ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ʻ2010ರ ರೀತಿ ಚೆನ್ನೈ ಸೂಪರ್‌ ಕಿಂಗ್ಸ್‌ ಕಮ್‌ಬ್ಯಾಕ್‌ ಮಾಡಲಿದೆʼ-ಕಾಶಿ ವಿಶ್ವನಾಥನ್‌!

Kasi Vishwanathan on CSK's Comeback: 2010ರ ರೀತಿ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿಯೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಕಮ್‌ಬ್ಯಾಕ್‌ ಮಾಡಲಿದೆ ಎಂದು ಚೆನ್ನೈ ಫ್ರಾಂಚೈಸಿಯ ಸಿಇಒ ಕಾಶಿ ವಿಶ್ವನಾಥನ್‌ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್‌ ಕಮ್‌ಬ್ಯಾಕ್‌ ಮಾಡಲಿದೆ: ಕಾಶಿ ವಿಶ್ವನಾಥನ್‌!

ಸಿಎಸ್‌ಕೆ ಸಿಇಓ ಕಾಶಿ ವಿಶ್ವನಾಥನ್‌

Profile Ramesh Kote Apr 22, 2025 9:53 PM

ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ( IPL 2025) ಟೂರ್ನಿಯಲ್ಲಿನ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ಕಳಪೆ ಪ್ರದರ್ಶನದ ಬಗ್ಗೆ ಅಭಿಮಾನಿಗಳು ಬೇಸರಗೊಂಡಿದ್ದಾರೆಂದು ಒಪ್ಪಿಸಿಕೊಂಡ ಚೆನ್ನೈ ಫ್ರಾಂಚೈಸಿ ಕಾಶಿ ವಿಶ್ವನಾಥನ್‌ (Kasi Vishwanathan) ಅವರು, 2010ರ ರೀತಿ ಈ ಬಾರಿಯೂ ಸಿಎಸ್‌ಕೆ ಶಕ್ತಿಯುತವಾಗಿ ಕಮ್‌ಬ್ಯಾಕ್‌ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ. ಈ ಋತುವಿನಲ್ಲಿ ಸಿಎಸ್‌ಕೆಯನ್ನು ಇಬ್ಬರು ನಾಯಕರು ಮುನ್ನಡೆಸಿದ್ದಾರೆ. ಆರಂಭಿಕ ಪಂದ್ಯಗಳಲ್ಲಿ ಋತುರಾಜ್‌ ಗಾಯಕ್ವಾಡ್‌ ಮುನ್ನಡೆಸಿದ್ದರೆ, ಇದೀಗ ಎಂಎಸ್‌ ಧೋನಿ ಮುನ್ನಡೆಸುತ್ತಿದ್ದಾರೆ. ಏಕೆಂದರೆ ಗಾಯಕ್ವಾಡ್‌ ಗಾಯದ ಕಾರಣ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.

ಐದು ಬಾರಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಇಲ್ಲಿಯವರೆಗೂ ಆಡಿದ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಎರಡೇ ಎರಡು ಪಂದ್ಯಗಳು ಮಾತ್ರ ಹಾಗೂ ಇನ್ನುಳಿದ 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಭಾನುವಾರ ಮುಂಬೈ ಇಂಡಿಯನ್ಸ್‌ ವಿರುದ್ದದ ಪಂದ್ಯದಲ್ಲಿ 9 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಸಿಎಸ್‌ಕೆ ತಂಡದಲ್ಲಿ ಆರಂಭಿಕ ಬ್ಯಾಟ್ಸ್‌ಮನ್‌ಗಳು ಸತತವಾಗಿ ವಿಫಲರಾಗುತ್ತಿದ್ದಾರೆ. ಅಲ್ಲದೆ ಮಧ್ಯಮ ಕ್ರಮಾಂಕದಲ್ಲಿ ರಾಹುಲ್‌ ತ್ರಿಪಾಠಿ, ವಿಜಯ್‌ ಶಂಕರ್‌ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ. ಆದರೆ, ಶಿವಂ ದುಬೆ ಹಾಗೂ ಎಂಎಸ್‌ ಧೋನಿ ಡೆತ್‌ ಓವರ್‌ಗಳಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ.

IPL 2025: ಆರ್‌ಸಿಬಿ ಇನ್ನೂ ಎಷ್ಟು ಪಂದ್ಯ ಗೆಲ್ಲಬೇಕು? ಎಲ್ಲಾ ತಂಡಗಳ ಪ್ಲೇಆಫ್ಸ್‌ ಲೆಕ್ಕಾಚಾರ!

ಅಭಿಮಾನಿಗಳಿಗೆ ನಿರಾಶೆಯಾಗಿದೆ

"ಈ ವರ್ಷ ಸಿಎಸ್‌ಕೆ ತಂಡದ ಕಳಪೆ ಪ್ರದರ್ಶನದ ಬಗ್ಗೆ ಅಭಿಮಾನಿಗಳು ನಿರಾಶರಾಗಿದ್ದಾರೆ. ಖಂಡಿತ ಈ ರೀತಿ ಆಡುತ್ತದೆ. ಆರಂಭದಲ್ಲಿಯೂ ಕೂಡ ಇದು ನಮಗೆ ಸಂಭವಿಸಿತ್ತು. ನಾವು ಇದೀಗ ಒಳ್ಳೆಯ ಕ್ರಿಕೆಟ್‌ ಆಡುತ್ತಿಲ್ಲ ಎಂದು ನಮಗೆ ಗೊತ್ತಿದೆ. ಮುಂದಿನ ಪಂದ್ಯಗಳಲ್ಲಿ ನಾವು ಇನ್ನಷ್ಟು ಉತ್ತಮ ಪ್ರದರ್ಶನ ತೋರುತ್ತೇವೆಂಬ ಬಗ್ಗೆ ನಮಗೆ ನಿರೀಕ್ಷೆ ಇದೆ. ಅದ್ಭುತ ಸಾಮರ್ಥ್ಯ ಇರುವ ಶಿವಂ ದುಬೆ ಅವರಂಥ ಆಟಗಾರ ನಮಗೆ ಇದ್ದಾರೆ ಹಾಗೂ ಇವರು ನಮಗೆ ಕಳೆದ ಹಲವು ವರ್ಷಗಳಿಂದ ತಂಡಕ್ಕೆ ನೆರವಾಗುತ್ತಿದ್ದಾರೆ. ಥಲಾ ಎಂಎಸ್‌ ಧೋನಿ ನಾಯಕತ್ವಕ್ಕೆ ಮರಳಿರುವುದರಿಂದ, ನಾವು ಕಮ್‌ಬ್ಯಾಕ್‌ ಮಾಡುವ ಸಮಯದ ಪ್ರಶ್ನೆಯಾಗಿದೆ," ಎಂದು ಸಿಎಸ್‌ಕೆ ಸಿಇಓ ಕಾಶಿ ವಿಶ್ವನಾಥನ್‌ ತಿಳಿಸಿದ್ದಾರೆ.

IPL 2025: ಚೆನ್ನೈ ಸೂಪರ್‌ ಕಿಂಗ್ಸ್‌ ವೈಫಲ್ಯಕ್ಕೆ ನೈಜ ಕಾರಣ ಬಹಿರಂಗಪಡಿಸಿದ ಸುರೇಶ್‌ ರೈನಾ!

2010ರ ರೀತಿ ಕಮ್‌ಬ್ಯಾಕ್‌ ಮಾಡುತ್ತೇವೆ

"ಈ ವೇಳೆ ನಾವು 2010ರ ವರ್ಷವನ್ನು ನೆನಪಿಸಿಕೊಳ್ಳುತ್ತೇವೆ. ಅಂದು ನಾವು ಸತತವಾಗಿ 5 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದೆವು ಹಾಗೂ ಅಂತಿಮವಾಗಿ ಪ್ರಶಸ್ತಿಯನ್ನು ಗೆದ್ದಿದ್ದೆವು. ನಾವು ಅಂದು ಮೊದಲ ಬಾರಿ ಕಪ್‌ ಗೆದ್ದಿದ್ದೆವು. ನಮ್ಮ ಹುಡುಗರು ಬದ್ದರಾಗಿದ್ದಾರೆಂದು ನಮಗೆ ಖಚಿತವಿದೆ. ತಂಡ ಕೂಡ ಬದ್ದವಾಗಿದೆ. ಮುಂದಿನ ಪಂದ್ಯಗಳಲ್ಲಿ ನಾವು ಉತ್ತಮ ಪ್ರದರ್ಶನ ತೋರುತ್ತೇವೆಂಬ ಬಗ್ಗೆ ನನಗೆ ನಿರೀಕ್ಷೆ ಇದೆ," ಎಂದು ಅವರು ಭರವಸೆ ನೀಡಿದ್ದಾರೆ.

2010ರ ಐಪಿಎಲ್‌ ಟೂರ್ನಿಯ ಮೊದಲ ಅವಧಿಯಲ್ಲಿ ಆಡಿದ್ದ 7 ಪಂದ್ಯಗಳಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ, ಎರಡರಲ್ಲಿ ಗೆದ್ದು, ಇನ್ನುಳಿದ 5 ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಆದರೆ, ಎರಡನೇ ಅವಧಿಯಲ್ಲಿ ಎಂಎಸ್‌ ಧೋನಿ ನಾಯಕತ್ವದ ಸಿಎಸ್‌ಕೆ ಕಮ್‌ಬ್ಯಾಕ್‌ ಮಾಡಿತ್ತು. ಅಂತಿಮವಾಗಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು ಹಾಗೂ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿ ಮೊಟ್ಟ ಮೊದಲ ಬಾರಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು