AUS vs SA: ಸತತ 4 ಅರ್ಧಶತಕ ಸಿಡಿಸಿ ವಿಶೇಷ ದಾಖಲೆ ಬರೆದ ಮ್ಯಾಥ್ಯೂ ಬ್ರೀಟ್ಜ್ಕೆ!
ದಕ್ಷಿಣ ಆಫ್ರಿಕಾ ತಂಡದ ಬ್ಯಾಟ್ಸ್‌ಮನ್ ಮ್ಯಾಥ್ಯೂ ಬ್ರೀಟ್ಜ್ಕೆ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಅಸಾಧಾರಣ ಫಾರ್ಮ್ ಅನ್ನು ಮುಂದುರಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಅವರು 88 ರನ್‌ಗಳ ಅದ್ಭುತ ಇನಿಂಗ್ಸ್ ಆಡಿದರು. ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯನ್ನು ಬರೆದಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯನ್ನು ಬರೆದ ಮ್ಯಾಥ್ಯೂ ಬ್ರೀಟ್ಜ್ಕೆ

ಮೆಕೆ: ದಕ್ಷಿಣ ಆಫ್ರಿಕಾ ತಂಡದ ಯುವ ಬ್ಯಾಟ್ಸ್‌ಮನ್ ಮ್ಯಾಥ್ಯೂ ಬ್ರೀಟ್ಜ್ಕೆ (Matthew Breetzke) ಏಕದಿನ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಆಸ್ಟ್ರೇಲಿತಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ (AUS vs SA) ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಬಲಗೈ ಬ್ಯಾಟ್ಸ್‌ಮನ್, 78 ಎಸೆತಗಳಲ್ಲಿ 88 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ತಮ್ಮ ಏಕದಿನ ಕ್ರಿಕೆಟ್‌ನ ಆರಂಭಿಕ ನಾಲ್ಕು ಇನಿಂಗ್ಸ್‌ಗಳಲ್ಲಿ ಅರ್ಧಶತಕ ಗಳಿಸಿದ ಮೊದಲ ದಕ್ಷಿಣ ಆಫ್ರಿಕಾ (South Africa) ಬ್ಯಾಟ್ಸ್‌ಮನ್ ಎಂಬ ನೂತನ ಮೈಲುಗಲ್ಲು ತಲುಪಿದ್ದಾರೆ. ಇವರ ಅರ್ಧಶತಕದ ಬಲದಿಂದ ದಕ್ಷಿಣ ಆಫ್ರಿಕಾ ತಂಡ 277 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 278 ರನ್‌ಗಳ ಗುರಿಯನ್ನು ನೀಡಿತು.
ಶುಕ್ರವಾರ ಇಲ್ಲಿನ ಗ್ರೇಟ್ ಬ್ಯಾರಿಯರ್ ರೀಫ್ ಅರೆನಾದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ಸಿಕ್ಕಿರಲಿಲ್ಲ. ತಂಡದ ಮೊತ್ತ 23 ರನ್ ಇರುವಾಗಲೇ ಆರಂಭಿಕರಾದ ಏಡೆನ್ ಮಾರ್ಕ್ರಮ್ ಹಾಗೂ ರಯಾನ್ ರಿಕೆಲ್ಟನ್ ಅವರ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಮ್ಯಾಥ್ಯೂ ಬ್ರೀಟ್ಜ್ಕೆ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ಅವರು ಆಡಿದ 78 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 8 ಬೌಂಡರಿಗಳೊಂದಿಗೆ 88 ರನ್‌ಗಳನ್ನು ಕಲೆ ಹಾಕಿದರು ಹಾಗೂ ಟೋನಿ ಡಿ ಜಾರ್ಜಿ ಅವರೊಂದಿಗೆ ಮೂರನೇ ವಿಕೆಟ್‌ಗೆ 67 ರನ್ ಮತ್ತು ಟ್ರಿಸ್ಟನ್ ಸ್ಟಬ್ಸ್ ಜೊತೆ ನಾಲ್ಕನೇ ವಿಕೆಟ್‌ಗೆ 89 ರನ್‌ಗಳ ಜೊತೆಯಾಟವನ್ನು ಆಡಿದರು.
AUS vs SA: ಗ್ಲೆನ್ ಮ್ಯಾಕ್ಸ್‌ವೆಲ್ ಅಬ್ಬರ, ಟಿ20ಐ ಸರಣಿ ಗೆದ್ದ ಆಸ್ಟ್ರೇಲಿಯಾ!
ಮ್ಯಾಥ್ಯೂ ಬ್ರೀಟ್ಜ್ಕೆ ಅವರು ಪಾಕಿಸ್ತಾನ ವಿರುದ್ಧದ ತಮ್ಮ ಚೊಚ್ಚಲ ಏಕದಿನ ಪಂದ್ಯದಲ್ಲಿ 150 ರನ್‌ಗಳನ್ನು ಸಿಡಿಸಿ ಗಮನ ಸೆಳೆದಿದ್ದರು. ಆ ಮೂಲಕ ಏಕದಿನ ಪದಾರ್ಪಣೆ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಇದಾದ ಬಳಿಕ ತಮ್ಮ ಎರಡನೇ ಪಂದ್ಯದಲ್ಲಿ ಅವರು ಇದೇ ತಂಡದ ವಿರುದ್ಧ 83 ರನ್ ಗಳಿಸಿದ್ದರು. ನಂತರ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ 57 ರನ್ ಬಾರಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಅರ್ಧಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯನ್ನು ಬರೆದಿದ್ದಾರೆ.
A brilliant knock from Tristan Stubbs! 🌟
— Proteas Men (@ProteasMenCSA) August 22, 2025
He brings up his half-century, showcasing class, skill, and determination to score under pressure. 🔥🇿🇦
Well batted, Stubbsy! 💪#WozaNawe pic.twitter.com/kKJKC2HHOJ
ವಿಶೇಷ ದಾಖಲೆ ಬರೆದ ಮ್ಯಾಥ್ಯೂ ಬ್ರೀಟ್ಜ್ಕೆ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಒಡಿಐ ಪಂದ್ಯದಲ್ಲಿ ಅರ್ಧಶತಕವನ್ನು ಸಿಡಿಸುವ ಮೂಲಕ ಮ್ಯಾಥ್ಯೂ ಬ್ರೀಡ್ಜ್ಕೆ ಅವರು ಏಕದಿನ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ತಮ್ಮ ಆರಂಭಿಕ ನಾಲ್ಕು ಒಡಿಐ ಪಂದ್ಯಗಳಲ್ಲಿ ಸತತ ಅರ್ಧಶತಕಗಳನ್ನು ಸಿಡಿಸಿದ ಮೊದಲ ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಮ್ಯಾಥ್ಯೂ ಬ್ರೀಟ್ಜ್ಕೆ ಬರೆದಿದ್ದಾರೆ. ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್ ನವಜೋತ್ ಸಿಂಗ್ ಸಿಧು ಅವರು ಒಡಿಐಗೆ ಪದಾರ್ಪಣೆ ಮಾಡಿದ ಬಳಿಕ ಆರಂಭಿಕ ಐದು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಬಾರಿಸಿದ್ದರು. ಇದರಲ್ಲಿ 1987ರ ವಿಶ್ವಕಪ್ ಟೂರ್ನಿಯಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಬ್ಯಾಟ್ ಮಾಡಲು ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಆರಂಭಿಕ ಮೂರು ಒಡಿಐ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಮ್ಯಾಥ್ಯೂ ಬ್ರೀಟ್ಜ್ಕೆ ಅವರ ಹೆಸರಿನಲ್ಲಿದೆ.