MLC 2025: ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ ಡೇವಿಡ್ ವಾರ್ನರ್!
David Warner Creates History: ಆಸ್ಟ್ರೇಲಿಯಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರು ಟಿ20 ಕ್ರಿಕೆಟ್‌ನಲ್ಲಿ ನೂತಮ ಮೈಲುಗಲ್ಲು ತಲುಪಿದ್ದಾರೆ. ಪ್ರಸ್ತುತ ಸಿಯಾಟಲ್ ಓರ್ಕಸ್ ತಂಡದ ಪರ ಮೇಜರ್ ಲೀಗ್ ಕ್ರಿಕೆಟ್ 20 ಟೂರ್ನಿಯನ್ನು ಆಡುತ್ತಿದ್ದಾರೆ. ಆದರೆ, ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸುತ್ತಿರುವ ಅವರು, ಫೀಲ್ಡಿಂಗ್‌ನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ನೂತನ ದಾಖಲೆ ಬರೆದ ಡೇವಿಡ್ ವಾರ್ನರ್.

ನವದೆಹಲಿ: ಆಸ್ಟ್ರೇಲಿಯಾ ದಿಗ್ಗಜ ಡೇವಿಡ್ ವಾರ್ನರ್ (David Warner) ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ, ಅವರು ಸದ್ಯ ವಿಶ್ವದಾದ್ಯಂತ ಟಿ20 ಫ್ರಾಂಚೈಸಿ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸಕ್ರಿಯರಾಗಿದ್ದಾರೆ. ಅವರು ಸದ್ಯ 2025ರ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ (MLC 2025) ಸಿಯಾಟಲ್ ಓರ್ಕಸ್ ತಂಡದ ಪರ ಆಡುತ್ತಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ ಸೂಪರ್ ಲೀಗ್ (PSL 2025) ಟೂರ್ನಿಯಲ್ಲಿ ಯೋಗ್ಯ ಪ್ರದರ್ಶನವನ್ನು ತೋರುತ್ತಿದ್ದ ಅವರು, ಇದೀಗ ಮೇಜರ್ ಲೀಗ್ ಟೂರ್ನಿಯಲ್ಲಿ ಕಳಪೆ ಬ್ಯಾಟಿಂಗ್ ತೋರುತ್ತಿದ್ದಾರೆ. ಕಳೆದ ಐದು ಪಂದ್ಯಗಳಿಂದ ಒಂದೇ ಒಂದು ಅರ್ಧಶತಕವನ್ನು ಕೂಡ ಗಳಿಸಲು ಸಾಧ್ಯವಾಗಲಿಲ್ಲ.
ಡೇವಿಡ್ ವಾರ್ನರ್ ಅವರು ಬ್ಯಾಟಿಂಗ್ ಜೊತೆಗೆ ಫೀಲ್ಡಿಂಗ್‌ನಲ್ಲಿ ಮೌಲ್ಯವನ್ನು ತಂದುಕೊಡುತ್ತಾರೆ. ಅವರು ತಮ್ಮ ಚುರುಕಾದ ಫೀಲ್ಡಿಂಗ್ ಮೂಲಕ ಹಲವು ರನ್‌ಗಳನ್ನು ನಿಯಂತ್ರಿಸುವ ಕೌಶಲವನ್ನು ಹೊಂದಿದ್ದಾರೆ. ಅದರಂತೆ ಸ್ಯಾನ್ ಫ್ರಾನ್ಸಿಸ್ಕೊ ಯೂನಿಕಾರ್ನ್ ವಿರುದ್ದದ ಪಂದ್ಯದಲ್ಲಿ ವಾರ್ನರ್ ಎರಡು ನಿರ್ಣಾಯಕ ಕ್ಯಾಚ್‌ಗಳನ್ನು ಪಡೆದಿದ್ದರು. ಅವರು ಫಿನ್ ಆಲೆನ್ ಹಾಗೂ ಜೇಕ್ ಮೇಗರ್ಕ್ ಅವರ ಕ್ಯಾಚ್‌ಗಳನ್ನು ಪಡೆದಿದ್ದರು. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ್ದಾರೆ.
Virat Kohli: ಡೇವಿಡ್ ವಾರ್ನರ್ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ
ವಿಶೇಷ ದಾಖಲೆ ಬರೆದ ಡೇವಿಡ್ ವಾರ್ನರ್
ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಟಿ20 ಕ್ರಿಕೆಟ್‌ನಲ್ಲಿ 200 ಕ್ಯಾಚ್‌ಗಳನ್ನು ಪಡೆದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆಯನ್ನು ಡೇವಿಡ್ ವಾರ್ನರ್ ಬರೆದಿದ್ದಾರೆ. ವಾರ್ನರ್ 383 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 223 ಕ್ಯಾಚ್‌ಗಳು ಹಾಗೂ ಟಿ20 ಕ್ರಿಕೆಟ್‌ನಲ್ಲಿ 200 ಕ್ಯಾಚ್‌ಗಳನ್ನು ಪಟಡೆದಿದ್ದಾರೆ. ಅಂದ ಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಮೊದಲ ಆಟಗಾರ ಎಂಬ ದಾಖಲೆ ಮಹೇಲಾ ಜಯವರ್ಧನೆ ಹೆಸರಿನಲ್ಲಿದೆ. ಅವರು 652 ಪಂದ್ಯಗಳಿಂದ 440 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಇನ್ನು ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ದಾಖಲೆ ಕೈರೊನ್ ಪೊಲಾರ್ಡ್ ಹೆಸರಿನಲ್ಲಿದೆ. ಅವರು 386 ಕ್ಯಾಚ್‌ಗಳನ್ನು ಪಡೆದಿದ್ದಾರೆ.
David Warner comes in clutch with these two catches, playing an integral part in getting out two of SFU’s heaviest hitters. 💥🐋 #CognizantClutchCatch pic.twitter.com/MZbXgDPMfT
— Cognizant Major League Cricket (@MLCricket) June 26, 2025
ಅಂದ ಹಾಗೆ ಈ ಪಂದ್ಯದಲ್ಲಿ ಓರ್ಕಸ್ ತಂಡ, ಸ್ಯಾನ್ ಫ್ರಾನ್ಸಿಸ್ಕೋ ತಂಡದ ವಿರುದ್ದ 32 ರನ್‌ಗಳ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಸ್ಯಾನ್ ಫ್ರಾನ್ಸಿಸ್ಕೋ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 8 ವಿಕೆಟ್‌ಗಳ ನಷ್ಟಕ್ಕೆ 175 ರನ್‌ಗಳನ್ನ ಕಲೆ ಹಾಕಿತ್ತು. ಮ್ಯಾಥ್ಯೂ ಶಾರ್ಟ್ 52 ರನ್ ಹಾಗೂ ರೊಮ್ಯಾರಿಯೊ ಶೆಫರ್ಡ್ 56 ರನ್‌ಗಳನ್ನು ಗಳಿಸಿದ್ದರು. ಬಳಿಕ ಗುರಿ ಹಿಂಬಾಲಿಸಿದ ಸಿಯಾಟಸ್ ಓರ್ಕಸ್ ಪರ ಡೇವಿಡ್ ವಾರ್ನರ್, ಹೆನ್ರಿಚ್ ಕ್ಲಾಸೆನ್ ಹಾಗೂ ಶಿಮ್ರಾನ್ ಹೆಟ್ಮಾಯೆರ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ವಾರ್ನರ್ 23 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಒರ್ಕಸ್ ಸೋಲು ಅನುಭವಿಸಿತ್ತು.