ಸೇಂಟ್ ಕಿಟ್ಸ್: ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿದ ಆಸ್ಟ್ರೇಲಿಯಾ ತಂಡ ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯದಲ್ಲಿ (AUS vs WI) ವೆಸ್ಟ್ ಇಂಡೀಸ್ ವಿರುದ್ದ ಮೂರು ವಿಕೆಟ್‌ಗಳ ಗೆಲುವು ಪಡೆಯಿತು. ಆ ಮೂಲಕ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ವಿಶೇಷ ದಾಖಲೆಯನ್ನು ಬರೆದಿದೆ. ಅಂದ ಹಾಗೆ ಈ ಪಂದ್ಯದಲಿ ಮಾರಕ ಬೌಲಿಂಗ್‌ದಾಳಿ ನಡೆಸಿ ಮೂರು ವಿಕೆಟ್‌ಗಳನ್ನು ಕಬಳಿಸಿದ ಆಸೀಸ್‌ನ ಬೆನ್ ದ್ವಾರಶುಯಿಸ್ (Ben Dwarshuis) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಾರ್ನರ್ ಪಾರ್ಕ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ವೆಸ್ಟ್ ಇಂಡೀಸ್ ತಂಡ, ಬೆನ್ ದ್ವಾರಶುಯಿಸ್ ಅವರ ಮಾರಕ ಬೌಲಿಂಗ್ ದಾಳಿಯ ಹೊರತಾಗಿಯೂ ಶಿಮ್ರಾನ್ ಹೆಟ್ಮಾಯರ್ ಅವರ ಸ್ಪೋಟಕ ಅರ್ಧಶತಕದ ಬಲದಿಂದ 19.4 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡರೂ 170 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 171 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ನೀಡಿತ್ತು.
IND vs ENG: ಈ ಒಂದೇ ಒಂದು ಕಾರಣಕ್ಕೆ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ವಿರುದ್ದ ಡೇಲ್ ಸ್ಟೇನ್ ಆಕ್ರೋಶ!
ಬಳಿಕ ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ 25 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡರೂ ಮಿಚೆಲ್ ಒವೆನ್ ಸೇರಿದಂತೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಸ್ಪೋಟಕ ಬ್ಯಾಟಿಂಗ್ ಬಲದಿಂದ 17 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 173 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಮೂರು ವಿಕೆಟ್‌ಗಳಿಂದ ಗೆಲುವು ಪಡೆಯಿತು. ಈ ಪಂದ್ಯದ ಗೆಲುವಿನ ಮೂಲಕ ಆಸ್ಟ್ರೇಲಿಯಾ ತಂಡ ಟಿ20ಐ ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತು. ಆ ಮೂಲಕ ಅಂತಾರಾಷ್ಟ್ರೀಯ ಟಿ2 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡ ದೊಡ್ಡ ದಾಖಲೆಯನ್ನು ಬರೆದಿದೆ.
A tough series result comes to an ends in St. Kitts.#WIvAUS #FullAhEnergy pic.twitter.com/ijjctThKcf
— Windies Cricket (@windiescricket) July 29, 2025
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ತಂಡ ಟಿ20ಐ ಸರಣಿಗೂ ಮುನ್ನ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಈ ಸರಣಿಯನ್ನೂ ಆಸ್ಟ್ರೇಲಿಯಾ ತಂಡ 3-0 ಅಂತರದಲ್ಲಿ ವೈಟ್‌ವಾಷ್ ಮಾಡಿಕೊಂಡಿತ್ತು. ಇದಾದ ಬಳಿಕ ಈಗ ಐದು ಪಂದ್ಯಗಳ ಟಿ20ಐ ಸರಣಿಯನ್ನೂ ಕೂಡ 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಪ್ರವಾಸದಲ್ಲಿ ಆಸ್ಟ್ರೇಲಿಯಾ ತಂಡ ಎಂಟೂ ಪಂದ್ಯಗಳನ್ನು ಗೆದ್ದಿದೆ.
IND vs ENG: ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ತಮ್ಮ ನೆಚ್ಚಿನ ಇನಿಂಗ್ಸ್ ಹೆಸರಿಸಿದ ಶುಭಮನ್ ಗಿಲ್!
ಕೆರಿಬಿಯನ್ ನಾಡಿನಲ್ಲಿ ಇತಿಹಾಸ ಬರೆದ ಆಸ್ಟ್ರೇಲಿಯಾ
ವೆಸ್ಟ್ ಇಂಡೀಸ್ ವಿರುದ್ದ ಟಿ20ಐ ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿ ಆಸ್ಟ್ರೇಲಿಯಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆದಿದೆ. ಐಸಿಸಿಯ ಪೂರ್ಣ ಪ್ರಮಾಣದ ರಾಷ್ಟ್ರವೊಂದರ ವಿರುದ್ಧ ಐದು ಪಂದ್ಯಗಳ ಟಿ20ಐ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡ ಮೊದಲ ತಂಡ ಎಂಬ ಸಾಧನೆಗೆ ಆಸ್ಟ್ರೇಲಿಯಾ ಭಾಜನವಾಗಿದೆ.