ರೋಹಿತ್ ಶರ್ಮಾ-ವಿರಾಟ್ ಕೊಹ್ಲಿಯ ಏಕದಿನ ವಿಶ್ವಕಪ್ ಭವಿಷ್ಯ ನುಡಿದ ಬಿಸಿಸಿಐ ಸೆಕ್ರೆಟರಿ!
ಬಹುನಿರೀಕ್ಷಿತ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇನ್ನೂ ಕೇವಲ ಒಂದು ವರ್ಷ ಮಾತ್ರ ಬಾಕಿ ಇದೆ. ಇದರ ನಡುವೆ ಹಿರಿಯ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 50 ಓವರ್‌ಗಳ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಾರಾ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಕೊಹ್ಲಿ-ರೋಹಿತ್‌ರ ಏಕದಿನ ವಿಶ್ವಕಪ್ ಭವಿಷ್ಯ ನುಡಿದ ಬಿಸಿಸಿಐ. -
ನವದೆಹಲಿ: ಮುಂದಿನ ವರ್ಷ ದಕ್ಷಿಣ ಆಫ್ರಿಕಾ, ನಮೀಬಿಯಾ ಹಾಗೂ ಜಿಂಬಾಬ್ವೆ ಜಂಟಿ ಆತಿಥ್ಯದಲ್ಲಿ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ (ICC ODI World Cup 2027) ನಡೆಯಲಿದೆ. ಈ ಟೂರ್ನಿಗೆ ಭಾರತ ತಂಡ ಇಂದಿನಿಂದಲೇ ಸಜ್ಜಾಗುತ್ತಿದೆ. ಇದರ ನಡುವೆ ಮಾಜಿ ನಾಯಕರಾದ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಅವರು ಕೂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಎದುರು ನೋಡುತ್ತಿದ್ದಾರೆ. ಆದರೆ, ಇವರಿಗೆ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಗ್ಗೆ ಇನ್ನೂ ಯಾವುದೇ ಖಚಿತತೆ ಇಲ್ಲ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೀಗ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇಬ್ಬರೂ ಈಗಾಗಲೇ ಟಿ20ಐ ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ ಹಾಗೂ ಭಾರತ ತಂಡಕ್ಕೆ 2027ರ ಐಸಿಸಿ ಏಕದಿನ ವಿಶ್ವಕಪ್ ಗೆದ್ದುಕೊಡಲು ಎದುರು ನೋಡುತ್ತಿದ್ದಾರೆ. ಹಾಗಾಗಿ ಈ ಇಬ್ಬರೂ 50 ಓವರ್‌ಗಳ ಸ್ವರೂಪದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ಬಿಸಿಸಿಐ ಆಯ್ಕೆದಾರರು, ಏಕದಿನ ವಿಶ್ವಕಪ್ ಟೂರ್ನಿಗೆ ಅತ್ಯುತ್ತಮ ತಂಡವನ್ನು ಕಟ್ಟಲು ಪ್ರಯತ್ನ ನಡೆಸುತ್ತಿದ್ದಾರೆ. ಯುವ ಹಾಗೂ ಅನುಭವಿ ಮಿಶ್ರಣದೊಂದಗೆ ಬಲಿಷ್ಠ ತಂಡವನ್ನು ಕಟ್ಟಬೇಕೆಂಬುದು ಟೀಮ್ ಮ್ಯಾನೇಜ್‌ಮೆಂಟ್ ಉದ್ದೇಶ.
ʻನನ್ನ ಜೊತೆ ಫೈಟ್ ಮಾಡಲು ಧೈರ್ಯ ಇದೆಯಾ?ʼ: ಹರ್ಭಜನ್ ಸಿಂಗ್‌ಗೆ ಶ್ರೀಶಾಂತ್ ಚಾಲೆಂಜ್!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲೆಗಳು ಹಾಗೂ ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡಗೆಗಳ ಆಧಾರದ ಮೇಲೆ ಕೊಹ್ಲಿ ಹಾಗೂ ರೋಹಿತ್ ಅವರನ್ನು ನೇರವಾಗಿ ಏಕದಿನ ವಿಶ್ವಕಪ್ ಟೂರ್ನಿಯ ತಂಡದಲ್ಲಿ ಸ್ಥಾನ ನೀಡಬಹುದು. ಆದರೆ, ಇಲ್ಲಿ ಅವರ ವಯಸ್ಸು ಮುಂದಿನ ವರ್ಷಕ್ಕೆ ಏರಿಕೆಯಾಗಲಿದೆ. ಕೊಹ್ಲಿಗೆ 38 ವರ್ಷ ವಯಸ್ಸಾದರೆ, ರೋಹಿತ್ ಶರ್ಮಾಗೆ 40 ವರ್ಷ ವಯಸ್ಸಾಗಲಿದೆ. ಹಾಗಾಗಿ ಅವರು ಫಿಟ್‌ನೆಸ್ ಹಾಗೂ ಅವರ ಫಾರ್ಮ್ ಇಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಆದರೆ, ಪ್ರಸ್ತುತ ಸನ್ನಿವೇಶದಲ್ಲಿ ಈ ಇಬ್ಬರೂ ಉತ್ತಮ ಫಿಟ್‌ನೆಸ್ ಅನ್ನು ಕಾಪಾಡಿಕೊಂಡಿದ್ದಾರೆ.
ಇದೀಗ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಮ್ಮದೇ ಆದ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಈ ಇಬ್ಬರ ಭವಿಷ್ಯ ಹಲವು ಸಂಗತಿಗಳನ್ನು ಅವಲಂಬಿಸಿದೆ ಎಂದು ಅವರು ಹೇಳಿದ್ದಾರೆ.
ʻಬೌನ್ಸರ್‌ಗೆ ಭಯ ಇದೆಯಾ?ʼ:2014ರಲ್ಲಿ ರವಿ ಶಾಸ್ತ್ರಿ ನೀಡಿದ್ದ ಸಲಹೆಯನ್ನು ನೆನೆದ ವಿರಾಟ್ ಕೊಹ್ಲಿ!
“ಮಂಡಳಿಯ ಮುಖ್ಯಸ್ಥನಾಗಿ ಹೇಳುವುದಾದರೆ, ನಮ್ಮಲ್ಲಿ ಅತ್ಯಂತ ಸಮನ್ವಯದಿಂದ ಕಾರ್ಯನಿರ್ವಹಿಸುವ ತಂಡವಿದೆ ಮತ್ತು ಅನೇಕ ತಜ್ಞರು ಇದ್ದಾರೆ. ಎಲ್ಲ ಹಿತಾಸಕ್ತಿಪಕ್ಷಗಳ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ. ಯಾವುದೇ ನಿರ್ಧಾರ ಕೈಗೊಳ್ಳುವಾಗ ಕ್ರಿಕೆಟ್ ಸಮಿತಿ, ಆಯ್ಕೆ ಸಮಿತಿ ಹಾಗೂ ಇತರ ಎಲ್ಲ ಸಂಬಂಧಿತರಿಂದ ಚರ್ಚೆ ನಡೆಸಲಾಗುತ್ತದೆ. ಇದರಲ್ಲಿ ಸಹಾಯಕ ಸಿಬ್ಬಂದಿ, ಮುಖ್ಯ ಕೋಚ್ ಹಾಗೂ ಸಂಬಂಧಿತ ಆಟಗಾರರೂ ಸೇರಿದ್ದಾರೆ. ಈ ಕುರಿತು ನಿರಂತರವಾಗಿ ಸಂವಾದಗಳು ನಡೆಯುತ್ತಿರುತ್ತವೆ,” ಎಂದು ದೇವಜಿತ್ ಸೈಕಿಯಾ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ: ಸೈಕಿಯಾ
ಈ ಇಬ್ಬರ ಭವಿಷ್ಯದ ಬಗ್ಗೆ ನಾವು ಸಾರ್ವಜನಿಕವಾಗಿ ಬಹಿರಂಗಪಡಿಸಿಲು ಸಾಧ್ಯವಾಗಿಲ್ಲ. ಆದರೆ, ಈ ವಿಷಯಗಳನ್ನು ನಾವು ಸಾರ್ವಜನಿಕಗೊಳಿಸುವುದಕ್ಕೂ ಮುನ್ನ ಇದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
“ಆ ಕಾರಣಕ್ಕಾಗಿಯೇ ಯಾವುದೇ ವಿಶೇಷ ಸಂವಾದ ಸಭೆಯ ಅಗತ್ಯವಿಲ್ಲ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಜೊತೆಗೆ, ಈ ವಿಚಾರಗಳ ಬಗ್ಗೆ ಮಾಧ್ಯಮಗಳ ಮುಂದೆ ಅಥವಾ ಸಾರ್ವಜನಿಕವಾಗಿ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ ಇವು ಕಾರ್ಯತಂತ್ರಕ್ಕೆ ಸಂಬಂಧಿಸಿದ ಚರ್ಚೆಗಳಾಗಿವೆ. ಈ ವಿಷಯಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲು ನನಗೆ ಅಧಿಕಾರವೂ ಇಲ್ಲ,” ಎಂದು ದೇವಜಿತ್ ಸೈಕಿಯಾ ತಿಳಿಸಿದ್ದಾರೆ.