ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಕೆಕೆಆರ್‌ ವಿರುದ್ದ ಸೋತ ಡೆಲ್ಲಿ ಕ್ಯಾಪಿಟಲ್ಸ್‌ನ ಪ್ಲೇಆಫ್ಸ್‌ ಲೆಕ್ಕಾಚಾರ!

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಸೋಲಿನ ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ಪ್ಲೇಆಫ್‌ ಹಾದಿ ಸ್ವಲ್ಪ ಕಠಿಣವಾಗಿದೆ. ಇಲ್ಲಿಯ ತನಕ ಆಡಿದ 10 ಪಂದ್ಯಗಳಿಂದ ಡೆಲ್ಲಿ 12 ಅಂಕಗಳೊಂದಿಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ. ಡೆಲ್ಲಿಗೆ ಲೀಗ್‌ನಲ್ಲಿ ಇನ್ನೂ ನಾಲ್ಕು ಪಂದ್ಯಗಳನ್ನು ಆಡಬೇಕಾಗಿದೆ.

ಕೆಕೆಆರ್‌ ಎದುರು ಸೋತ ಡೆಲ್ಲಿ ಕ್ಯಾಪಿಟಲ್ಸ್‌ನ ಪ್ಲೇಆಫ್ಸ್‌ ಲೆಕ್ಕಾಚಾರ!

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪ್ಲೇಆಫ್ಸ್‌ ಲೆಕ್ಕಾಚಾರ.

Profile Ramesh Kote Apr 30, 2025 7:26 AM

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ( Delhi Capitals) ತಂಡದ ಪ್ಲೇಆಫ್‌ ಹಾದಿ ಸ್ವಲ್ಪ ಕಠಿಣವಾಗಿದೆ. ಮಂಗಳವಾರ ತನ್ನ ತವರು ಅಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ಡೆಲ್ಲಿ 14 ರನ್‌ಗಳಿಂದ ಸೋಲು ಅನುಭವಿಸಿತು. 205 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ 14ನೇ ಓವರ್‌ನಿಂದಲೇ ಎಡವಿತು. ಇದರಿಂದಾಗಿ ಸೋಲು ಒಪ್ಪಿಕೊಳ್ಳಬೇಕಾಯಿತು. ಈ ಸೋಲಿನಿಂದಾಗಿ ಅಕ್ಷರ್‌ ಪಟೇಲ್‌ ನಾಯಕತ್ವದ ಡಿಸಿ, ಪ್ಲೇಆಫ್ಸ್‌ಗೆ ಪ್ರವೇಶ ಮಾಡಬೇಕೆಂದರೆ ಇನ್ನೂ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು? ಎಂಬಂತೆ ಸಂಪೂರ್ಣ ಲೆಕ್ಕಾಚಾರವನ್ನು ಇಲ್ಲಿ ವಿವರಿಸಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಇಲ್ಲಿಯ ತನಕ 10 ಪಂದ್ಯಗಳ ಪೈಕಿ 12 ಅಂಕಗಳನ್ನು ಕಲೆ ಹಾಕಿದೆ. ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಡೆಲ್ಲಿ ಕನಿಷ್ಠ 2 ಪಂದ್ಯಗಳನ್ನಾದರೂ ಗೆಲ್ಲಬೇಕಾಗಿದೆ. ಒಂದು ವೇಳೆ ಮೂರು ಪಂದ್ಯಗಳಲ್ಲಿ ಸೋತು, ಒಂದರಲ್ಲಿ ಗೆದ್ದರೆ ಆಗ ಡೆಲ್ಲಿ ಒಟ್ಟು 14 ಅಂಕಗಳನ್ನು ಕಲೆ ಹಾಕಿದಂತಾಗುತ್ತದೆ. ಆಗ ಡೆಲ್ಲಿಯ ಪ್ಲೇಆಫ್ಸ್‌ ಭವಿಷ್ಯ ಇತರೆ ತಂಡಗಳ ಫಲಿತಾಂಶವನ್ನು ಅಲಂಬಿಸಬೇಕಾಗುತ್ತದೆ. ಅಂದ ಹಾಗೆ ಡೆಲ್ಲಿಗೆ ಪ್ಲೇಆಫ್ಸ್‌ ತಲುಪುವ ಅವಕಾಶ ಇನ್ನೂ ಉತ್ತಮವಾಗಿದೆ, ಆದರೆ ಈಗ ಸ್ಪರ್ಧೆ ಇನ್ನಷ್ಟು ಕಠಿಣವಾಗಿದೆ. ಡಿಸಿ ಉತ್ತಮ ಪ್ರದರ್ಶನ ನೀಡಿದರೆ, ಅದು ಪ್ಲೇಆಫ್ಸ್‌ಗೆ ಲಗ್ಗೆ ಇಡಬಹುದು. ಆದರೆ, ಮುಂದಿನ 4 ಪಂದ್ಯಗಳಲ್ಲಿ ಒಂದರಲ್ಲಿ ಸೋತರೂ ಡಿಸಿ ಪ್ಲೇಆಫ್ಸ್‌ ಹಾದಿ ಕಠಿಣವಾಗಲಿದೆ.

DC vs KKR: ಸುನೀಲ್‌ ನರೇನ್‌ ಆಲ್‌ರೌಂಡ್‌ ಆಟದಿಂದ ಗೆದ್ದ ಕೋಲ್ಕತಾ ನೈಟ್‌ ರೈಡರ್ಸ್!‌

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಉಳಿದ ಪಂದ್ಯಗಳು

ಮೇ 5 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ

ಮೇ 8 ರಂದು ಪಂಜಾಬ್ ಕಿಂಗ್ಸ್ ವಿರುದ್ಧ

ಮೇ 11 ರಂದು ಗುಜರಾತ್ ಟೈಟನ್ಸ್ ವಿರುದ್ಧ

ಮೇ 15 ರಂದು ಮುಂಬೈ ಇಂಡಿಯನ್ಸ್ ವಿರುದ್ಧ

IPL 2025 Points Table

ನಾಲ್ಕನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌

ಕೆಕೆಆರ್‌ ಎದುರು ಸೋಲು ಅನುಭವಿಸಿದ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್‌ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ನಾಲ್ಕರಲ್ಲಿ ಇದೆ. ಅಗ್ರ ಸ್ಥಾನದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಇದ್ದರೆ, ಎರಡನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಮೂರನೇ ಸ್ಥಾನದಲ್ಲಿ ಗುಜರಾತ್ ಟೈಟನ್ಸ್ ಇದೆ.

ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್ ಟೈಟನ್ಸ್‌ ತಂಡಗಳು ಕೂಡ ಡೆಲ್ಲಿ ಕ್ಯಾಪಿಟಲ್ಸ್‌ ರೀತಿ ಸಮಾನ ಅಂಕಗಳನ್ನು ಹೊಂದಿವೆ. ಅಂದರೆ ಈ ಮೂರೂ ತಂಡಗಳು ತಲಾ 12 ಅಂಕಗಳನ್ನು ಹೊಂದಿವೆ. ಆದರೆ, ರನ್‌ರೇಟ್‌ ವಿಷಯದಲ್ಲಿ ಮುಂಬೈ (+0.889) ಹಾಗೂ ಗುಜರಾತ್‌ಗಿಂತ ( +0.748) ಕಡಿಮೆ ಹೊಂದಿವೆ. ಈ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್‌ (+0.362) ನಾಲ್ಕನೇ ಸ್ಥಾನದಲ್ಲಿದೆ. ಆದಾಗ್ಯೂ, ಪ್ಲೇಆಫ್ಸ್‌ ರೇಸ್‌ನಲ್ಲಿರುವ ಪಂಜಾಬ್ ಕಿಂಗ್ಸ್, ಲಖನೌ ಸೂಪರ್ ಜಯಂಟ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಗಳಿಗಿಂತಲೂ ಡೆಲ್ಲಿಯ ರನ್‌ರೇಟ್‌ ಉತ್ತಮವಾಗಿದೆ.

IPL 2025: ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಭವಿಷ್ಯ ನುಡಿದ ವಿಕ್ರಮ್‌ ರಾಥೋಡ್‌!

ಡೆಲ್ಲಿ ಕ್ಯಾಪಿಟಲ್ಸ್ ಸತತ ನಾಲ್ಕು ಗೆಲುವುಗಳೊಂದಿಗೆ ಲೀಗ್ ಅನ್ನು ಪ್ರಾರಂಭಿಸಿತ್ತು. ಆದರೆ ತದ ನಂತರ ಡೆಲ್ಲಿ ಸಂಕಷ್ಟಕ್ಕೆ ಸಿಲುಕಿತು. ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ನಂತರ, ಡೆಲ್ಲಿ ಸೂಪರ್ ಓವರ್‌ನಲ್ಲಿ ರಾಜಸ್ಥಾನ ವಿರುದ್ಧ ಗೆದ್ದಿತು. ಕಳೆದ ನಾಲ್ಕು ಪಂದ್ಯಗಳಲ್ಲಿ ಡೆಲ್ಲಿ ಮೂರರಲ್ಲಿ ಸೋತಿದೆ. ಇದೀಗ ಮುಂದಿನ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಸೋತರೆ ಡೆಲ್ಲಿಗೆ ಪ್ಲೇಆಫ್ ತಲುಪುವುದು ಕಷ್ಟವಾಗುತ್ತದೆ.