ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

T20 World Cup 2026: ಶಾಹೀನ್‌ ಶಾ ಅಫ್ರಿದಿಗೆ ಗಾಯ, ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆ!

2025-26ರ ಬಿಗ್ ಬ್ಯಾಷ್ ಲೀಗ್ ಟೂರ್ನಿಯ ವೇಳೆ ಪಾಕಿಸ್ತಾನ ಕ್ರಿಕೆಟ್‌ತಂಡದ ಅನುಭವಿ ವೇಗಿ ಶಾಹೀನ್ ಶಾ ಅಫ್ರಿದಿ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಇದರ ಪರಿಣಾಮ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ಭಾಗವಹಿಸುವುದು ಅನುಮಾನವಾಗಿದೆ. ಇದರೊಂದಿಗೆ ಟೂರ್ನಿಯ ಆರಂಭಕ್ಕೆ ಇನ್ನೂ ಒಂದೂವರೆ ತಿಂಗಳು ಬಾಕಿ ಇರುವಾಗಲೇ ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.

2026ರ ಟಿ20 ವಿಶ್ವಕಪ್‌ ಟೂರ್ನಿಗೆ ಶಾಹೀನ್‌ ಅಫ್ರಿದಿ ಔಟ್‌?

ನವದೆಹಲಿ: ಪಾಕಿಸ್ತಾನ ಕ್ರಿಕೆಟ್‌ ತಂಡದ ತಾರೆ ಮತ್ತು ಅನುಭವಿ ವೇಗಿ ಶಾಹೀನ್‌ ಶಾ ಅಫ್ರಿದಿ (Shaheen Afridi) 2025-26ರ ಬಿಗ್ ಬ್ಯಾಷ್ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಆಡುತ್ತಿದ್ದಾಗ ಗಾಯಕ್ಕೆ ತುತ್ತಾಗಿದ್ದಾರೆ. ಅವರು ಮೊಣಕಾಲಿನ ಗಾಯದಿಂದ ಬಳಲುತ್ತಿದ್ದು, ಇದರಿಂದಾಗಿ ಅವರು ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ. 2026ರ ಐಸಿಸಿ ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯು ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಅವರ ಗಾಯ ಹೆಚ್ಚು ಗಂಭೀರವಾಗಿದ್ದರೆ, ಟಿ20 ವಿಶ್ವಕಪ್‌ ಟೂರ್ನಿಯಿಂದಲೇ ಹೊರಬೇಳುವ ಸಾಧ್ಯತೆ ಇದೆ. ಇದು ನಡೆದರೆ ಪಾಕಿಸ್ತಾನ (Pakistan) ತಂಡಕ್ಕೆ ದೊಡ್ಡ ಆಘಾತವಾಗಲಿದೆ. ಆಗ ಇವರ ಸ್ಥಾನಕ್ಕೆ 25ರ ವಯಸ್ಸಿನ ಮೂಸಾ ಖಾನ್ ಬರಬಹುದು.

ಮುಹಮ್ಮದ್ ಮೂಸಾ ಖಾನ್ 2000ರಲ್ಲಿ ಇಸ್ಲಾಮಾಬಾದ್‌ನಲ್ಲಿ ಜನಿಸಿದ್ದಾರೆ. ಅವರು 2019ರಲ್ಲಿ ಪಾಕಿಸ್ತಾನ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅವರು ಪಾಕಿಸ್ತಾನ ಪರ ಮೂರು ಸ್ವರೂಪಗಳಲ್ಲಿ ಆಡಿದ್ದಾರೆ. ಆದಾಗ್ಯೂ, ಅವರಿಗೆ ಹೆಚ್ಚಿನ ಅವಕಾಶಗಳು ಸಿಕ್ಕಿಲ್ಲ. ಮೂಸಾ ಖಾನ್ ಒಂದು ಟೆಸ್ಟ್, ಎರಡು ಏಕದಿನ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ, ಅವರು 54 ಟಿ20 ಪಂದ್ಯಗಳಲ್ಲಿ ಒಟ್ಟು 62 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರ ಜೊತೆಗೆ ಬ್ಯಾಟಿಂಗ್‌ನಲ್ಲಿಯೂ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಲಿದ್ದಾರೆ.

Devdutt Padikkal: ಪಾಂಡಿಚೇರಿ ವಿರುದ್ಧವೂ ಸೆಂಚುರಿ ಬಾರಿಸಿದ ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್‌!

ಮುಹಮ್ಮದ್ ಮೂಸಾ ಖಾನ್ ಅವರ ಅತ್ಯುತ್ತಮ ಬೌಲಿಂಗ್‌ನಿಂದ ಪಾಕಿಸ್ತಾನ ಟೆಲಿವಿಷನ್ ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ್ ಅನ್ನು 78 ರನ್‌ಗಳಿಂದ ಸೋಲಿಸಿತು. ಅಧ್ಯಕ್ಷರ ಟ್ರೋಫಿ ಗ್ರೇಡ್ I (2025-26) ನ ಈ ಪಂದ್ಯದಲ್ಲಿ, ಮೂಸಾ ಖಾನ್ ಒಟ್ಟು 8 ವಿಕೆಟ್‌ಗಳನ್ನು ಪಡೆದರು. ಅವರು ಮೊದಲ ಇನಿಂಗ್ಸ್‌ನಲ್ಲಿ 51 ರನ್‌ಗಳಿಗೆ 6 ವಿಕೆಟ್‌ಗಳನ್ನು ಮತ್ತು ಎರಡನೇ ಇನಿಂಗ್ಸ್‌ನಲ್ಲಿ 32 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು. ಅವರನ್ನು ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಈ ಅದ್ಭುತ ಗೆಲುವಿನೊಂದಿಗೆ, ಹಾಲಿ ಚಾಂಪಿಯನ್ ಪಾಕಿಸ್ತಾನ್ ಟೆಲಿವಿಷನ್ ಟೂರ್ನಿಗೆ ಗೆಲುವಿನ ಆರಂಭವನ್ನು ನೀಡಿದೆ. ಮೊದಲ ಸುತ್ತಿನ ನಂತರ, ಪಿಟಿವಿ (ಪಾಕಿಸ್ತಾನ ಟೆಲಿವಿಷನ್) ಈಗ ಪಾಯಿಂಟ್ಸ್ ಪಟ್ಟಿಯಲ್ಲಿ ಜಂಟಿ ಎರಡನೇ ಸ್ಥಾನದಲ್ಲಿದೆ.

VHT 2025-26: ನ್ಯೂಜಿಲೆಂಡ್‌ ಏಕದಿನ ಸರಣಿಗೂ ಮುನ್ನ ಭರ್ಜರಿ ಶತಕ ಬಾರಿಸಿದ ಋತುರಾಜ್‌ ಗಾಯಕ್ವಾಡ್‌!

ಬ್ರಿಸ್ಬೇನ್‌ ಹೀಟ್‌ ಪರ ಆಡಿದ್ದ ಅಫ್ರಿದಿ

ಬ್ರಿಸ್ಬೇನ್ ಹೀಟ್ ಪರ ನಾಲ್ಕು ಪಂದ್ಯಗಳಲ್ಲಿ ಅವರು 76.50ರ ಸರಾಸರಿಯಲ್ಲಿ ರನ್ ಗಳಿಸಿದರು ಮತ್ತು 11.19ರ ಎಕಾನಮಿ ರೇಟ್‌ನಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಇದರಲ್ಲಿ ಕೇವಲ ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ. ಡಿಸೆಂಬರ್ 15 ರಂದು ಗೀಲಾಂಗ್‌ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧ ಚೊಚ್ಚಲ ಪಂದ್ಯವಾಡಿದಾಗ, ಅವರು ಅಪಾಯಕಾರಿಯಾಗಿ ಬೌಲ್‌ ಮಾಡುತ್ತಿದ್ದ ವೇಳೆ ಅಪಾಯಕ್ಕೆ ಸಿಲುಕಿದ್ದರು. ನಂತರ ಅವರನ್ನು ಬೌಲಿಂಗ್‌ನಿಂದ ತಡೆಯಲಾಗಿತ್ತು.

ಸೋಮವಾರ ಗಬ್ಬಾದಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಬ್ರಿಸ್ಬೇನ್ ಹೀಟ್ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದ ಶಾಹೀನ್ ಶಾ ಅಫ್ರಿದಿ ಕ್ರೀಡಾಂಗಣದಿಂದ ಹೊರನಡೆಯುತ್ತಿರುವುದು ಕಂಡುಬಂದಿದೆ. ಎಡಗೈ ಬೌಲರ್ ಈ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಇದರಿಂದಾಗಿ 2020–21ರ ಋತುವಿನ ಉದ್ದಕ್ಕೂ ಅವರನ್ನು ಆಟದಿಂದ ದೂರವಿಡಲಾಗಿತ್ತು, ಆದ್ದರಿಂದ ಇದು ಅದೇ ಮೊಣಕಾಲಿಗೆ ಅವರ ಎರಡನೇ ಗಾಯವಾಗಿದೆ.