ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ತಂಡದ ಮ್ಯಾಚ್‌ ವಿನ್ನರ್‌ಗಳನ್ನು ಆರಿಸಿದ ವೀರೇಂದ್ರ ಸೆಹ್ವಾಗ್‌!

ಬಹುನಿರೀಕ್ಷಿತ 2025ರ ಏಷ್ಯಾ ಕಪ್‌ ಟೂರ್ನಿಯು ಸೆಪ್ಟಂಬರ್‌ 9 ರಂದು ಆರಂಭವಾಗಲಿದೆ. ಈ ಟೂರ್ನಿಗೆ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ತಂಡ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇದರ ನಡುವೆ ಮಾಜಿ ಸ್ಪೋಟಕ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಅವರು ಭಾರತ ತಂಡಕ್ಕೆ ಮೂವರು ಮಾಚ್‌ ವಿನ್ನರ್‌ಗಳನ್ನು ಆರಿಸಿದ್ದಾರೆ.

ಭಾರತ ತಂಡದ ಮ್ಯಾಚ್‌ ವಿನ್ನರ್‌ಗಳನ್ನು ಆರಿಸಿದ ವೀರೇಂದ್ರ ಸೆಹ್ವಾಗ್‌.

ನವದೆಹಲಿ: ಮುಂಬರುವ 2025ರ ಏಷ್ಯಾ ಕಪ್‌ ಟೂರ್ನಿಯು (Asia Cup 2025) ಸೆಪ್ಟಂಬರ್‌ 9 ರಂದು ಆರಂಭವಾಗಲಿದೆ. ಈ ಟೂರ್ನಿಗೆ ಭಾರತ ತಂಡ (Indian Cricket Team) ಸೂರ್ಯಕುಮಾರ್‌ ಯಾದವ್‌ ನಾಯಕತ್ವದಲ್ಲಿ ಸಜ್ಜಾಗುತ್ತಿದೆ. ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಶ್ರೇಯಸ್‌ ಅಯ್ಯರ್‌, ಯಶಸ್ವಿ ಜೈಸ್ವಾಲ್‌ ಹಾಗೂ ಮೊಹಮ್ಮದ್‌ ಸಿರಾಜ್‌ ಅವರನ್ನು ಈ ಟೂರ್ನಿಗೆ ಕಡೆಗಣಿಸಲಾಗಿದೆ. ಆದರೆ, ಭಾರತ ಟೆಸ್ಟ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರನ್ನು ದೀರ್ಘಾವಧಿ ಬಳಿಕ ಭಾರತ ಟಿ20ಐ ತಂಡಕ್ಕೆ ಕರೆ ತರಲಾಗಿದೆ. ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರು ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದೀಗ ಭಾರತ ತಂಡದ ಹೊಸ ತಲೆ ಮಾರಿನ ತಂಡ ಏಷ್ಯಾ ಕಪ್‌ ಹಾಗೂ ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಟಿ20 ವಿಶ್ವಕಪ್‌ (T20 World Cup 2026) ಟೂರ್ನಿಯಲ್ಲಿ ಆಡಲಿದೆ.

ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ತಂಡದ ಪ್ರದರ್ಶನದ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಚರ್ಚೆಗಳನ್ನು ನಡೆಸುತ್ತಿದ್ದಾರೆ. ಅದರಂತೆ ಭಾರತದ ಮಾಜಿ ಸ್ಪೋಟಕ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಅವರು, ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ತಂಡಕ್ಕೆ ಮ್ಯಾಚ್‌ ವಿನ್ನರ್‌ಗಳನ್ನು ಆರಿಸಿದ್ದಾರೆ. ಅವರು ಅಭಿಷೇಕ್‌ ಶರ್ಮಾ, ವರುಣ್‌ ಚಕ್ರವರ್ತಿ ಹಾಗೂ ಜಸ್‌ಪ್ರೀತ್‌ ಬುಮ್ರಾ ಭಾರತ ತಂಡಕ್ಕೆ ಮ್ಯಾಚ್‌ ವಿನ್ನರ್‌ಗಳಾಗಲಿದ್ದಾರೆಂದು ಭವಿಷ್ಯ ನುಡಿದಿದ್ದಾರೆ.

Asia Cup 2025: ಏಷ್ಯಾಕಪ್‌ನಿಂದ ಕೈಬಿಟ್ಟ ವಿಚಾರದಲ್ಲಿ ಮೌನ ಮುರಿದ ಶಮಿ

"ಅಭಿಷೇಕ್‌ ಶರ್ಮಾ ನನಗೆ ಅನಿಸಿದ ಹಾಗೆ ಗೇಮ್‌ ಚೇಂಜರ್‌ ಆಗಿದ್ದಾರೆ. ಜಸ್‌ಪ್ರೀತ್‌ ಬುಮ್ರಾ ಯಾವಾಗಲೂ ಗೇಮ್‌ ಚೇಂಜರ್‌. ವರುಣ್‌ ಚಕ್ರವರ್ತಿ ತಮ್ಮ ರಹಸ್ಯ ಬೌಲಿಂಗ್‌ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ತುಂಬಾ ಪರಿಣಾಮಕಾರಿಯಾಗಿತ್ತು. ಇದೀಗ ಟಿ20ಐ ಟೂರ್ನಿಯಲ್ಲಿಯೂ ಅವರು ಮಿಂಚಲಿದ್ದಾರೆ. ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ತಂಡಕ್ಕೆ ಈ ಆಟಗಾರರು ಮ್ಯಾಚ್‌ ವಿನ್ನರ್‌ಗಳಾಗಲಿದ್ದಾರೆ," ಎಂದು ವೀರೇಂದ್ರ ಸೆಹ್ವಾಗ್‌ ತಿಳಿಸಿದ್ದಾರೆ.

ಭಾರತದ ಎಲ್ಲಾ ಮಾದರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ 2024ರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಕೊನೆಯ ಬಾರಿ ಟಿ20ಐ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡರು. ಅಂದಿನಿಂದ, ಬೆನ್ನುನೋವಿನಿಂದಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದ ಕಾರಣ, ಅವರು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳುವುದನ್ನು ಸೀಮಿತಗೊಳಿಸಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡಿದ್ದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಭಾಗವಾಗಿ ಐದು ಟೆಸ್ಟ್‌ ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. 2025ರ ಐಪಿಎಲ್ ಟೂರ್ನಿಯಲ್ಲಿ ಕೊನೆಯ ಬಾರಿ ಟಿ20 ಕ್ರಿಕೆಟ್ ಆಡಿದ ಬುಮ್ರಾ, 12 ಪಂದ್ಯಗಳಲ್ಲಿ 6.67ರ ಎಕಾನಮಿಯಲ್ಲಿ 18 ವಿಕೆಟ್‌ಗಳನ್ನು ಕಬಳಿಸಿದ್ದರು.

Asia Cup 2025: ʻಭಾರತದ ವಿರುದ್ಧ ಪಾಕಿಸ್ತಾನ ಗೆಲ್ಲಲಿದೆʼ-ಹ್ಯಾರಿಸ್‌ ರೌಫ್‌ ಎಚ್ಚರಿಕೆ!

ಐಸಿಸಿ ಟಿ20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಪ್ರಸ್ತುತ ನಂ.1 ಸ್ಥಾನದಲ್ಲಿರುವ ಎಡಗೈ ಓಪನರ್ ಅಭಿಷೇಕ್ ಶರ್ಮಾ, 2024ರ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧ ಪದಾರ್ಪಣೆ ಮಾಡಿದ ನಂತರ ತಮ್ಮನ್ನು ತಾವು ವಿಶ್ವಾಸಾರ್ಹ ಓಪನರ್ ಎಂದು ಸಾಬೀತುಪಡಿಸಿದ್ದಾರೆ. ತಮ್ಮ ಸ್ಪೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಶರ್ಮಾ, ಟೀಮ್‌ ಮ್ಯಾನೇಜ್‌ಮೆಂಟ್‌ ಬೆಂಬಲವನ್ನು ಹೊಂದಿದ್ದಾರೆ.

ವರುಣ್ ಚಕ್ರವರ್ತಿ ಭಾರತ ತಂಡಕ್ಕೆ ಮರಳಿದಾಗಿನಿಂದ ಅತ್ಯಾಕರ್ಷಕ ಫಾರ್ಮ್‌ನಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಅವರು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು ಮತ್ತು ನಂತರ 2025ರ ಜನವರಿಯಲ್ಲಿ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಇಂಗ್ಲೆಂಡ್ ಅನ್ನು ಕಂಗೆಡಿಸಿದ್ದರು ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. 18 ಟಿ20 ಪಂದ್ಯಗಳಲ್ಲಿ ಅವರು 7.02ರ ಎಕಾನಮಿ ದರದಲ್ಲಿ 33 ವಿಕೆಟ್‌ಗಳನ್ನು ಕಬಳಿಸಿದ್ದಾರೆ.