ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

AUS vs ENG: 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಬಾಕ್ಸಿಂಗ್‌ ಡೇ ಟೆಸ್ಟ್‌ ಗೆದ್ದ ಇಂಗ್ಲೆಂಡ್‌!

AUS vs ENG 4th Test Highlights: ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿದ ಇಂಗ್ಲೆಂಡ್‌ ತಂಡ ನಾಲ್ಕನೇ ಹಾಗೂ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ 4 ವಿಕೆಟ್‌ ಗೆಲುವು ಪಡೆದಿದೆ. ಆ ಮೂಲಕ ಐದು ಪಂದ್ಯಗಳ ಆಷಸ್‌ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್‌ 1-3 ಅಂತರವನ್ನು ಕಾಯ್ದುಕೊಂಡಿದೆ. ಈ ಪಂದ್ಯದಲಿ ಮಾರಕ ಬೌಲಿಂಗ್‌ ದಾಳಿ ನಡೆಸಿದ ಜಾಶ್‌ ಟಾಂಗ್‌ 7 ವಿಕೆಟ್‌ ಕಿತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಬಾಕ್ಸಿಂಗ್‌ ಡೇ ಟೆಸ್ಟ್‌ ಗೆದ್ದ ಇಂಗ್ಲೆಂಡ್‌.

ಮೆಲ್ಬೋರ್ನ್‌: ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿದ ಇಂಗ್ಲೆಂಡ್‌ ತಂಡ ನಾಲ್ಕನೇ ಹಾಗೂ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ (AUS vs ENG) ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಗೆಲುವು ಪಡೆಯಿತು. ಮೆಲ್ಬೋರ್ನ್‌ನಲ್ಲಿ ಗೆಲುವು ಪಡೆದ ಹೊರತಾಗಿಯೂ ಐದು ಪಂದ್ಯಗಳ ಆಷಸ್‌ ಟೆಸ್ಟ್‌ ಸರಣಿಯಲ್ಲಿ (Ashes) ಬೆನ್‌ ಸ್ಟೋಕ್ಸ್‌ ನಾಯಕತ್ವದ ಇಂಗ್ಲೆಂಡ್‌ ತಂಡ 1-3 ಹಿನ್ನಡೆಯನ್ನು ಅನುಭವಿಸಿದೆ. ಈ ಪಂದ್ಯದಲ್ಲಿ ಮಾರಕ ಬೌಲಿಂಗ್‌ ದಾಳಿ ನಡೆಸಿ 7 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇಂಗ್ಲೆಂಡ್‌ ತಂಡದ ಗೆಲುವಿಗೆ ನೆರವು ನೀಡಿದ ವೇಗದ ಬೌಲರ್‌ ಜಾಶ್‌ ಟಾಂಗ್‌ (Josh Tongue) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇಲ್ಲಿನ ಮೆಲ್ಬೋರ್ನ್‌ ಕ್ರಿಕೆಟ್‌ ಗ್ರೌಂಡ್‌ನ ಪಿಚ್‌ನಲ್ಲಿ ಬ್ಯಾಟ್ಸ್‌ಮನ್‌ಗಳಿಗಿಂತ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರು. ಈ ಕಾರಣದಿಂದಲೇ ಈ ಪಂದ್ಯದಲ್ಲಿ ಎರಡೂ ತಂಡಗಳಿಂದ ಯಾವುದೇ ಬ್ಯಾಟ್ಸ್‌ಮನ್‌ನಿಂದ ಅರ್ಧಶತಕ ಮೂಡಿ ಬರಲಿಲ್ಲ. ಸ್ಟೀವನ್‌ ಸ್ಮಿತ್‌ ನಾಯಕತ್ವದ ಆಸ್ಟ್ರೇಲಿಯಾ ತಂಡ ನೀಡಿದ್ದ 175 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಇಂಗ್ಲೆಂಡ್‌ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನವನ್ನು ತೋರಿದರು. 32.2 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 178 ರನ್‌ಗಳನ್ನು ಕಲೆ ಹಾಕಿ 4 ವಿಕೆಟ್‌ಗಳಿಂದ ಗೆದ್ದು ಬೀಗಿತು.

Vijay Hazare Trophy: ಮೈಕಲ್‌ ಬೆವನ್‌ರ ವಿಶ್ವ ದಾಖಲೆಯನ್ನು ಮುರಿದ ವಿರಾಟ್‌ ಕೊಹ್ಲಿ!

ಇಂಗ್ಲೆಂಡ್‌ ತಂಡದ ಪರ ದ್ವಿತೀಯ ಇನಿಂಗ್ಸ್‌ನಲ್ಲಿ ಝ್ಯಾಕ್‌ ಕ್ರಾವ್ಲಿ 37 ರನ್‌, ಬೆನ್‌ ಡಕೆಟ್‌ 34 ರನ್‌ ಹಾಗೂ ಜಾಕೋಬ್‌ ಬೆಥೆಲ್‌ 46 ಎಸೆತಗಳಲ್ಲಿ 40 ರನ್‌ಗಳನ್ನು ಗಳಿಸಿದರು. ಆ ಮೂಲಕ ಇಂಗ್ಲೆಂಡ್‌ ತಂಡದ ಗೆಲುವಿಗೆ ನೆರವು ನೀಡಿದರು. ಆಸ್ಟ್ರೇಲಿಯಾ ತಂಡದ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲೆಂಡ್‌ ಹಾಗೂ ಜೇ ರಿಚರ್ಡ್ಸನ್‌ ತಲಾ ಎರಡೆರಡು ವಿಕೆಟ್‌ಗಳನ್ನು ಕಬಳಿಸಿದರು. 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಇಂಗ್ಲೆಂಡ್‌ ತಂಡದ ಮೊದಲ ಗೆಲುವು ಇದಾಗಿದೆ.

ಅಂದ ಹಾಗೆ ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಆಸ್ಟ್ರೇಲಿಯಾ ತಂಡ ಪ್ರಥಮ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತ್ತು. ಆದರೆ, ಕೆಳ ಮಧ್ಯಮ ಕ್ರಮಾಂಕದಲ್ಲಿ ಮೈಕಲ್‌ ನೇಸರ್‌ (35) ಅವರು ಆಸ್ಟ್ರೇಲಿಯಾ ಪರ ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡಿದ್ದರು. ಇಂಗ್ಲೆಂಡ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ್ದ ಜಾಶ್‌ ಟಾಂಗ್‌ ಅವರು 5 ವಿಕೆಟ್‌ ಸಾಧನೆ ಮಾಡಿದ್ದರು.



ಬಳಿಕ ಪ್ರಥಮ ಇನಿಂಗ್ಸ್‌ ಆಡಿದ್ದ ಇಂಗ್ಲೆಂಡ್‌ ತಂಡ, ಮೈಕಲ್‌ ನೇಸರ್‌ ಹಾಗೂ ಸ್ಕಾಟ್‌ ಬೋಲೆಂಡ್‌ ಅವರ ಮಾರಕ ಬೌಲಿಂಗ್‌ ದಾಳಿಗೆ ನಲುಗಿ 29.5 ಓವರ್‌ಗಳಿಗೆ 110 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ ಪ್ರಥಮ ಇನಿಂಗ್ಸ್‌ನಲ್ಲಿ ಆಂಗ್ಲರು 42 ರನ್‌ಗಳ ಹಿನ್ನಡೆಯನ್ನು ಅನುಭವಿಸಿದ್ದರು. ಬಳಿಕ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್‌ ಆರಂಭಿಸಿದ್ದ ಆಸ್ಟ್ರೇಲಿಯಾ ತಂಡ, ಬ್ರೈಡನ್‌ ಕಾರ್ಸ್‌ ಹಾಗೂ ಬೆನ್‌ ಸ್ಟೋಕ್ಸ್‌ ಅವರ ಮಾರಕ ಬೌಲಿಂಗ್‌ ದಾಳಿಗೆ ನಲುಗಿ ಕೇವಲ 132 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು ಹಾಗೂ ಎದುರಾಳಿ ಇಂಗ್ಲೆಂಡ್‌ ತಂಡಕ್ಕೆ 175 ರನ್‌ಗಳ ಗುರಿಯನ್ನು ನೀಡಿತ್ತು. ಆಸ್ಟ್ರೇಲಿಯಾ ಪರ ಟ್ರಾವಿಸ್‌ ಹೆಡ್‌ 46 ರನ್‌ಗಳಿಸಿದ್ದರು.