ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʻಕಳೆದ 15 ವರ್ಷಗಳು ಅವಿಸ್ಮರಣೀಯವಾಗಿದ್ದವುʼ: ಭಾವನಾತ್ಮಕ ವಿದಾಯದ ಸಂದೇಶ ಬರೆದ ಬೆನ್‌ ಸ್ಟೋಕ್ಸ್‌!

Ben Stokes emotional farewell: ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಬೆನ್‌ ಸ್ಟೋಕ್ಸ್‌ ಅವರು ನ್ಯೂಜಿಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದೀಗ ಅವರು ಭಾವನಾತ್ಮಕ ಸಂದೇಶವನ್ನು ಬರೆದಿದ್ದಾರೆ.

ವಿದಾಯದ ಸಂಬಂಧ ಭಾವನಾತ್ಮಕ ಸಂದೇಶ ಹಂಚಿಕೊಂಡ ಬೆನ್‌ ಸ್ಟೋಕ್ಸ್‌.

ಲಂಡನ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕೆಲವೇ ದಿನಗಳ ಬಳಿಕ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಹಾಗೂ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ (Ben Stokes) ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಸಂದೇಶವನ್ನು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಬೆಂಬಲ ನೀಡಿದ್ದ ಅಭಿಮಾನಿಗಳು, ಸಹ ಆಟಗಾರರು ಸೇರಿದಂತೆ ಪ್ರತಿಯೊಬ್ಬರಿಗೂ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್‌ ತಂಡಗಳ (ENG vs NZ) ನಡುವಣ ಮೂರನೇ ಟೆಸ್ಟ್‌ ಪಂದ್ಯದ ವೇಳೆ ಬೆನ್‌ ಸ್ಟೋಕ್ಸ್‌ ಅವರು ವಿದಾಯವನ್ನು ಹೇಳಿದ್ದರು.

ಇಂಗ್ಲೆಂಡ್‌ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಲ್‌ರೌಂಡರ್‌ಗಳು ಹಾಗೂ ಪಂದ್ಯ ವಿಜೇತರಲ್ಲಿ ಒಬ್ಬರಾಗಿರುವ ಬೆನ್ ಸ್ಟೋಕ್ಸ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ನಿರ್ಧಾರದ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ. ತಮ್ಮ ಕ್ರಿಕೆಟ್ ಪಯಣದ ಏಳು-ಬೀಳುಗಳನ್ನು ನೆನಪಿಸಿಕೊಂಡ ಅವರು, ನಿವೃತ್ತಿ ಪಡೆಯುವ ನಿರ್ಧಾರವನ್ನು ತಾವು ಮಾತ್ರ ತೆಗೆದುಕೊಳ್ಳಬಹುದಾದ ವೈಯಕ್ತಿಕ ತೀರ್ಮಾನ ಎಂದು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್‌ ಸ್ಟೋಕ್ಸ್‌ಗೆ ಸಂದೇಶ ರವಾನಿಸಿದ ಸಚಿನ್‌ ತೆಂಡೂಲ್ಕರ್‌!

ಕಳೆದ 15 ವರ್ಷಗಳು ಅವಿಸ್ಮರಣೀಯವಾಗಿದ್ದವು: ಸ್ಟೋಕ್ಸ್‌

"ಕಳೆದ 15 ವರ್ಷಗಳು ನನ್ನ ಜೀವನದಲ್ಲಿ ಅವಿಸ್ಮರಣೀಯ ಪಯಣವಾಗಿತ್ತು. ಈ ಅವಧಿಯಲ್ಲಿ ಅತ್ಯುತ್ತಮ ಸಂತಸದ ಕ್ಷಣಗಳಿಂದ ಹಿಡಿದು ಮೈದಾನದ ಒಳಗೆ ಮತ್ತು ಹೊರಗೆ ಎದುರಾದ ಕಠಿಣ ಸವಾಲುಗಳವರೆಗೆ ಎಲ್ಲವನ್ನೂ ಅನುಭವಿಸಿದ್ದೇನೆ. ನನ್ನ ಸಮಯ ಮುಗಿದಿದೆ ಎಂದು ನಾನು ಭಾವಿಸಿದ್ದೇನೆ. ಈ ನಿರ್ಧಾರವನ್ನು ನನ್ನ ಹೊರತು ಬೇರೆ ಯಾರೂ ತೆಗೆದುಕೊಳ್ಳಲು ಸಾಧ್ಯವಿರಲಿಲ್ಲ. ಈ ಸಂದರ್ಭದಲ್ಲಿ ಕಳೆದ ಹಲವು ವರ್ಷಗಳಿಂದ ನನಗೆ ಬೆಂಬಲ ನೀಡಿದ ಪ್ರತಿಯೊಬ್ಬ ಇಂಗ್ಲೆಂಡ್ ಅಭಿಮಾನಿ ಹಾಗೂ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು," ಎಂದು ಬೆನ್‌ ಸ್ಟೋಕ್ಸ್ ಬರೆದಿದ್ದಾರೆ.‌



ಸಹ ಆಟಗಾರರಿಗೆ ಕೃತಜ್ಞತೆ ಸಲ್ಲಿಸಿದ ಸ್ಟೋಕ್ಸ್

35ರ ವಯಸ್ಸಿನ ಬೆನ್‌ ಸ್ಟೋಕ್ಸ್ ತಮ್ಮ ಸಹ ಆಟಗಾರರು ಹಾಗೂ ತಮ್ಮ ಕ್ರಿಕೆಟ್ ಪಯಣದ ಭಾಗವಾಗಿದ್ದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.

"ಇಂಗ್ಲೆಂಡ್ ಪರ ನನ್ನೊಂದಿಗೆ ಮೈದಾನಕ್ಕಿಳಿದ ಪ್ರತಿಯೊಬ್ಬ ವ್ಯಕ್ತಿಯನ್ನು ನಾನು ಪ್ರೀತಿಸುತ್ತೇನೆ. ಈ ಬಗ್ಗೆ ಇನ್ನೂ ಬಹಳಷ್ಟು ಹೇಳಬಹುದು. ಆದರೆ ಕಳೆದ 15 ವರ್ಷಗಳಿಂದ ನಾನು ಮಾಡಿದ್ದನ್ನು ಎಷ್ಟು ಮನಸಾರೆ ಪ್ರೀತಿಸಿದ್ದೆ ಎಂಬುದು ನಿಮಗೆ ಅರ್ಥವಾಗಿರುತ್ತದೆ ಎಂದು ಭಾವಿಸುತ್ತೇನೆ. ಇನ್ನು ಮುಂದೆ ಅಭಿಮಾನಿಯಾಗಿ ತಂಡವನ್ನು ಬೆಂಬಲಿಸಲು ಎದುರು ನೋಡುತ್ತಿದ್ದೇನೆ. ಕುಟುಂಬ, ಸ್ನೇಹಿತರು, ಸಹ ಆಟಗಾರರು ಹಾಗೂ ಅಭಿಮಾನಿಗಳೇ... ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಪ್ರೀತಿಸುತ್ತೇನೆ," ಎಂದು‌ ಬೆನ್‌ ಸ್ಟೋಕ್ಸ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ ಬೆನ್‌ ಸ್ಟೋಕ್ಸ್‌

ಬೆನ್‌ ಸ್ಟೋಕ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಅಂಕಿಅಶಗಳು

ಬೆನ್ ಸ್ಟೋಕ್ಸ್ ಇಂಗ್ಲೆಂಡ್ ಪರ 122 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ 44 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು 7,000ಕ್ಕೂ ಹೆಚ್ಚು ರನ್‌ಗಳನ್ನು ಗಳಿಸುವುದರ ಜೊತೆಗೆ 200ಕ್ಕೂ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದರ ಜೊತೆಗೆ, ಅವರು 114 ಏಕದಿನ ಅಂತಾರಾಷ್ಟ್ರೀಯ (ODI) ಹಾಗೂ 43 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದಾರೆ. ಮೂರು ಮಾದರಿಗಳಲ್ಲೂ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಇಂಗ್ಲೆಂಡ್ ಕಂಡ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾಗಿ ತಮ್ಮ ಪರಂಪರೆಯನ್ನು ಭದ್ರಪಡಿಸಿಕೊಂಡಿದ್ದಾರೆ.