ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SRH vs PBKS: ಅಭಿಷೇಕ್‌ ಶರ್ಮಾರ ಶತಕದ ಆಸರೆಯಿಂದ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್‌!

SRH vs PBKS Match Highlights: ಅಭಿಷೇಕ್ ಶರ್ಮಾ ದಾಖಲೆಯ ಶತಕದ ಸಹಾಯದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟ್‌ ಮಾಡಿ 245 ರನ್ ಕಲೆ ಹಾಕಿತ್ತು. ಬಳಿಕ 246 ರನ್‌ ಗುರಿ ಹಿಂಬಾಲಿಸಿದ ಸನ್‌ರೈಸರ್ಸ್ ಹೈದರಾಬಾದ್‌ ಇನ್ನೂ 9 ಎಸೆತಗಳು ಬಾಕಿ ಇರುವಾಗಲೇ ಗೆದ್ದ ಬೀಗಿತು.

ಪಂಜಾಬ್‌ ವಿರುದ್ಧ ದಾಖಲೆಯ ಮೊತ್ತವನ್ನು ಚೇಸ್‌ ಮಾಡಿ ಗೆದ್ದ ಹೈದರಾಬಾದ್‌!

ಪಂಜಾಬ್‌ ಕಿಂಗ್ಸ್‌ ಎದುರು ಸನ್‌ರೈಸರ್ಸ್‌ ಹೈದರಾಬಾದ್‌ಗೆ 8 ವಿಕೆಟ್‌ ಜಯ.

Profile Ramesh Kote Apr 13, 2025 1:13 AM

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ರನ್‌ ಹೊಳೆಯ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ (Abhishek Sharma) ಚೊಚ್ಚಲ ಶತಕದ ಬಲದಿಂದ ಸನ್‌ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡ, ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ 8 ವಿಕೆಟ್‌ಗಳ ದಾಖಲೆಯ ಗೆಲುವು ಪಡೆಯಿತು. ಆ ಮೂಲಕ ಸತತ ನಾಲ್ಕು ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದ ಎಸ್‌ಆರ್‌ಎಚ್‌, ಹದಿನೆಂಟನೇ ಆವೃತ್ತಿಯಲ್ಲಿ ಎರಡನೇ ಗೆಲುವು ಪಡೆದಿದೆ ಹಾಗೂ ಎಂಟನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಆದರೆ, ಈ ಟೂರ್ನಿಯಲ್ಲಿ ಎರಡನೇ ಸೋಲು ಅನುಭವಿಸಿದ ಪಂಜಾಬ್‌ ಕಿಂಗ್ಸ್‌ ಪಾಯಿಂಟ್ಸ್‌ ಟೇಬಲ್‌ನಲ್ಲಿ ಆರನೇ ಸ್ಥಾನಕ್ಕೆ ಇಳಿದಿದೆ.

ಪಂಜಾಬ್‌ ಕಿಂಗ್ಸ್‌ ನೀಡಿದ್ದ 246 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ, ಅಭಿಷೇಕ್‌ ಶರ್ಮಾ (141) ಶತಕ ಹಾಗೂ ಟ್ರಾವಿಡ್‌ ಹೆಡ್‌ (66) ಅರ್ಧಶತಕದ ಬಲದಿಂದ 18.3 ಎರಡು ವಿಕೆಟ್‌ಗಳ ನಷ್ಟಕ್ಕೆ 147 ರನ್‌ ಗಳಿಸಿ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಆ ಮೂಲಕ ಐಪಿಎಲ್‌ ಟೂರ್ನಿಯ ಇತಿಹಾಸದಲ್ಲಿಯೇ ಎಸ್‌ಆರ್‌ಎಚ್‌ ತಂಡ, ಎರಡನೇ ಅತಿ ದೊಡ್ಡ ಮೊತ್ತವನ್ನು ಯಶಸ್ವಿಯಾಗಿ ಚೇಸ್‌ ಮಾಡಿ ದಾಖಲೆ ಬರೆಯಿತು.

IPL 2025: 40 ಎಸೆತಗಳಲ್ಲಿ ಸ್ಪೋಟಕ ಶತಕ ವಿಶೇಷ ದಾಖಲೆ ಬರೆದ ಅಭಿಷೇಕ್‌ ಶರ್ಮಾ!

171 ರನ್‌ ಜತೆಯಾಟವಾಡಿದ ಅಭಿಷೇಕ್‌-ಹೆಡ್‌

ದಾಖಲೆಯ ಮೊತ್ತದ ಗುರಿಯನ್ನು ಹಿಂಬಾಲಿಸಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಮೊದಲ ವಿಕೆಟ್‌ಗೆ 171 ರನ್‌ಗಳ ಜೊತೆಯಾಟವನ್ನು ಆಡಿದರು. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಪಂಜಾಬ್ ವಿರುದ್ಧ ತಮ್ಮ ಸ್ಪೋಟಕ ಬ್ಯಾಟಿಂಗ್‌ನಿಂದ ಹೈದರಾಬಾದ್‌ ತಂಡವನ್ನು ಏಕಪಕ್ಷೀಯವಾಗಿ ಗೆಲ್ಲಿಸಿದರು. ಗಿಲ್‌ ಜೊತೆ ದಾಖಲೆಯ ಜೊತೆಯಾಟವನ್ನು ಆಡಿದ ಟ್ರಾವಿಸ್ ಹೆಡ್ 37 ಎಸೆತಗಳಲ್ಲಿ 66 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು.



40 ಎಸೆತಗಳಲ್ಲಿ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ

ಟ್ರಾವಿಸ್ ಹೆಡ್ ವಿಕೆಟ್ ಉರುಳಿದ ನಂತರ ಅಭಿಷೇಕ್ ಶರ್ಮಾ, ಹೆಚ್ಚು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಮೊದಲನೆಯದಾಗಿ ಅಭಿಷೇಕ್ 19 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಇದಾದ ನಂತರ, ಮುಂದಿನ 50 ರನ್ ಗಳಿಸಲು ಅವರು ಕೇವಲ 21 ಎಸೆತಗಳನ್ನು ತೆಗೆದುಕೊಂಡರು. ಆ ಮೂಲಕ ಅಭಿಷೇಕ್ ಶರ್ಮಾ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಐಪಿಎಲ್‌ನಲ್ಲಿ ಅಭಿಷೇಕ್ ಶರ್ಮಾ ಅವರ ಚೊಚ್ಚಲ ಶತಕ. ಅಷ್ಟೇ ಅಲ್ಲ, ಅಭಿಷೇಕ್ ಈ ಲೀಗ್‌ನಲ್ಲಿ ಸನ್‌ರೈಸರ್ಸ್ ಪರ ಎರಡನೇ ವೇಗದ ಶತಕ ಗಳಿಸಿದ ದಾಖಲೆಯನ್ನೂ ಬರೆದರು. ಸನ್‌ರೈಸರ್ಸ್ ಪರ ಅತಿ ವೇಗದ ಶತಕ ಸಿಡಿಸಿದ ದಾಖಲೆ ಟ್ರಾವಿಸ್ ಹೆಡ್ ಹೆಸರಿನಲ್ಲಿದೆ. ಟ್ರಾವಿಸ್ ಹೆಡ್ 2024 ರಲ್ಲಿ ಆರ್‌ಸಿಬಿ ವಿರುದ್ಧ ಈ ದಾಖಲೆಯನ್ನು ಬರೆದಿದ್ದರು.



ಭಾರತದ ಪರ ಅತಿ ದೊಡ್ಡ ಇನಿಂಗ್ಸ್‌

40 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅಭಿಷೇಕ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಐದನೇ ವೇಗದ ಶತಕವನ್ನು ಸಿಡಿಸಿದರು. ಅಲ್ಲದೆ ತಮ್ಮ 141 ರನ್‌ಗಳ ನೆರವಿನಿಂದ ಐಪಿಎಲ್‌ ಟೂರ್ನಿಯಲ್ಲಿ ಅತಿದೊಡ್ಡ ಇನಿಂಗ್ಸ್ ಆಡಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ 55 ಎಸೆತಗಳಲ್ಲಿ 141 ರನ್ ಗಳಿಸಿ ಔಟಾದರು. ಈ ಇನಿಂಗ್ಸ್‌ನಲ್ಲಿ ಅವರು 10 ಸಿಕ್ಸರ್‌ಗಳು ಮತ್ತು 14 ಬೌಂಡರಿಗಳನ್ನು ಸಹ ಬಾರಿಸಿದರು. ಆ ಮೂಲಕ ಕೆಎಲ್ ರಾಹುಲ್ ಅವರನ್ನು ಹಿಂದಿಕ್ಕಿದ್ದಾರೆ. ಭಾರತದ ಪರ ಕೆಎಲ್ ರಾಹುಲ್ 132 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದ್ದರು.

IPL 2025: ಅರ್ಧಶತಕ ಸಿಡಿಸಿ ಗುಜರಾತ್‌ ಟೈಟನ್ಸ್‌ ಪರ ನೂತನ ದಾಖಲೆ ಬರೆದ ಶುಭಮನ್‌ ಗಿಲ್‌!

245 ರನ್‌ ಸಿಡಿಸಿದ್ದ ಪಂಜಾಬ್‌ ಕಿಂಗ್ಸ್‌

ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡದ ಆಟಗಾರರು ಕೂಡ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದರು. ನಾಯಕ ಶ್ರೇಯಸ್ ಅಯ್ಯರ್ (82) ಅವರ ಸ್ಪೋಟಕ ಅರ್ಧಶತಕ ಮತ್ತು ಪ್ರಿಯಾಂಶ್ ಆರ್ಯ (36), ಪ್ರಭ್‌ಸಿಮ್ರಾನ್‌ ಸಿಂಗ್ (42) ಮತ್ತು ಮಾರ್ಕಸ್ ಸ್ಟೋಯ್ನಿಸ್‌ (ಔಟಾಗದೆ 34) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್‌ ಆರು ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತ್ತು. ಪಂಜಾಬ್ ಕಿಂಗ್ಸ್ ಈ ಋತುವಿನ ಎರಡನೇ ಅತ್ಯಧಿಕ ಸ್ಕೋರ್ ಇದಾಗಿದೆ.



ನಾಯಕ ಶ್ರೇಯಸ್ 36 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಆರು ಸಿಕ್ಸರ್‌ಗಳೊಂದಿಗೆ 82 ರನ್ ಗಳಿಸಿದರು. ಪ್ರಿಯಾಂಶ್ 13 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 36 ರನ್ ಗಳಿಸಿದರು. 23 ಎಸೆತಗಳನ್ನು ಎದುರಿಸಿದ ಪ್ರಭ್‌ಸಿಮ್ರಾನ್‌ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 42 ರನ್ ಗಳಿಸಿದರು. ನೆಹಾಲ್ ವಧೇರಾ 22 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 27 ರನ್ ಗಳಿಸಿದರು. ಪವರ್‌ಪ್ಲೇನಲ್ಲಿ ಪ್ರಿಯಾಂಶ್ ಮತ್ತು ಪ್ರಬ್‌ಸಿಮ್ರಾನ್‌ ಪಂಜಾಬ್‌ಗೆ ಅದ್ಭುತ ಆರಂಭ ನೀಡಿದ್ದರು. ಇವರು ಆರಂಭಿಕ ನಾಲ್ಕು ಓವರ್‌ಗಳಲ್ಲಿ 66 ರನ್‌ಗಳನ್ನು ಸೇರಿಸಿದರು. ಅಯ್ಯರ್ ಮತ್ತು ವಾಧೇರಾ ಮೂರನೇ ವಿಕೆಟ್‌ಗೆ 73 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡಿದ್ದರು.



ಹರ್ಷಲ್ ಪಟೇಲ್‌ಗೆ 4 ವಿಕೆಟ್

ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಶಶಾಂಕ್ ಸಿಂಗ್ ಅವರನ್ನು ಹರ್ಷಲ್ ಪಟೇಲ್ ಕ್ರಮವಾಗಿ ಮೂರು ಮತ್ತು ಎರಡು ರನ್‌ಗಳಿಗೆ ಔಟ್ ಮಾಡಿದರು. ಶ್ರೇಯಸ್ ಅಯ್ಯರ್ 18ನೇ ಓವರ್‌ನಲ್ಲಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿ ಔಟಾದರು. ಆದರೆ ಸ್ಟೋಯ್ನಿಸ್‌ 20ನೇ ಓವರ್‌ನಲ್ಲಿ ಶಮಿ ಬೌಲಿಂಗ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿ ಪಂಜಾಬ್ ತಂಡವನ್ನು 245 ರನ್‌ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಹರ್ಷಲ್ ನಾಲ್ಕು ಓವರ್‌ಗಳಲ್ಲಿ 42 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಪಡೆದರೆ, ಶಮಿ ನಾಲ್ಕು ಓವರ್‌ಗಳಲ್ಲಿ 75 ರನ್‌ಗಳನ್ನು ಬಿಟ್ಟುಕೊಟ್ಟು ತುಂಬಾ ದುಬಾರಿಯಾದರು.