ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

ICC Champions Trophy: ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅತ್ಯಧಿಕ ರನ್‌ ಬಾರಿಸಿದ ಟಾಪ್‌-5 ಬ್ಯಾಟರ್‌ಗಳು

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ(ICC Champions Trophy) ಒಟ್ಟು 15 ಪಂದ್ಯಗಳು ನಡೆಯಲಿವೆ. ಫೆಬ್ರವರಿ 19ರಂದು ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅತ್ಯಧಿಕ ರನ್‌ ಬಾರಿಸಿದ ಟಾಪ್‌-5 ಬ್ಯಾಟರ್‌ಗಳು

Profile Abhilash BC Feb 14, 2025 10:52 AM

ಬೆಂಗಳೂರು: 2017ರ ನಂತರ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ(Champions Trophy) ಕ್ರಿಕೆಟ್‌ ಟೂರ್ನಿ ಪಾಕಿಸ್ತಾನ ಹಾಗೂ ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ-ದುಬೈ) ನಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಫೆಬ್ರವರಿ 19ರಿಂದ ಟೂರ್ನಿ ಆರಂಭವಾಗಲಿದೆ. ಇದುವರೆಗಿನ ಟೂರ್ನಿಯ ಇತಿಹಾಸದಲ್ಲಿ ಅತ್ಯಧಿಕ ರನ್‌ ಗಳಿಸಿದ ಟಾಪ್‌ 5 ಬ್ಯಾಟರ್‌ಗಳ ಪರಿಚಯ ಇಲ್ಲಿದೆ.

ಕ್ರಿಸ್‌ ಗೇಲ್‌

ವೆಸ್ಟ್‌ ಇಂಡೀಸ್‌ ತಂಡದ ಮಾಜಿ ದಿಗ್ಗಜ, ಸ್ಫೋಟಕ ಬ್ಯಾಟಿಂಗ್‌ ಖ್ಯಾತಿಯ ಕ್ರಿಸ್‌ ಗೇಲ್‌ ಅವರು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅತ್ಯಧಿಕ ರನ್‌ ಬಾರಿಸಿದ ಸಾಧಕನಾಗಿ ಕಾಣಿಸಿಕೊಂಡಿದ್ದಾರೆ. ಗೇಲ್‌ 2002-2013ರ ತನಕ 17 ಪಂದ್ಯಗಳನ್ನಾಡಿ 791 ರನ್‌ ಬಾರಿಸಿದ್ದಾರೆ. ಈ ವೇಳೆ 3 ಶತಕ ಮತ್ತು 1 ಅರ್ಧಶತಕ ಬಾರಿಸಿದ್ದಾರೆ. 133* ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

CH Gayle

ಮಹೇಲಾ ಜಯವರ್ಧನೆ

ಶ್ರೀಲಂಕಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಲಾ ಜಯವರ್ಧನೆ ಅವರು ಈ ಯಾದಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಜಯವರ್ಧನೆ 2002-2013ರ ತನಕ 22 ಪಂದ್ಯ ಆಡಿ 742 ರನ್‌ ಗಳಿಸಿದ್ದಾರೆ. 5 ಅರ್ಧಶತಕ ಬಾರಿಸಿದ್ದಾರೆ.

DPMD Jayawardene

ಶಿಖರ್‌ ಧವನ್‌

ಭಾರತ ತಂಡದ ಮಾಜಿ ಎಡಗೈ ಆರಂಭಿಕ ಬ್ಯಾಟರ್‌ ಶಿಖರ್‌ ಧವನ್‌ ಅವರು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅತ್ಯಧಿಕ ರನ್‌ ಬಾರಿಸಿದ ವಿಶ್ವದ ಮೂರನೇ ಹಾಗೂ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಧವನ್‌ 2013-2017ರ ಅವದಿಯಲ್ಲಿ ಕೇವಲ 10 ಪಂದ್ಯಗಳಿಂದ 701 ರನ್‌ ಕಲೆ ಹಾಕಿದ್ದರು. ಈ ವೇಳೆ ತಲಾ 3 ಶತಕ ಮತ್ತು ಅರ್ಧಶತಕ ಬಾರಿಸಿದ್ದಾರೆ.

S Dhawan

ಕುಮಾರ ಸಂಗಕ್ಕರ

ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕರ ಅವರು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅತ್ಯಧಿಕ ರನ್‌ ಬಾರಿಸಿದ ಸಾಧಕರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಅವರು 2000-2013ರ ತನಕ 22 ಪಂದ್ಯಗಳನ್ನಾಡಿ 683 ರನ್‌ ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 5 ಅರ್ಧಶತಕ ಒಳಗೊಂಡಿದೆ.

KC Sangakkara

ಸೌರವ್‌ ಗಂಗೂಲಿ

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಆಟಗಾರ ಸೌರವ್‌ ಗಂಗೂಲಿ ಅವರು 1998-2004ರ ತನಕ ಚಾಂಪಿಯನ್ಸ್‌ ಟ್ರೋಫಿಯಲ್ಲಿ 13 ಪಂದ್ಯಗಳನ್ನಾಡಿ 665 ರನ್‌ ಬಾರಿಸುವ ಮೂಲಕ ಅತ್ಯಧಿಕ ರನ್‌ ಸಾಧಕರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ತಕಾ ಮೂರು ಶತಕ ಮತ್ತು ಅರ್ಧಶತಕ ಬಾರಿಸಿದ್ದಾರೆ. 141* ರನ್‌ ಗರಿಷ್ಠ ವೈಯಕ್ತಿಕ ಗಳಿಕೆಯಾಗಿದೆ.

SC Ganguly