ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ತಂಡಗಳು ಪಡೆದ ನಗದು ಬಹುಮಾನದ ವಿವರ!

ಪಾಕಿಸ್ತಾನದ ಆತಿಥ್ಯದಲ್ಲಿ ಇತ್ತೀಚೆಗೆ ಮುಕ್ತಾಯವಾಗಿದ್ದ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲಿ ಭಾರತ ತಂಡ ಚಾಂಪಿಯನ್‌ ಆಗಿತ್ತು. ಫೈನಲ್‌ನಲ್ಲಿ ಸೋತ ನ್ಯೂಜಿಲೆಂಡ್‌ ತಂಡ ರನ್ನರ್‌ ಅಪ್‌ ಆಗಿತ್ತು. ಚಾಂಪಿಯನ್‌ ಭಾರತ, ಸೇರಿದಂತೆ ಟೂರ್ನಿಯಲ್ಲಿ ಭಾಗವಹಿಸಿದ ತಂಡಗಳು ಪಡೆದ ನಗದು ಬಹುಮಾನದ ವಿವರ ಇಲ್ಲಿದೆ.

ಚಾಂಪಿಯನ್ಸ್‌ ಟ್ರೋಫಿ ಆಡಿದ್ದ ತಂಡಗಳಿಗೆ ಸಿಕ್ಕ ನಗದು ಬಹುಮಾನ!

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ನಗದು ಬಹುಮಾನದ ವಿವರ

Profile Ramesh Kote Mar 12, 2025 9:16 PM

ನವದೆಹಲಿ: ಚಾಂಪಿಯನ್ಸ್ ಟ್ರೋಫಿ ಮುಗಿದು ಮೂರು ದಿನಗಳು ಕಳೆದಿವೆ. 12 ವರ್ಷಗಳ ನಂತರ ಟೀಮ್ ಇಂಡಿಯಾ ಮತ್ತೊಮ್ಮೆ ಈ ಟೂರ್ನಿಯನ್ನು ಗೆದ್ದುಕೊಂಡಿದೆ. ಈ ಟೂರ್ನಿಯ ಅಂತ್ಯದ ನಂತರ, ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳು ಭಾರಿ ಮೊತ್ತದ ನಗದು ಬಹುಮಾನವನ್ನು ಸ್ವೀಕರಿಸಿವೆ.

ಈ ಟೂರ್ನಿಯ ನಾಕ್‌ಔಟ್‌ಗೆ ಅರ್ಹತೆ ಪಡೆಯದೆ ಹೊರಬಿದ್ದ ತಂಡಗಳು ಕೂಡ ಕೋಟಿ-ಕೋಟಿ ರೂ. ಗಳನ್ನು ಪಡೆದುಕೊಂಡಿವೆ. ಈ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡ ಭಾರಿ ಮೊತ್ತದ ಹಣವನ್ನು ಪಡೆದುಕೊಂಡಿದೆ. ಚಾಂಪಿಯನ್‌ ಟೀಮ್ ಇಂಡಿಯಾ 20 ಕೋಟಿ 48 ಲಕ್ಷ ರೂ.ಗಳನ್ನು ಪಡೆದುಕೊಂಡಿದೆ. ಮಾರ್ಚ್‌ 9 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿತ್ತು.

ಇನ್ನು ಫೈನಲ್‌ ಹಣಾಹಣಿಯಲ್ಲಿ ಭಾರತದ ಎದುರು ಸೋತಿದ್ದ ನ್ಯೂಜಿಲೆಂಡ್‌ ತಂಡಕ್ಕೂ ಒಳ್ಳೆಯ ನಗದು ಬಹುಮಾನ ದೊರೆಯಿತು. ಈ ಟೂರ್ನಿಯಲ್ಲಿ ರನ್ನರ್ ಅಪ್ ಸ್ಥಾನ ಪಡೆದ ನ್ಯೂಜಿಲೆಂಡ್ ತಂಡಕ್ಕೆ 10.9 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗಿದೆ. ಈ ಟೂರ್ನಿಯಲ್ಲಿ ನ್ಯೂಜಿಲೆಂಡ್‌ನ ಪ್ರದರ್ಶನವೂ ಅದ್ಭುತವಾಗಿತ್ತು.

IND vs NZ Finla: ಚಾಂಪಿಯನ್‌ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

ದಕ್ಷಿಣ ಆಫ್ರಿಕಾ ತಂಡಕ್ಕೆ 5.32 ಕೋಟಿ ರೂ.

ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್‌ನಲ್ಲಿ ಸೋತಿದ್ದ ದಕ್ಷಿಣ ಆಫ್ರಿಕಾ ತಂಡ ಮೂರನೇ ಸ್ಥಾನ ಗಳಿಸಿತು. ದಕ್ಷಿಣ ಆಫ್ರಿಕಾ ತಂಡವು ಸೆಮಿಫೈನಲ್‌ಗೂ ಮುನ್ನ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ. ಈ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ 5.32 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗಿದೆ.

ಆಸ್ಟ್ರೇಲಿಯಾ ತಂಡಕ್ಕೆ 5.03 ಕೋಟಿ ರೂ.

ಈ ಟೂರ್ನಿಯ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ಸೋಲು ಅನುಭವಿಸಿತು. ಸೋತರೂ ಆಸ್ಟ್ರೇಲಿಯಾ ತಂಡ 5.03 ಕೋಟಿ ರೂಪಾಯಿ ನಗದು ಬಹುಮಾನ ಪಡೆದುಕೊಂಡಿತು. ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿತ್ತು.

IND vs NZ: ರೋಹಿತ್‌ ಶರ್ಮಾ ಬ್ಯಾಟಿಂಗ್‌ನಿಂದ ಬೌಲರ್‌ಗಳು ಭಯ ಬಿದ್ದಿದ್ದರೆಂದ ಮಿಚೆಲ್‌ ಸ್ಯಾಂಟ್ನರ್‌!

ಅಫ್ಘಾನಿಸ್ತಾನಕ್ಕೆ 4.22 ಕೋಟಿ ರೂ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಯಲ್ಲಿಯೂ ಅಫ್ಘಾನಿಸ್ತಾನ ತಂಡದ ಪ್ರದರ್ಶನ ಅದ್ಭುತವಾಗಿತ್ತು. ದಕ್ಷಿಣ ಆಫ್ರಿಕಾ ವಿರುದ್ಧ ಒಂದೇ ಒಂದು ಪಂದ್ಯದಲ್ಲಿ ಆಫ್ಘನ್‌ ಸೋತಿತ್ತು. ಆದರೆ ಒಂದು ಪಂದ್ಯ ಮಳೆಯಿಂದ ರದ್ದಾದ ಕಾರಣ, ಅಫ್ಘಾನಿಸ್ತಾನ ತಂಡವು ಟೂರ್ನಿಯ ಸೆಮಿಫೈನಲ್ ತಲುಪಲು ಸಾಧ್ಯವಾಗಲಿಲ್ಲ. ಆಫ್ಘನ್‌ ನಗದು ಬಹುಮಾನವಾಗಿ 4.22 ಕೋಟಿ ರೂ. ಗಳನ್ನು ಪಡೆದುಕೊಂಡಿದೆ.

ಬಾಂಗ್ಲಾದೇಶ ತಂಡಕ್ಕೆ 3.94 ಕೋಟಿ ರೂ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶದ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ಬಾಂಗ್ಲಾದೇಶ ತಂಡವು ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ ಮತ್ತು ಬಹುಬೇಗ ಸೆಮಿಫೈನಲ್ ರೇಸ್‌ನಿಂದ ಹೊರಬಿತ್ತು. ಆದರೂ ಬಾಂಗ್ಲಾದೇಶ ತಂಡಕ್ಕೆ 3.94 ಕೋಟಿ ರೂಪಾಯಿ ಬಹುಮಾನ ನೀಡಲಾಯಿತು. ಈ ಟೂರ್ನಿಯಲ್ಲಿ ಬಾಂಗ್ಲಾದೇಶ, ನ್ಯೂಜಿಲೆಂಡ್ ಮತ್ತು ಭಾರತದ ವಿರುದ್ಧ ಸೋಲನ್ನು ಅನುಭವಿಸಿತು.

ಚಾಂಪಿಯನ್ಸ್‌ ಟ್ರೋಫಿ ಗೆದ್ದು ಕಪಿಲ್‌ ದೇವ್‌, ಸೌರವ್‌ ಗಂಗೂಲಿ ದಾಖಲೆ ಮುರಿದ ರೋಹಿತ್‌ ಶರ್ಮಾ!

ಇಂಗ್ಲೆಂಡ್‌ ತಂಡಕ್ಕೆ 2.20 ಕೋಟಿ ರೂ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಪ್ರದರ್ಶನವೂ ತುಂಬಾ ಕಳಪೆಯಾಗಿತ್ತು. ಈ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡವು ಅಫ್ಘಾನಿಸ್ತಾನ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿತ್ತು. ಇಂಗ್ಲೆಂಡ್ ತಂಡ ಬಹುಬೇಗ ಸೆಮಿಫೈನಲ್‌ ರೇಸ್‌ನಿಂದ ಮೊದಲೇ ಹೊರ ನಡೆದಿತ್ತು. ಆದರೆ ಇಂಗ್ಲೆಂಡ್‌ಗೆ 2.20 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗಿದೆ.

ಪಾಕಿಸ್ತಾನ ತಂಡಕ್ಕೆ 2.20 ಕೋಟಿ ರೂ.

ಈ ಟೂರ್ನಿಯ ಆತಿಥೇಯ ಪಾಕಿಸ್ತಾನ ಕೂಡ ನಗದು ಬಹುಮಾನವನ್ನು ಪಡೆದುಕೊಂಡಿದೆ. ಈ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಈ ಟೂರ್ನಿಯಲ್ಲಿ ಪಾಕಿಸ್ತಾನ, ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತಿತ್ತು. ಆದರೆ ಬಾಂಗ್ಲಾದೇಶ ವಿರುದ್ಧದ ಅವರ ಪಂದ್ಯ ಮಳೆಯಿಂದ ರದ್ದಾಗಿತ್ತು. ಆದರೆ ಪಾಕಿಸ್ತಾನ ತಂಡಕ್ಕೆ ಐಸಿಸಿಯಿಂದ 2.20 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದೆ.