ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

2026ರ ಐಪಿಎಲ್‌ ಟೂರ್ನಿಯ ಹಿನ್ನೆಲೆಯಲ್ಲಿ ಕೆಎಸ್‌ಸಿಎ ಅಧಿಕಾರಿಗಳ ಜೊತೆ ಶಾಲಿನಿ ರಜನೀಶ್‌ ಸಭೆ

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಆರಂಭಕ್ಕೂ ಮುನ್ನ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಸುತ್ತುಮುತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೆ ಸೂಕ್ತ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದಾರೆ.

IPL 2026: ಕೆಎಸ್‌ಸಿಎ ಅಧಿಕಾರಿಗಳ ಜೊತೆ ಶಾಲಿನಿ ರಜನೀಶ್‌ ಸಭೆ!

2026ರ ಐಪಿಎಲ್‌ ಟೂರ್ನಿಗೂ ಮುನ್ನ ಅಧಿಕಾರಿಗಳ ಜೊತೆ ಶಾಲಿನಿ ರಜನೀಶ್‌ ಸಭೆ. -

Profile
Ramesh Kote Mar 27, 2026 7:46 PM

ಬೆಂಗಳೂರು: ನಾಳೆಯಿಂದ (ಮಾರ್ಚ್‌ 28) 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಪಂದ್ಯಗಳುಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ KSCA) ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಕ್ರಿಕೆಟ್ ಪ್ರೇಮಿಗಳ ಸುರಕ್ಷತೆಗೆ ಕ್ರೀಡಾಂಗಣದ ಒಳಗೆ ಮತ್ತು ಕ್ರೀಡಾಂಗಣದ ಸುತ್ತ ರೂಪಿಸಿರುವ ಭದ್ರತಾ ವ್ಯವಸ್ಥೆ, ನಗರದ ಸಂಚಾರ ವ್ಯವಸ್ಥೆಯಲ್ಲಿ ಮಾಡಿಕೊಳ್ಳಲಾಗಿರುವ ಬದಲಾವಣೆಗಳು, ಪಾರ್ಕಿಂಗ್ ವ್ಯವಸ್ಥೆ, ಕ್ರೀಡಾಂಗಣದ ಒಳಗೆ ಕುಡಿಯುವ ನೀರು ಸೇರಿದಂತೆ ಇತರೆ ಅತ್ಯಾವಶ್ಯಕ ಸಂಗತಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.

ಮೆಟ್ರೋ ರೈಲಿನ ಮೇಲೆ ಬೀಳುವ ಪ್ರಯಾಣಿಕರ ಸಾಂದ್ರತೆ, ಮೆಟ್ರೋ ಸಂಚರಿಸುವ ವೇಳಾಪಟ್ಟಿ, ಮೆಟ್ರೋ ನಿಲ್ದಾಣಗಳಲ್ಲಿ ಮಾಡಿಕೊಳ್ಳಲಾಗಿರುವ ಹೆಚ್ಚುವರಿ ಭದ್ರತೆ, ಸುರಕ್ಷತೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಣ್ಣ ಅಹಿತಕರ ಘಟನೆಗೂ ಅವಕಾಶ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದರು.

IPL 2026: ಎಸ್‌ಆರ್‌ಎಚ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿಗೆ ಆಘಾತ, ನುವಾನ್‌ ತುಷಾರ್‌ ಔಟ್‌?

ಟೂರ್ನಿಯ ಆಯೋಜನೆಗೆ ಸರ್ಕಾರ ವಿಧಿಸಿರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಂಸ್ಥೆಗಳು ಹೈ ಅಲರ್ಟ್ ಆಗಿರಬೇಕು. ಆಯಾ ಕ್ಷಣದ ಮಾಹಿತಿಗಳನ್ನು ಮೇಲಿನ ಅಧಿಕಾರಿಗಳಿಗೆ ನಿಯಮಿತವಾಗಿ ವಿನಿಮಯ ಮಾಡಿಕೊಳ್ಳಬೇಕು ಎನ್ನುವ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಕೆಎಸ್‌ಸಿಎ ಸಂಸ್ಥೆಯ ಆಡಳಿತ ಮಂಡಳಿ, ಪದಾಧಿಕಾರಿಗಳು, ಆರ್‌ಸಿಬಿ ಪದಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು, ಜಿಬಿಎ ಅಯುಕ್ತರು, ಮೆಟ್ರೋ ಎಂಡಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

IPL 2026: ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ, ಬೆಂಗಳೂರಿಗೆ ಆಗಮಿಸಿದ ಜಾಶ್‌ ಹೇಝಲ್‌ವುಡ್‌!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳ ನಡುವಣ ಪಂದ್ಯದ ಮೂಲಕ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ಆರಂಭವಾಗಲಿದೆ. ಕಳೆದ ವರ್ಷ ಆರ್‌ಸಿಬಿ ಚೊಚ್ಚಲ ಕಪ್‌ ಗೆದ್ದ ಬಳಿಕ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾಕಷ್ಟು ಕಟ್ಟು ನಿಟ್ಟಿನ ನಿಯಮಗಳ ಅನುಸಾರ ಟೂರ್ನಿಯ ಪಂದ್ಯಗಳನ್ನು ನಡೆಸಲು ಕರ್ನಾಟಕ ಸರ್ಕಾರ ಅವಕಾಶ ಮಾಡಕೊಟ್ಟಿದೆ. ಈ ಕಾರಣದಿಂದ ಶಾಲಿನಿ ರಜನೀಶ್‌ ಅವರು ಶುಕ್ರವಾರ ಸ್ಟೇಡಿಯಂಗೆ ತೆರಳಿ ಭದ್ರತೆಯನ್ನು ಪರಿಶೀಲಿಸಿದರು.

ಎರಡನೇ ಕಪ್‌ ಗೆಲ್ಲಲು ಆರ್‌ಸಿಬಿ ಸಜ್ಜು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಎರಡನೇ ಐಪಿಎಲ್‌ ಟೂರ್ನಿಯನ್ನು ಗೆಲ್ಲಲು ಎದುರು ನೋಡುತ್ತಿದೆ. ಕಳೆದ ಸೀಸನ್‌ನಲ್ಲಿ ಆಡಿದ್ದೆ ಅದೇ ಆಟಗಾರರು ಈ ಬಾರಿಯೂ ಆರ್‌ಸಿಬಿ ಪರ ಕಣಕ್ಕೆ ಇಳಿಯಲಿದ್ದಾರೆ. ಇದರ ಆಧಾರದ ಮೇಲೆ ಈ ಬಾರಿಯೂ ಆರ್‌ಸಿಬಿ ಪ್ರಶಸ್ತಿಯನ್ನು ಗೆಲ್ಲಲು ಉತ್ತಮ ಅವಕಾಶ ಸಿಗಲಿದೆ.