ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಿಸಿಸಿಐ ಮೀಟಿಂಗ್‌ನಲ್ಲಿ ರೋಹಿತ್‌ ಶರ್ಮಾರ 2027ರ ಐಸಿಸಿ ಏಕದಿನ ವಿಶ್ವಕಪ್‌ ಭವಿಷ್ಯ ನಿರ್ಧಾರ!

ಭಾರತ ಕ್ರಿಕೆಟ್ ತಂಡದ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ಬಿಸಿಸಿಐ ಗುರುವಾರ (ಸೆಪ್ಟೆಂಬರ್ 3) ಮುಂಬೈನಲ್ಲಿ ಮಹತ್ವದ ಪರಿಶೀಲನಾ ಸಭೆ ನಡೆಸಲಿದೆ. ಈ ಸಭೆಯಲ್ಲಿ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಭಾಗವಹಿಸುವ ನಿರೀಕ್ಷೆಯಿದೆ.

ಬಿಸಿಸಿಐ ಸಭೆಯಲ್ಲಿ ರೋಹಿತ್‌ ಶರ್ಮಆ ಭವಿಷ್ಯದ ಬಗ್ಗೆ ಚರ್ಚೆ ಸಾಧ್ಯತೆ.

ಮುಂಬೈ: ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ (Devajit Saikia) ನೇತೃತ್ವದಲ್ಲಿ ಮಹತ್ವದ ಸಭೆ (BCCI Review Meeting) ಗುರುವಾರ ಮುಂಬೈನಲ್ಲಿ ನಡೆಯಲಿದೆ. ಸಭೆಯಲ್ಲಿ ಟೀಮ್‌ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಭಾಗವಹಿಸಿದ್ದಾರೆ. ನಾಲ್ವರು ಅಧಿಕಾರಿಗಳೂ ಸಭೆಗೆ ಖುದ್ದಾಗಿ ಹಾಜರಾಗುವ ನಿರೀಕ್ಷೆಯಿದೆ.

ಈ ಮಹತ್ವದ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಲಿರುವ ವಿಚಾರವೆಂದರೆ ಟೀಮ್‌ ಇಂಡಿಯಾದಲ್ಲಿ ರೋಹಿತ್ ಶರ್ಮಾ ಅವರ ಮುಂದಿನ ಭವಿಷ್ಯ. ವಿಶೇಷವಾಗಿ 2027ರ ಏಕದಿನ ವಿಶ್ವಕಪ್‌ ಟೂರ್ನಿಯ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾಅವರ ಪಾತ್ರದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಸಭೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅಜೆಂಡಾವನ್ನು ಬಿಸಿಸಿಐ ಇನ್ನೂ ಪ್ರಕಟಿಸಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಭಾರತ ತಂಡದ ಪ್ರದರ್ಶನಗಳ ಬಗ್ಗೆ ಸಭೆಯಲ್ಲಿ ಸಮಗ್ರ ಪರಿಶೀಲನೆ ನಡೆಯಲಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಐರ್ಲೆಂಡ್, ಇಂಗ್ಲೆಂಡ್ ಹಾಗೂ ಶ್ರೀಲಂಕಾ ಪ್ರವಾಸಗಳಲ್ಲಿ ಭಾರತ ತಂಡ ನೀಡಿದ ಪ್ರದರ್ಶನಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಇದರ ಜೊತೆಗೆ, ಮುಂದಿನ ದಿನಗಳಲ್ಲಿ ತಂಡದ ಕಾರ್ಯತಂತ್ರ ಹೇಗಿರಬೇಕು ಎಂಬ ಬಗ್ಗೆಯೂ ವಿಸ್ತೃತವಾಗಿ ಚರ್ಚಿಸಲಾಗುತ್ತದೆ. ಬಿಸಿಸಿಐಯ ವಾರ್ಷಿಕ ಸಾಮಾನ್ಯ ಸಭೆ (AGM) ನಡೆಯುವ ಮುನ್ನವೇ ಈ ಪರಿಶೀಲನಾ ಸಭೆ ನಡೆಯುತ್ತಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಗುರುವಾರದ ಚರ್ಚೆಯಲ್ಲಿ ಹೊರಬರುವ ಪ್ರಮುಖ ಶಿಫಾರಸುಗಳನ್ನು ಬಿಸಿಸಿಐ ಸಾಮಾನ್ಯ ಸಭೆಯ ಮುಂದೆಯೂ ಮಂಡಿಸುವ ಸಾಧ್ಯತೆಯಿದೆ.

Duleep Trophy 2026: ಉತ್ತರ ವಲಯ ಎದುರು ಗೆದ್ದು 24ನೇ ಬಾರಿ ಫೈನಲ್‌ಗೇರಿದ ದಕ್ಷಿಣ ವಲಯ!

ರೋಹಿತ್‌ ಶರ್ಮಾರ ಏಕದಿನ ವಿಶ್ವಕಪ್‌ ಭವಿಷ್ಯ ನಿರ್ಧಾರ

2027ರ ಏಕದಿನ ವಿಶ್ವಕಪ್‌ ಟೂರ್ನಿಗೆ ಟೀಮ್‌ ಇಂಡಿಯಾದ ಯೋಜನೆಗಳಲ್ಲಿ ರೋಹಿತ್ ಶರ್ಮಾ ಇರಲಿದ್ದಾರೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇತ್ತೀಚೆಗೆ, ರೋಹಿತ್ ಶರ್ಮಾ ಅವರನ್ನು ಆಯ್ಕೆ ಸಮಿತಿ ತನ್ನ ಮುಂದಿನ ಯೋಜನೆಗಳಿಂದ ಹೊರಗಿಟ್ಟಿದೆ ಎಂಬ ವರದಿಯೊಂದು ಮುನ್ನೆಲೆಗೆ ಬಂದಿತ್ತು. ಅಲ್ಲದೆ, ಲಾರ್ಡ್ಸ್‌ನಲ್ಲಿ ರೋಹಿತ್ ಆಡಿದ ಏಕದಿನ ಪಂದ್ಯವೇ ಈ ಮಾದರಿಯಲ್ಲಿ ಅವರ ವೃತ್ತಿಜೀವನದ ಕೊನೆಯ ಪಂದ್ಯವಾಗಿರಬಹುದು ಎಂಬ ಮಾತುಗಳೂ ಕೇಳಿಬಂದಿದ್ದವು.

ಆದರೆ, ಈ ವರದಿಗಳಿಗೆ ಬಿಸಿಸಿಐ ತಕ್ಷಣವೇ ಪ್ರತಿಕ್ರಿಯಿಸಿ ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿತ್ತು. 2027ರ ಏಕದಿನ ವಿಶ್ವಕಪ್‌ ಟೂರ್ನಿಯ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಅವರ ಅನುಭವ ಹಾಗೂ ತಂಡದಲ್ಲಿನ ಪಾತ್ರದ ಬಗ್ಗೆ ಅಂತಿಮವಾಗಿ ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡ ಬೆನ್ನಲ್ಲೆ ಶತಕ ಸಿಡಿಸಿದ ಪ್ರಭ್‌ಸಿಮ್ರಾನ್‌ ಸಿಂಗ್!

ಗುರುವಾರ ಬಿಸಿಸಿಐನ ಮಹತ್ವದ ಸಭೆಯಲ್ಲಿ ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತ ಗೊಂದಲಕ್ಕೆ ಕೆಲಮಟ್ಟಿನ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ. ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ ಮುಂದುವರಿಯಲಿದ್ದಾರೆಯೇ ಹಾಗೂ ಮುಂದಿನ ದಿನಗಳಲ್ಲಿ ತಂಡದ ಮ್ಯಾನೇಜ್‌ಮೆಂಟ್ ಅವರಿಗಾಗಿ ಯಾವುದೇ ಪಾತ್ರವನ್ನು ನೋಡುತ್ತಿದೆಯೇ ಎಂಬುದು ಸಭೆಯ ಪ್ರಮುಖ ಚರ್ಚಾ ವಿಷಯಗಳಾಗುವ ಸಾಧ್ಯತೆಯಿದೆ. ಸಭೆಯ ಅಧಿಕೃತ ಅಜೆಂಡಾವನ್ನು ಇನ್ನೂ ಪ್ರಕಟಿಸದಿದ್ದರೂ, 2027ರ ಏಕದಿನ ವಿಶ್ವಕಪ್‌ ಹಿನ್ನೆಲೆಯಲ್ಲಿ ರೋಹಿತ್ ಅವರ ಪಾತ್ರದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ.