ ಅವರ ಬ್ಯಾಟ್ ಯಾವಾಗಲೂ ಮಾತನಾಡುತ್ತದೆ," ಎಂದು ಶ್ಲಾಘಿಸಿದ್ದಾರೆ.
Asia Cup Super 4s Schedule: ಸೂಪರ್-4 ಪಂದ್ಯಗಳ ವೇಳಾಪಟ್ಟಿ ಪ್ರಕಟ
ಸೂರ್ಯಕುಮಾರ್ ಯಾದವ್ ನಾಯಕತ್ವ ಬುದ್ದಿವಂತಿಕೆಯಿಂದ ಕೂಡಿದೆ: ಕೈಫ್
ಸೂರ್ಯಕುಮಾರ್ ಯಾದವ್ ಅವರ ನಾಯಕತ್ವವನ್ನು ಕೂಡ ಮೊಹಮ್ಮದ್ ಕೈಫ್ ಶ್ಲಾಘಿಸಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಅಭಿಷೇಕ್ ಶರ್ಮಾ ಅವರನ್ನು ಸೂರ್ಯ ಅತ್ಯುತ್ತಮವಾಗಿ ಬಳಿಸಿಕೊಂಡಿದ್ದಾರೆ.
"ನಾಯಕತ್ವ ಬುದ್ದಿವಂತಿಕೆಯಿಂದ ಕೂಡಿದೆ. ಹಾರ್ದಿಕ್ ಪಾಂಡ್ಯ ಹೊಸ ಚೆಂಡಿನಲ್ಲಿ ಬೌಲ್ ಮಾಡಿದ್ದಾರೆ; ಮಧ್ಯಮ ಓವರ್‌ಗಳಲ್ಲಿ ಅಭಿಷೇಕ್ ಶರ್ಮಾ ಒಂದು ಅಥವಾ ಎರಡು ಓವರ್ ಬೌಲ್ ಮಾಡಿದ್ದಾರೆ. ಅವರು ಸಂಗತಿಗಳನ್ನು ಸರಿಯಾಗಿ ನಿರ್ವಹಿಸಿದ್ದಾರೆ. ನಾಯಕನಾಗಿ ಸೂರ್ಯಕುಮಾರ್ ಯಾದವ್ 24ರಲ್ಲಿ 20 ಪಂದ್ಯಗಳನ್ನು ಗೆದ್ದಿದ್ದಾರೆ. ಅವರು ಅದ್ಭುತ ನಾಯಕನಾಗುವ ಹಾದಿಯಲ್ಲಿ ಸಾಗುತ್ತಿದ್ದಾರೆಂಬುದರಲ್ಲಿ ಯಾವುದೇ ಅನುಮಾನವಿಲ್ಲ," ಎಂದು ಮೊಹಮ್ಮದ್ ಕೈಫ್ ತಿಳಿಸಿದ್ದಾರೆ.
Asia Cup 2025: ಶ್ರೀಲಂಕಾ ವಿರುದ್ಧ ಸತತ 5 ಸಿಕ್ಸರ್ ಬಾರಿಸಿದ ಮೊಹಮ್ಮದ್ ನಬಿ! ವಿಡಿಯೊ
ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಭಾರತ ಟಿ20 ತಂಡವನ್ನು 24 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇದರಲ್ಲಿ ಅವರು 19ರಲ್ಲಿ ಗೆಲುವು ಪಡೆದಿದ್ದಾರೆ. ಸೆಪ್ಟಂಬರ್ 19 ರಂದು ಒಮಾನ್ ವಿರುದ್ಧ ಭಾರತ ತಂಡ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದ್ದಾರೆ.