ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

AUS vs PAK: ಅರ್ಧಶತಕ ಬಾರಿಸಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಬಾಬರ್‌ ಆಝಮ್‌!

Babar Azam Breaks Virat Kohli's Record: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20ಐ ಪಂದ್ಯದಲ್ಲಿ ಅರ್ಧಶತಕವನ್ನು ಬಾರಿಸಿದ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್‌ ಆಝಮ್‌ ಅವರು ಭಾರತ ತಂಡದ ಹಿರಿಯ ಬ್ಯಾಟ್ಸ್‌ಮನ್‌ ಬಾಬರ್‌ ಆಝಮ್‌ ಅವರ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ಫಾರ್ಮ್‌ಗೆ ಮರಳಿದ್ದಾರೆ.

AUS vs PAK: ವಿರಾಟ್‌ ಕೊಹ್ಲಿ ದಾಖಲೆ ಮುರಿದ ಬಾಬರ್‌ ಆಝಮ್!

ವಿರಾಟ್‌ ಕೊಹ್ಲಿಯ ದಾಖಲೆ ಮುರಿದ ಬಾಬರ್‌ ಆಝಮ್‌. -

Profile
Ramesh Kote Feb 2, 2026 6:01 PM

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20ಐ ಪಂದ್ಯದಲ್ಲಿ (AUS vs PAK) ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್‌ ಆಝಮ್‌ (Babar Azam) ಅರ್ಧಶತಕವನ್ನು ಬಾರಿಸಿದ್ದಾರೆ. ಆ ಮೂಲಕ ಭಾರತ ತಂಡದ ದಿಗ್ಗಜ ವಿರಾಟ್‌ ಕೊಹ್ಲಿಯ (Virat Kohli) ದೀರ್ಘಾವಧಿ ದಾಖಲೆಯಲ್ಲಿ ಆಝಮ್‌ ಮುರಿದಿದ್ದಾರೆ. ಅಲ್ಲದೆ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ಪಾಕ್‌ ಮಾಜಿ ನಾಯಕ ಫಾರ್ಮ್‌ಗೆ ಮರಳಿದಂತಾಯಿತು. ಬಾಬರ್‌ ಆಝಮ್‌ ಅವರ ಅರ್ಧಶತಕದ ಬಲದಿಂದ ಪಾಕಿಸ್ತಾನ ತಂಡ, ಆಸ್ಟ್ರೇಲಿಯಾ ವಿರುದ್ಧ 111 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಅತ್ಯುತ್ತಮವಾಗಿ ಬ್ಯಾಟ್‌ ಮಾಡಿದ್ದ ಬಾಬರ್‌ ಆಝಮ್‌, 36 ಎಸೆತಗಳಲ್ಲಿ ಒಂದು ಭರ್ಜರಿ ಸಿಕ್ಸರ್‌ ಹಾಗೂ ಮೂರು ಬೌಂಡರಿಗಳೊಂದಿಗೆ ಅಜೇಯ 50 ರನ್‌ಗಳನ್ನು ಬಾರಿಸಿದ್ದರು. ಆ ಮೂಲಕ ತಮ್ಮ ಟಿ20ಐ ಕ್ರಿಕೆಟ್‌ ವೃತ್ತಿ ಜೀವನದಲ್ಲಿ 39ನೇ ಅರ್ಧಶತಕವನ್ನು ಪೂರ್ಣಗೊಳಿಸಿದ್ದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ವಿರಾಟ್‌ ಕೊಹ್ಲಿಯನ್ನು ಬಾಬರ್‌ ಆಝಮ್‌ ಹಿಂದಿಕ್ಕಿದ್ದಾರೆ. ಈ ಹಿಂದೆ 38 ಅರ್ಧಶತಕಗಳ ಮೂಲಕ ಕೊಹ್ಲಿ ಜತೆ ಆಝಮ್‌ ಜಂಟಿ ದಾಖಲೆಯನ್ನು ಹೊಂದಿದ್ದರು.

T20 World Cup 2026: ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿ, ಅಭ್ಯಾಸ ಪಂದ್ಯಗಳ ಪ್ರಕಟ!

ಟಿ20ಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ದಾಖಲೆ

ವಿರಾಟ್‌ ಕೊಹ್ಲಿಯ ದಾಖಲೆ ಮುರಿಯುವ ಜತೆಗೆ ಬಾಬರ್‌ ಆಝಮ್‌ ಮತ್ತೊಂದು ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಅವರು ಇಲ್ಲಿಯವರೆಗೂ ಆಡಿದ 132 ಇನಿಂಗ್ಸ್‌ಗಳಿಂದ 4,505 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ ಅವರು 39.51ರ ಸರಾಸರಿ ಮತ್ತು 128.38ರ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ ಸಿಡಿಸಿದ್ದಾರೆ.

ಟಿ20 ವಿಶ್ವಕಪ್; ಫಿಟ್ನೆಸ್‌ಗಾಗಿ ತಿಲಕ್ ವರ್ಮಾ ಭಾರತ 'ಎ' ತಂಡಕ್ಕೆ ಸೇರ್ಪಡೆ

ಆಸ್ಟ್ರೇಲಿಯಾಗೆ ವೈಟ್‌ವಾಷ್‌ ಆಘತ ನೀಡಿದ ಪಾಕ್‌

ಅಂದ ಹಾಗೆ ಪಾಕಿಸ್ತಾನ ತಂಡ, ಮೂರು ಪಂದ್ಯಗಳ ಟಿ20ಐ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿದೆ. ಆ ಮೂಲಕ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯುವ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಇನ್ನು ಮೂರನೇ ಪಂದ್ಯದಲ್ಲಿ111 ರನ್‌ಗಳಿಂದ ಆಸ್ಟ್ರೇಲಿಯಾ ಸೋಲು ಅನುಭವಸಿತು. ಇದು ಟಿ20ಐ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಪಾಲಿಗೆ ಅತ್ಯಂತ ದೊಡ್ಡ ಅಂತರದ ಸೋಲಾಗಿದೆ.

ಈ ಸರಣಿಯಲ್ಲಿ ಪಾಕ್‌ ನಾಯಕ ಸಲ್ಮಾನ್‌ ಆಘಾ ಅವರು ಮೂರು ಇನಿಂಗ್ಸ್‌ಗಳಿಂದ 40ರ ಸರಾಸರಿ ಮತ್ತು 171.42ರ ಸ್ಟ್ರೈಕ್‌ ರೇಟ್‌ನಲ್ಲಿ 120 ರನ್‌ಗಳನ್ನು ಕಲೆ ಹಾಕಿದರು ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

T20 World Cup 2026: ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿ, ಅಭ್ಯಾಸ ಪಂದ್ಯಗಳ ಪ್ರಕಟ!

ಭಾರತದ ಜೊತೆ ಎ ಗುಂಪಿನಲ್ಲಿರುವ ಪಾಕಿಸ್ತಾನ

ಪಾಕಿಸ್ತಾನ ತಂಡ, ಭಾರತ, ನಮೀಬಿಯಾ, ಯುಎಸ್‌ಎ, ನೆದರ್ಲೆಂಡ್ಸ್‌ ತಂಡಗಳ ಜೊತೆಗೆ ಎ ಗುಂಪಿನಲ್ಲಿ ಸ್ಥಾನವನ್ನು ಪಡೆದಿದೆ. ಫೆಬ್ರವರಿ 7 ಎಂದು ನೆದರ್ಲೆಂಡ್ಸ್‌ ವಿರುದ್ಧ ಆಡುವ ಮೂಲಕ ಪಾಕಿಸ್ತಾನ ತಂಡ ಚುಟುಕು ವಿಶ್ವಕಪ್‌ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಆದರೆ, ಫೆಬ್ರವರಿ 15 ರಂದು ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಬಹಿಷ್ಕರಿಸಿದೆ.