ನವದೆಹಲಿ: ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ (AUS vs SA) ನಡುವಿನ ಮೂರನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯ ಅಕ್ಟೋಬರ್ 27ರಿಂದ 31ರವರೆಗೆ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿ ಸದ್ಯ 1-1 ಅಂತರದಲ್ಲಿ ಸಮಬಲಗೊಂಡಿದ್ದು, ಟೆಸ್ಟ್ ಸರಣಿ ಗೆಲ್ಲಲು ಉಭಯ ತಂಡಗಳು ಕಣಕ್ಕಿಳಿಯಲಿವೆ. ದಕ್ಷಿಣ ಆಫ್ರಿಕಾ ತಂಡವನ್ನು ಎಂದಿನಂತೆ ತೆಂಬಾ ಬವೂಮಾ (Temba Bavuma) ಮುನ್ನಡೆಸಲಿದ್ದಾರೆ.
ಗಾಯದ ಸಮಸ್ಯೆಯಿಂದ ವೇಗದ ಬೌಲರ್ ಎನ್ರಿಕ್ ನೊರ್ಕಿಯಾ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೇಗಿ ಜೆರಾಲ್ಡ್ ಕೊಯೆಟ್ಜಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೊಯೆಟ್ಜಿ 2024ರ ನವೆಂಬರ್ ಬಳಿಕ ಮೊದಲ ಬಾರಿ ಟೆಸ್ಟ್ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಆರಂಭಿಕ ಬ್ಯಾಟರ್ ನಿಕ್ ಮ್ಯಾಡಿನ್ಸನ್ ಅವರನ್ನು ಕೈಬಿಡಲಾಗಿದೆ. ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಕುತ್ತಿಗೆ ನೋವಿನಿಂದ ಬಳಲುತ್ತಿದ್ದು, ಮೂರನೇ ಟೆಸ್ಟ್‌ನಲ್ಲಿ ಆಡುವುದು ಅನುಮಾನವಾಗಿದೆ.
2027ರ ಏಕದಿನ ವಿಶ್ವಕಪ್ ಭಾರತ ತಂಡಕ್ಕೆ ಐವರು ವೇಗಿಗಳನ್ನು ಆರಿಸಿದ ಅಜಿಂಕ್ಯ ರಹಾನೆ!
ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 214 ರನ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಆದರೆ, ಪೋರ್ಟ್ ಎಲಿಜಬೆತ್‌ನ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಇನಿಂಗ್ಸ್ ಮತ್ತು 31 ರನ್‌ಗಳಿಂದ ಗೆದ್ದು ಸರಣಿಯನ್ನು ಸಮಬಲಗೊಳಿಸಿತು.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಹಾಲಿ ಚಾಂಪಿಯನ್ ಆಗಿರುವ ದಕ್ಷಿಣ ಆಫ್ರಿಕಾ, ಲಾರ್ಡ್ಸ್‌ನಲ್ಲಿ ನಡೆದಿದ್ದ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾವನ್ನು ಮಣಿಸಿ ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.
ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್‌ಗೆ ದಕ್ಷಿಣ ಆಫ್ರಿಕಾ ಪ್ಲೇಯಿಂಗ್ XI
- ಏಡೆನ್ ಮಾರ್ಕ್ರಮ್ (ಆರಂಭಿಕ ಬ್ಯಾಟ್ಸ್‌ಮನ್)
- ಮಾರ್ಕಸ್ ಅಕಿರ್ಮನ್ (ಆರಂಭಿಕ ಬ್ಯಾಟ್ಸ್‌ಮನ್)
- ಡೇವಿಡ್ ಬೆಡಿಂಗ್‌ಹ್ಯಾಮ್ (ಬ್ಯಾಟ್ಸ್‌ಮನ್)
- ತೆಂಬಾ ಬವೂಮಾ (ನಾಯಕ, ಬ್ಯಾಟ್ಸ್‌ಮನ್)
- ಮ್ಯಾಥ್ಯೂ ಬ್ರಿಟ್ಜ್ಕಿ (ಬ್ಯಾಟ್ಸ್‌ಮನ್)
- ರಯಾನ್ ರಿಕೆಲ್ಟನ್ (ವಿಕೆಟ್ ಕೀಪರ್, ಬ್ಯಾಟ್ಸ್‌ಮನ್)
- ವಿಯಾನ್ ಮುಲ್ಡರ್ (ಬೌಲಿಂಗ್ ಆಲ್‌ರೌಂಡರ್)
- ಮಾರ್ಕೊ ಯೆನ್ಸನ್ (ಬೌಲಿಂಗ್ ಆಲ್‌ತೌಂಡರ್)
- ಸೈಮನ್ ಹಾರ್ಮರ್ (ಆಲ್‌ರೌಂಡರ್)
- ಜೆರಾಲ್ಡ್ ಕೋಯೆಟ್ಜ್ಕಿ (ವೇಗದ ಬೌಲರ್)
- ಕಗಿಸೊ ರಬಾಡ (ವೇಗದ ಬೌಲರ್)