DC vs PBKS: ಪಂದ್ಯದ ಮೊದಲ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿ ವಿಶಷ ದಾಖಲೆ ಬರೆದ ಪ್ರಿಯಾಂಶ್ ಆರ್ಯ!
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದ ಮೊದಲ ಎಸೆತದಲ್ಲಿಯೇ ಪ್ರಿಯಾಂಶ್ ಆರ್ಯ ಸಿಕ್ಸರ್ ಬಾರಿಸುವ ಮೂಲಕ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ವಿವಿಧ ಪಂದ್ಯಗಳ ಮೊಟ್ಟ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಪಂದ್ಯದ ಮೊದಲ ಎಸೆತದಲ್ಲಿಯೇ ಸಿಕ್ಸ್ ಬಾರಿಸಿ ದಾಖಲೆ ಬರೆದ ಪ್ರಿಯಾಂಶ್ ಆರ್ಯ. -
ಧರ್ಮಶಾಲಾ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ 2026ರ ಇಂಡಿಯನ್ ಪ್ರೀಮಿಯರ್ ಲೀಗ್(IPL 2026) ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಆರಂಭಿಕ ಪ್ರಿಯಾಂಶ್ ಆರ್ಯ (Priyansh Arya) ಅರ್ಧಶತಕವನ್ನು ಬಾರಿಸಿದರು. ಅಲ್ಲದೆ ಅವರು ಈ ಪಂದ್ಯದ ಮೊಟ್ಟ ಮೊದಲ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ವಿಶ್ವದ ಶ್ರೇಷ್ಠ ಮಾರಕ ವೇಗಿ ಮಿಚೆಲ್ ಸ್ಟಾರ್ಕ್‌ಗೆ (Mitchell Starc) ಸಿಕ್ಸರ್ ಬಾರಿಸಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತು. ಈ ಓವರ್‌ನಲ್ಲಿ ಪ್ರಿಯಾಂಶ್ ಹಾಗೂ ಪ್ರಭ್‌ಸಿಮ್ರನ್ 22 ರನ್‌ಗಳನ್ನು ಚಚ್ಚಿದರು.
ಟೂರ್ನಿಯ 55ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ, ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಪರಿಣಾಮವಾಗಿ, ಪಂಜಾಬ್‌ನ ಆರಂಭಿಕರಾದ ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರನ್ ಸಿಂಗ್ ಇನಿಂಗ್ಸ್ ಆರಂಭಿಸಲು ಮುಂದಾದರು. ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಇತಿಹಾಸ ಸೃಷ್ಟಿಸಿದರು.
ʻಕೃಣಾಲ್ ಪಾಂಡ್ಯ ಸಾಯಲಿ ಬಿಡಿʼ ಎಂದಿದ್ದ ಎಸ್ ಬದ್ರಿನಾಥ್ ಕಾಮೆಂಟರಿ ಪ್ಯಾನೆಲ್‌ನಿಂದ ವಜಾ?
ಇತಿಹಾಸ ಸೃಷ್ಟಿಸಿದ ಪ್ರಿಯಾಂಶ್ ಆರ್ಯ
ಪಂಜಾಬ್ ಕಿಂಗ್ಸ್ ಆರಂಭಿಕ ಪ್ರಿಯಾಂಶ್ ಆರ್ಯ ಐಪಿಎಲ್ ಟೂರ್ನಿಯಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗಮನಾರ್ಹವಾಗಿ, ಅವರು ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದರು. ಇದು ಅವರು ಐಪಿಎಲ್ ಟೂರ್ನಿಯಲ್ಲಿ ಈ ಸಾಧನೆಯನ್ನು ಮಾಡಿದ ಎರಡನೇ ಬಾರಿಯಾಗಿದೆ. ಈ ಸಾಧನೆಯೊಂದಿಗೆ, ಅವರು ಐಪಿಎಲ್ ಇತಿಹಾಸದಲ್ಲಿ ಎರಡು ವಿಭಿನ್ನ ಪಂದ್ಯಗಳ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. 2025ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಕೇವಲ 33 ಎಸೆತಗಳಲ್ಲಿ 56 ರನ್ ಗಳಿಸಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಅವರ ಇನಿಂಗ್ಸ್‌ನಲ್ಲಿ 2 ಬೌಂಡರಿ ಮತ್ತು 6 ಸಿಕ್ಸರ್‌ಗಳು ಸೇರಿದ್ದವು. ಈ ಋತುವಿನಲ್ಲಿ ಆರ್ಯ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಅವರು ಇಲ್ಲಿಯವರೆಗೂ ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ.
Welcoming the pacers, Priyansh Arya style 😎
— IndianPremierLeague (@IPL) May 11, 2026
Towering sixes to get #PBKS going 📈
Updates ▶️ https://t.co/wHhflKIvCR#TATAIPL | #KhelBindaas | #PBKSvDC pic.twitter.com/xCKBmyy9Y5
ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 210 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ಪ್ರಿಯಾಂಶ್ ಆರ್ಯ ಜೊತೆಗೆ, ನಾಯಕ ಶ್ರೇಯಸ್ ಅಯ್ಯರ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು, 36 ಎಸೆತಗಳಲ್ಲಿ ಅಜೇಯ 59 ರನ್ ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಕೂಪರ್ ಕನೋಲಿ 27 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 38 ರನ್ ಗಳಿಸಿದರು.
ಕೊನೆಗೆ ಸೂರ್ಯಾಂಶ್ ಶೆಡ್ಜ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ಅಜೇಯ 21 ರನ್ ಗಳಿಸಿದರು.