ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ಯುವ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ ( Dewald Brewis) ಅವರನ್ನು ಖರೀದಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ದಿಗ್ಗಜ ಎಬಿ ಡಿ ವಿಲಿಯರ್ಸ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಎರಡನೇ ಟಿ20ಐ ಪಂದ್ಯದಲ್ಲಿ (AUS vs SA) ಸ್ಪೋಟಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಡೆವಾಲ್ಡ್ ಬ್ರೆವಿಸ್ ಕೇವಲ 41 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದಾರೆ.
ಡೆವಾಲ್ಡ್ ಬ್ರೆವಿಸ್ ಅವರನ್ನು ಖರೀದಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅದೃಷ್ಟ ಮಾಡಿದೆ ಎಂದ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿಡಿ, ಇದು ದೊಡ್ಡ ಮಾಸ್ಟರ್ ಸ್ಟ್ರೋಕ್ ಎಂದು ಹೇಳಿದ್ದಾರೆ. ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮೆಗಾ ಹರಾಜಿನಲ್ಲಿ ಡೆವಾಲ್ಡ್ ಬ್ರೆವಿಸ್ ಅವರನ್ನು ಖರೀದಿಸುವಲ್ಲಿ ವಿಫಲವಾಗುವ ಮೂಲಕ ಇತರೆ ತಂಡಗಳು ಸುವರ್ಣಾವಕಾಶವನ್ನು ಕಳೆದುಕೊಂಡಿವೆ ಎಂದು ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿಡಿ ಹೇಳಿದ್ದಾರೆ.
41 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ನೂತನ ಮೈಲುಗಲ್ಲು ತಲುಪಿದ ಡೆವಾಲ್ಡ್ ಬ್ರೆವಿಸ್!
ದಾರ್ವಿನ್ ಮರಾರ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಡೆವಾಲ್ಡ್ ಬ್ರೆವಿಸ್ ಕೇವಲ 56 ಎಸೆತಗಳಲ್ಲಿ ಬರೋಬ್ಬರಿ 12 ಸಿಕ್ಸರ್ ಹಾಗೂ ಎಂಟು ಬೌಂಡರಿಗಳ ಮೂಲಕ ಅಜೇಯ 125 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಡೇವಿಡ್ ಮಿಲ್ಲರ್ (35 ಎಸೆತಗಳು) ಬಳಿಕ ಅತ್ಯಂತ ವೇಗದ ಶತಕ ಬಾರಿಸಿದ ದಕ್ಷಿಣ ಆಫ್ರಿಕಾದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.
ಚೆನ್ನೈ ಫ್ರಾಂಚೈಸಿಯನ್ನು ಹೊಗಳಿದ ಎಬಿಡಿ
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಎಬಿ ಡಿ ವಿಲಿಯರ್ಸ್, "ಮೆಗಾ ಹರಾಜಿನಲ್ಲಿ ಡೆವಾಲ್ಡ್ ಬ್ರೆವಿಸ್ ಅವರನ್ನು ಖರೀದಿಸಲು ಐಪಿಎಲ್ ತಂಡಗಳಿಗೆ ಸುವರ್ಣಾವಕಾಶವಿತ್ತು. ಆದರೆ, ಅವರು ಆ ಅವಕಾಶವನ್ನು ಕಳೆದುಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತುಂಬಾ ಅದೃಷ್ಟ ಮಾಡಿದೆ ಅಥವಾ ಇದು ಅವರಿಂದ ದೊಡ್ಡ ಮಾಸ್ಟರ್ ಸ್ಟ್ರೋಕ್," ಎಂದು ಪೋಸ್ಟ್ ಹಾಕಿದ್ದಾರೆ.
There was such a golden opportunity for IPL teams to pick up Dewald Brevis at the auction! Missed out badly. CSK either got very lucky, or maybe the biggest master stroke ever👏 The boy can play @BrevisDewald
— AB de Villiers (@ABdeVilliers17) August 12, 2025
"ಅವರನ್ನು ಖರೀದಿಸಲು ಯಾರೂ ಹೋಗದಿರುವುದು ಮನಸ್ಸಿಗೆ ಮುದ ನೀಡುತ್ತದೆ! ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಯೋಚಿಸುವುದೇ ಕಷ್ಟ," ಎಂದು ಅವರು ತಿಳಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುರ್ಜಪ್ನೀತ್ ಸಿಂಗ್ ಅವರು ಗಾಯಕ್ಕೆ ತುತ್ತಾಗಿದ್ದರು. ಹಾಗಾಗಿ ಅವರ ಸ್ಥಾನಕ್ಕೆ ಮಧ್ಯಮ ಕ್ರಮಾಂಕದಲ್ಲಿ ಡೆವಾಲ್ಡ್ ಬ್ರೆವಿಸ್‌ಗೆ ಚೆನ್ನೈ ಫ್ರಾಂಚೈಸಿ ಅವಕಾಶವನ್ನು ನೀಡಿತ್ತು. ದಕ್ಷಿಣ ಆಫ್ರಿಕಾ ಯುವ ಬ್ಯಾಟ್ಸ್‌ಮನ್ ಅನ್ನು ಸಿಎಸ್‌ಕೆ 2.2 ಕೋಟಿ ರು. ಗಳಿಗೆ ಕಳರೆದುಕೊಂಡಿತ್ತು.
ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತವನ್ನು ಮುನ್ನಡೆಸಬಲ್ಲ ಮೂವರು ಆಟಗಾರರು!
ಕಳೆದ ಐಪಿಎಲ್ ಟೂರ್ನಿಯಲ್ಲಿ ಜೋಹನ್ಸ್‌ಬರ್ಗ್ ಮೂಲದ ಆಟಗಾರ ಆಡಿದ 6 ಪಂದ್ಯಗಳಿಂದ 180ರ ಸ್ಟ್ರೈಕ್ ರೇಟ್‌ನಲ್ಲಿ ಎರಡು ಅರ್ಧಶತಕಗಳೊಂದಿಗೆ 225 ರನ್‌ಗಳನ್ನು ಬಾರಿಸಿದ್ದರು. ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ್ದರ ಫಲವಾಗಿ ತಮ್ಮ ರಾಷ್ಟ್ರೀಯ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಸಾಧ್ಯವಾಗಿತ್ತು.