ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Ranji Trophy: ಸೆಮಿಫೈನಲ್‌ನಲ್ಲಿ 8 ವಿಕೆಟ್‌ ಕಿತ್ತು ಬಿಸಿಸಿಐಗೆ ಸಂದೇಶ ರವಾನಿಸಿದ ಮೊಹಮ್ಮದ್‌ ಶಮಿ!

ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡುವ ಪ್ರಯತ್ನದಲ್ಲಿರುವ ಹಿರಿಯ ವೇಗಿ ಮೊಹಮ್ಮದ್‌ ಶಮಿ ಪ್ರಸ್ತುತ ನಡೆಯುತ್ತಿರುವ 2026ರ ರಣಜಿ ಟ್ರೋಫಿ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನವನ್ನು ತೋರುತ್ತಿದ್ದಾರೆ. ಅವರು ಜಮ್ಮು ಮತ್ತು ಕಾಶ್ಮೀರ ವಿರುದ್ದದ ಸೆಮಿಫೈನಲ್‌ ಪಂದ್ಯದಲ್ಲಿ 8 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆ ಮೂಲಕ ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌ಗೆ ಬಲವಾದ ಸಂದೇಶವನ್ನು ಕಳುಹಿಸಿದ್ದಾರೆ.

ರಣಜಿ ಸೆಮಿಫೈನಲ್‌ನಲ್ಲಿ 8 ವಿಕೆಟ್‌ ಕಿತ್ತ ಮೊಹಮ್ಮದ್‌ ಶಮಿ.

ನವದೆಹಲಿ: ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡುವ ಹಾದಿಯಲ್ಲಿರುವ ಹಿರಿಯ ವೇಗಿ ಮೊಹಮ್ಮದ್‌ ಶಮಿ (Mohammed Shami) ಅವರು ಬಂಗಾಳ ತಂಡದ ಪರ 2025-26ರ ಸಾಲಿನ ರಣಜಿ ಟ್ರೋಫಿ (Ranji Trophy 2025-26) ಟೂರ್ನಿಯಲ್ಲಿ ಆಡುತ್ತಿದ್ದಾರೆ ಹಾಗೂ ಉತ್ತಮ ಪ್ರದರ್ಶನವನ್ನು ತೋರುತ್ತಿದ್ದಾರೆ. ಇದೀಗ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಸೆಮಿಫೈನಲ್‌ (JK vs BEN) ಪಂದ್ಯದಲ್ಲಿಯೂ ಮಾರಕ ದಾಳಿ ನಡೆಸಿದ ಮೊಹಮ್ಮದ್‌ ಶಮಿ, 8 ವಿಕೆಟ್‌ಗಳನ್ನು ಕಬಳಿಸಿ ಬಿಸಿಸಿಐ ಚೀಪ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ. ಆ ಮೂಲಕ ತಾನು ರಾಷ್ಟ್ರೀಯ ತಂಡದ ಪರ ಆಡಲು ಸಿದ್ದ ಎಂಬ ಮಾತನ್ನು ಆಟದಲ್ಲಿ ತೋರಿಸಿದ್ದಾರೆ.

ಬಂಗಾಳ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಶಮಿ, ಜಮ್ಮು ಮತ್ತು ಕಾಶ್ಮೀರ ತಂಡದ ಬ್ಯಾಟಿಂಗ್‌ ವಿಭಾಗವನ್ನು ಸಂಪೂರ್ಣವಾಗಿ ಛಿದ್ರಗೊಳಿಸಿದರು. 59ನೇ ಓವರ್‌ನಲ್ಲಿ ಶಮಿ 5 ವಿಕೆಟ್‌ ಸಾಧನೆ ಮಾಡಿದರು. ಕನ್ನಯ್ಯ ವಾದಾವನ್‌ ಅವರನ್ನು ಔಟ್‌ ಮಾಡಿದ ಬಳಿಕ ಶಮಿ 5 ವಿಕೆಟ್‌ ಪೂರ್ಣಗೊಳಿಸಿದರು. ನಂತರ ಇನ್ನು ಮೂರು ವಿಕೆಟ್‌ ಪಡೆಯುವ ಮೂಲಕ 8 ವಿಕೆಟ್‌ ಸಾಧನೆಯನ್ನು ಮಾಡಿದರು. ಆ ಮೂಲಕ ದೇಶಿ ಕ್ರಿಕೆಟ್‌ನಲ್ಲಿ ತಮ್ಮ ಫಾರ್ಮ್‌ ಅನ್ನು ಮುಂದುವರಿಸಿದರು. ಇವರು ರಣಜಿ ಟ್ರೋಫಿ ಟೂರ್ನಿಯುದ್ದಕ್ಕೂ ನಿಯಮಿತವಾಗಿ ಬೌಲ್‌ ಮಾಡುತ್ತಿದ್ದಾರೆ.

T20 World Cup: ಅಫ್ಘಾನಿಸ್ತಾನ ಔಟ್‌, ಕೆನಡಾ ವಿರುದ್ಧ ಗೆದ್ದು ಸೂಪರ್‌-8ಕ್ಕೆ ಪ್ರವೇಶಿಸಿದ ನ್ಯೂಜಿಲೆಂಡ್‌!

ಸರ್ವೀಸಸ್‌ ವಿರುದ್ಧದ ತನ್ನ ಕೊನೆಯ ಪಂದ್ಯದಲ್ಲಿ ಬಲಗೈ ವೇಗಿ 5 ವಿಕೆಟ್‌ ಸಾಧನೆ ಮಾಡಿದ್ದರು. ಈ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 51 ರನ್‌ ನೀಡಿ 5 ವಿಕೆಟ್‌ ಕಿತ್ತಿದ್ದರು. ಒಟ್ಟಾರೆ ಈ ಸೀಸನ್‌ನಲ್ಲಿ ಆಡಿದ 7 ಪಂದ್ಯಗಳಿಂದ ಮೊಹಮ್ಮದ್‌ ಶಮಿ 38 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದರಲ್ಲಿ ಅವರು ಮೂರು ಬಾರಿ ಐದು ವಿಕೆಟ್‌ ಸಾಧನೆ ಮಾಡಿದ್ದಾರೆ.



ಭಾರತ ತಂಡಕ್ಕೆ ಮೊಹಮ್ಮದ್‌ ಶಮಿ ಕಮ್‌ಬ್ಯಾಕ್‌ ಯಾವಾಗ?

ದೇಶಿ ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ಮೊಹಮ್ಮದ್‌ ಶಮಿ ಅವರ ಫಾರ್ಮ್‌ ಮುಂದುವರಿದಿದೆ. ಇದಕ್ಕೂ ಮುನ್ನ 50 ಓವರ್‌ಗಳ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿಯೂ ಮಿಂಚಿದ್ದರು. ಅವರು ಈ ಟೂರ್ನಿಯಲ್ಲಿ ಆಡಿದ್ದ 7 ಪಂದ್ಯಗಳಿಂದ 15 ವಿಕೆಟ್‌ಗಳನ್ನು ಕಬಳಿಸಿದ್ದರು. ಈ ಪ್ರದರ್ಶನದ ಹೊರತಾಗಿಯೂ ಶಮಿಗೆ ಭಾರತ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ. 2026ರ ಐಸಿಸಿ ಟಿ20 ವಿಶ್ವಕಪ್‌ ಭಾರತ ತಂಡದಲ್ಲಿಯೂ ಅವರಿಗೆ ಚಾನ್ಸ್‌ ಸಿಗಲಿಲ್ಲ. ಹರ್ಷಿತ್‌ ರಾಣಾ ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ ಹೊರಬಿದ್ದ ಬಳಿಕ ಅವರ ಸ್ಥಾನಕ್ಕೆ ಶಮಿ ಕೂಡ ರೇಸ್‌ನಲ್ಲಿದ್ದರು. ಆದರೆ, ಅಂತಿಮವಾಗಿ ಮೊಹಮ್ಮದ್‌ ಸಿರಾಜ್‌ ಅವರನ್ನು ಪರಿಗಣಿಸಲಾಯಿತು.

ಬಿಸಿಸಿಐ ಸೆಲೆಕ್ಟರ್‌ಗಳಿ ಶಮಿ ಸಂದೇಶ

2025-26ರ ದೇಶಿ ಕ್ರಿಕೆಟ್‌ನಲ್ಲಿ ತೋರಿದ ತಮ್ಮ ಅದ್ಭುತ ಪ್ರದರ್ಶನದ ಬಲದಿಂದ ಮೊಹಮ್ಮದ್‌ ಶಮಿ, ಭಾರತ ಹಿರಿಯರ ತಂಡದ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌ ಅವರಿಗೆ ಸಂದೇಶವನ್ನು ಕಳುಹಿಸಿದ್ದಾರೆ. ಇದೀಗ 8 ವಿಕೆಟ್‌ ಕಿತ್ತಿರುವುದು ಕೂಡ ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ. 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿಯೂ ಇದೇ ಲಯವನ್ನು ಶಮಿ ಮುದುವರಿಸಿದರೆ, ಭಾರತ ತಂಡಕ್ಕೆ ಮರಳಲಿದ್ದಾರೆ.