ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʻನಮ್ಮ ವನಿತೆಯರು ಇತಿಹಾಸ ಸೃಷ್ಟಿಸಿದ್ದಾರೆʼ: ಭಾರತದ 2025ರ ಸ್ಮರಣೀಯ ವರ್ಷಕ್ಕೆ ಪಿಎಂ ಮೋದಿ ಮೆಚ್ಚುಗೆ!

2025ರ ವರ್ಷದಲ್ಲಿನ ಭಾರತೀಯ ಕ್ರೀಡಾಪಟುಗಳ ಸಾಧನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ವಿಶೇಷವಾಗಿ ಮಹಿಳಾ ಏಕದಿನ ವಿಶ್ವಕಪ್‌ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಹರ್ಮನ್‌ಪ್ರೀತ್‌ ಕೌರ್‌ ನಾಯಕತ್ವದ ಭಾರತ ಮಹಿಳಾ ತಂಡವನ್ನು ಮೋದಿ ಶ್ಲಾಘಿಸಿದ್ದಾರೆ.

ಏಕದಿನ ವಿಶ್ವಕಪ್‌ ಗೆದ್ದ ಭಾರತ ವನಿತೆಯರಿಗೆ ಪಿಎಂ ಮೋದಿ ಮೆಚ್ಚುಗೆ!

ಭಾರತ ತಂಡಗಳನ್ನು ಶ್ಲಾಘಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ. -

Profile
Ramesh Kote Dec 28, 2025 6:16 PM

ನವದೆಹಲಿ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು 2025ರಲ್ಲಿ ಕೊನೆಯ ಬಾರಿ 'ಮನ್ (Mann Ki Baat) ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. 'ಮನ್ ಕಿ ಬಾತ್' ಕಾರ್ಯಕ್ರಮದ 129ನೇ ಸಂಚಿಕೆಯಲ್ಲಿ ಅವರು, 2025 ನಮಗೆ ಅನೇಕ ಕ್ಷಣಗಳನ್ನು ನೀಡಿತು, ಇದು ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ. ತಮ್ಮ ಭಾಷಣದಲ್ಲಿ 2025 ರಲ್ಲಿ ದೇಶ (ಭಾರತ) ಕ್ರೀಡೆಯಲ್ಲಿ ಸಾಧಿಸಿದ ಪ್ರಮುಖ ಯಶಸ್ಸನ್ನು ಪ್ರಧಾನಿ ನೆನಪಿಸಿಕೊಂಡರು. ಭಾರತೀಯ ಪರುಷರ ಹಾಗೂ ಮಹಿಳೆಯರ ಕ್ರಿಕೆಟ್‌ ತಂಡಗಳ ಸಾಧನೆಯನ್ನು ಇಲ್ಲಿ ಅವರು ಸ್ಮರಿಸಿಕೊಂಡಿದ್ದಾರೆ.

2025ರ ವರ್ಷವು ಕ್ರೀಡೆಯ ವಿಷಯದಲ್ಲಿ ಸ್ಮರಣೀಯ ವರ್ಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನಮ್ಮ ಪುರುಷರ ಕ್ರಿಕೆಟ್ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತು. ಮಹಿಳಾ ಕ್ರಿಕೆಟ್ ತಂಡವು ಮೊದಲ ಬಾರಿ ಏಕದಿನ ವಿಶ್ವಕಪ್ ಗೆದ್ದುಕೊಂಡಿದೆ. ಭಾರತದ ಹೆಣ್ಣುಮಕ್ಕಳು ಮಹಿಳಾ ಅಂಧರ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಟೀಮ್ ಇಂಡಿಯಾ ಕೂಡ ಹೆಮ್ಮೆಯಿಂದ ತ್ರಿವರ್ಣ ಧ್ವಜವನ್ನು ಹಾರಿಸಿತು ಎಂದು ಹೊಗಳಿದ್ದಾರೆ.

ಗೌತಮ್‌ ಗಂಭೀರ್‌ ಭಾರತದ ಹೆಡ್‌ ಕೋಚ್‌ ಹುದ್ದೆಯನ್ನು ಕಳೆದುಕೊಳ್ತಾರಾ? ಸ್ಪಷ್ಟನೆ ನೀಡಿದ ಬಿಸಿಸಿಐ!

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಯಾವುದೇ ಅಡೆತಡೆಗಳಿಲ್ಲದೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆಂದು ಪ್ಯಾರಾ-ಅಥ್ಲೀಟ್‌ಗಳನ್ನು ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 2025 ಭಾರತಕ್ಕೆ ಇನ್ನಷ್ಟು ಆತ್ಮವಿಶ್ವಾಸವನ್ನು ನೀಡಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು ಎಂದು ಪ್ರಧಾನಿ ಮೋದಿ ಹೇಳಿದರು. 2026 ರಲ್ಲಿ ದೇಶ ಹೊಸ ಭರವಸೆಗಳು ಮತ್ತು ಹೊಸ ಸಂಕಲ್ಪದೊಂದಿಗೆ ಮುಂದುವರಿಯಲು ಸಿದ್ಧವಾಗಿದೆ ಎಂದರು. ಭಾರತ ಈ ಕ್ರೀಡಾಕೂಟದಲ್ಲಿ 6 ಚಿನ್ನ, 9 ಬೆಳ್ಳಿ ಹಾಗೂ 7 ಕಂಚು ಸೇರಿದಂತೆ ಒಟ್ಟು 22 ಪದಕಗಳನ್ನು ಗೆದ್ದಿದೆ.



ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಸಾಧನೆಗಳು

ರೋಹಿತ್ ಶರ್ಮಾ ನೇತೃತ್ವದ ಭಾರತ ಪುರುಷ ಕ್ರಿಕೆಟ್ ತಂಡ 2025ರ ಮಾರ್ಚ್ 9 ರಂದು ದುಬೈನಲ್ಲಿ ನ್ಯೂಜಿಲೆಂಡ್ ಅನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತು. ಇದು 2013ರ ನಂತರ ಟೀಮ್ ಇಂಡಿಯಾದ ಮೊದಲ ಚಾಂಪಿಯನ್ಸ್ ಟ್ರೋಫಿ ಗೆಲುವು. 2025ರ ವರ್ಷವು ಮಹಿಳಾ ಕ್ರಿಕೆಟ್ ತಂಡಕ್ಕೆ ವಿಶೇಷ ವರ್ಷವಾಗಿತ್ತು. ನವೆಂಬರ್ 2 ರಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡವು ನವ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ತನ್ನ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿತ್ತು. ಇದರ ಮಹಿಳಾ ಅಂಧರ ಕ್ರಿಕೆಟ್ ತಂಡವು ಮೊದಲ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು.

IND vs NZ: ಸಚಿನ್‌ ತೆಂಡೂಲ್ಕರ್‌ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರುವ ಸನಿಹದಲ್ಲಿ ರೋಹಿತ್‌ ಶರ್ಮಾ!

ಶ್ರೀಲಂಕಾದ ಕೊಲಂಬೊದಲ್ಲಿ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ಮಹಿಳಾ ಅಂಧರ ತಂಡ ನೇಪಾಳವನ್ನು ಮಣಿಸಿತು. ಸೆಪ್ಟೆಂಬರ್ 28 ರಂದು ದುಬೈನಲ್ಲಿ ನಡೆದಿದ್ದ ಪುರುಷರ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಪ್ರಶಸ್ತಿಯನ್ನು ಎತ್ತಿ ಹಿಡಿದಿತ್ತು. ಈ ವರ್ಷ ಭಾರತೀಯ ಹಾಕಿ ತಂಡ, ಏಷ್ಯಾ ಕಪ್ ಹಾಕಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. 2025ರಲ್ಲಿ ಪುರುಷ ಮತ್ತು ಮಹಿಳಾ ಬಾಕ್ಸರ್‌ಗಳು ಇಬ್ಬರೂ ಬಾಕ್ಸಿಂಗ್‌ನಲ್ಲಿ ಪ್ರಾಬಲ್ಯ ಸಾಧಿಸಿದ್ದರು.