ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

RCB vs CSK: ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

RCB vs CSK: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದಿಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಸಿಎಸ್‌ಕೆ ಬೌಲಿಂಗ್‌ ಆಯ್ದುಕೊಂಡಿದೆ.

IPL 2026: ಸಿಎಸ್‌ಕೆ ಎದುರು ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್‌!

ಆರ್‌ಸಿಬಿ vs ಸಿಎಸ್‌ಕೆ ನಡುವಣ ಐಪಿಎಲ್‌ ಪಂದ್ಯ. -

Profile
Ramesh Kote Apr 5, 2026 7:26 PM

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 11ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು (RCB vs CSK) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಸಿಎಸ್‌ಜೆ ನಾಯಕ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ಅವರು ಬೌಲಿಂಗ್‌ ಆಯ್ದುಕೊಂಡಿದ್ದಾರೆ ಹಾಗೂ ಎದುರಾಳಿ ಆತಿಥೇಯ ಆರ್‌ಸಿಬಿಯನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ಆರ್‌ಸಿಬಿ ಹಾಗೂ ಸಿಎಸ್‌ಕೆ ಎರಡೂ ತಂಡಗಳು ತಮ್ಮ-ತಮ್ಮ ಪ್ಲೇಯಿಂಗ್‌ Xiನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ತಮ್ಮ-ತಮ್ಮ ಕೊನೆಯ ಪಂದ್ಯದಲ್ಲಿ ಕಣಕ್ಕೆ ಇಳಿಸಿದ್ದ ಅದೇ ಆಟಗಾರರನ್ನು ಈ ಪಂದ್ಯದಲ್ಲಿ ಆಡಿಸುತ್ತಿವೆ. ಕಳೆದ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ಮಾಜಿ ನಾಯಕ ಎಂಎಸ್‌ ಧೋನಿ, ಈ ಪಂದ್ಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

IPL 2026: ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಸಂಜು ಸ್ಯಾಮ್ಸನ್‌ ಬಗ್ಗೆ ಇರ್ಫಾನ್‌ ಪಠಾಣ್‌ ದೊಡ್ಡ ಭವಿಷ್ಯ!

ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ತಂಡ, ತನ್ನ ಮೊದಲನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಭರ್ಜರಿ ಗೆಲುವು ಪಡೆದಿತ್ತು. ಆ ಮೂಲಕ 19ನೇ ಆವೃತ್ತಿಯಲ್ಲಿ ಆರ್‌ಸಿಬಿ ಶುಭಾರಂಭ ಮಾಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಎಸ್‌ಆರ್‌ಎಚ್‌ 201 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿ, ದೇವದತ್‌ ಪಡಿಕ್ಕಲ್‌ ಹಾಗೂ ವಿರಾಟ್‌ ಕೊಹ್ಲಿ ಅರ್ಧಶತಕಗಳ ಬಲದಿಂದ ಯಶಸ್ವಿಯಾಗಿ ಚೇಸ್‌ ಮಾಡಿ ಗೆದ್ದು ಬೀಗಿತ್ತು.



ಇನ್ನು ಎದುರಾಳಿ ಸಿಎಸ್‌ಕೆ ತಂಡ ಈ ಟೂರ್ನಿಯಲ್ಲಿ ಅತ್ಯಂತ ನಿರಾಶಾದಾಯಕ ಆರಂಭವನ್ನು ಕಂಡಿದೆ. ಮೊದಲನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಹಾಗೂ ತನ್ನ ಎರಡನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಸತತ ಎರಡೂ ಪಂದ್ಯಗಳನ್ನು ಸೋತಿತ್ತು. ಇದೀಗ ಬೆಂಗಳೂರಿನಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿ ರಜತ್‌ ಪಾಟಿದಾರ್‌ ನಾಯಕತ್ಟದ ಸಿಎಸ್‌ಕೆ ಕಾದಾಟ ನಡೆಸುತ್ತಿದೆ.



ಇತ್ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೇಕಬ್ ಡಫಿ

ಚೆನ್ನೈ ಸೂಪರ್‌ ಕಿಂಗ್ಸ್‌: ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಋತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್

IPL 2026: ಆರ್‌ಸಿಬಿ vs ಸಿಎಸ್‌ಕೆ ನಡುವೆ ಪಂದ್ಯ ಗೆಲ್ಲುವ ನೆಚ್ಚಿನ ತಂಡವನ್ನು ಆರಿಸಿದ ಆರ್‌ ಅಶ್ವಿನ್‌!

ತಂಡಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೇಕಬ್ ಡಫಿ, ಸುಯಶ್‌ ಶರ್ಮಾ, ಜಕೋಬ್‌ ಬೆಥೆಲ್‌, ರಸಿಖ್‌ ದಾರ್‌ ಸಲಾಮ್‌, ಕಾನಿಷ್ಕಾ ಚೌವ್ಹಾಣ್‌, ವೆಂಕಟೇಶ್‌ ಅಯ್ಯರ್‌, ಜಾಶ್‌ ಹೇಝಲ್‌ವುಡ್‌, ಮಂಗೇಶ ಯಾದವ್‌, ವಿಹಾನ್‌ ಮೆಲ್ಹಾತ್ರಾ, ವಿಕ್ಕಿ ಓತ್ಸ್ವಾಲ್‌, ಜೋರ್ಡಾನ್‌ ಕಾಕ್ಸ್‌, ಸ್ವಪ್ನಿಲ್‌ ಸಿಂಗ್‌, ಸಾತ್ವಿಕ್‌ ಸಿಂಗ್‌

ಚೆನ್ನೈ ಸೂಪರ್‌ ಕಿಂಗ್ಸ್‌: ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಋತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್, ಮ್ಯಾಥ್ಯೂ ಶಾರ್ಟ್‌, ಅಕೀಲ್‌ ಹುಸೇನ್‌, ಕಾರ್ತಿಕ್‌ ಶರ್ಮಾ, ರಾಮಕೃಷ್ಣ ಘೋಷ್‌, ಗುರ್ಜಪನೀತ್‌ ಸಿಂಗ್‌, ರಾಹುಲ್‌ ಚಹರ್‌, ಎಂಎಸ್‌ ಧೋನಿ, ಶ್ರೇಯಸ್‌ ಗೋಪಾಲ್‌, ಸ್ಪೆನ್ಸರ್‌ ಜಾನ್ಸನ್‌, ಮುಕೇಶ್‌ ಚೌಧರಿ, ಊರ್ವಿಲ್‌ ಪಟೇಲ್‌, ಅಮನ್‌ ಖಾನ್‌, ಡೆವಾಲ್ಡ್‌ ಬ್ರೆವಿಸ್‌, ಝ್ಯಾಕರಿ ಫೌಲ್ಕ್ಸ್‌