ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ರಾಜಸ್ಥಾನ್‌ ವಿರುದ್ಧ ಸ್ಲೋ ಬ್ಯಾಟ್‌ ಮಾಡಿದ ಕೆಎಲ್‌ ರಾಹುಲ್‌ ವಿರುದ್ಧ ಗುಡುಗಿದ ಚೇತೇಶ್ವರ್‌ ಪುಜಾರ!

Cheteshwar Pujara on KL Rahul's Slow batting: ರಾಜಸ್ಥಾನ್‌ ರಾಯಲ್ಸ್‌ ವಿರುದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಬ್ಯಾಟ್ಸ್‌ಮನ್‌ ಕೆಎಲ್‌ ರಾಹುಲ್‌ ಅವರನ್ನು ಭಾರತದ ಹಿರಿಯ ಬ್ಯಾಟ್ಸ್‌ಮನ್‌ ಚೇತೇಶ್ವರ್‌ ಪೂಜಾರ ಟೀಕಿಸಿದ್ದಾರೆ. ಇವರು ಇನ್ನಷ್ಟು ಆಕ್ರಮಣಕಾರಿಯಾಗಿ ಬ್ಯಾಟ್‌ ಮಾಡಬೇಕಾಗಿತ್ತು ಎಂದು ಅವರು ಹೇಳಿದ್ದಾರೆ.

ಸ್ಲೋ ಬ್ಯಾಟ್‌ ಮಾಡಿದ ಕೆಎಲ್‌ ರಾಹುಲ್‌ ವಿರುದ್ಧ ಚೇತೇಶ್ವರ್‌ ಪೂಜಾರ ಕಿಡಿ!

ಕೆಎಲ್‌ ರಾಹುಲ್‌ ಸ್ಲೋ ಬ್ಯಾಟಿಂಗ್‌ ಬಗ್ಗೆ ಚೇತೇಶ್ವರ್‌ ಪೂಜಾರ ಬೇಸರ.

Profile Ramesh Kote Apr 17, 2025 6:58 PM

ನವದೆಹಲಿ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್‌ ಪ್ರದರ್ಶನ ತೋರಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ (KL Rahul) ಅವರನ್ನು ಭಾರತದ ಹಿರಿಯ ಬ್ಯಾಟ್ಸ್‌ಮನ್‌ ಚೇತೇಶ್ವರ್‌ ಪೂಜಾರ (Cheteshwar Pujara) ಟೀಕಿಸಿದ್ದಾರೆ. ಕೆಎಲ್‌ ರಾಹುಲ್‌ ಅವರ ಬ್ಯಾಟಿಂಗ್‌ ಕ್ರಮಾಂಕ ಬದಲಾಗಿದೆ, ಹಾಗಾಗಿ ಅವರು ಇನ್ನಷ್ಟು ವೇಗವಾಗಿ ಬ್ಯಾಟ್‌ ಬೀಸಬೇಕೆಂದು ಪೂಜಾರ ಆಗ್ರಹಿಸಿದ್ದಾರೆ. ಅಂದ ಹಾಗೆ ನಿಗದಿತ 20 ಓವರ್‌ಗಳಲ್ಲಿ ಪಂದ್ಯ ಟೈ ಆದ ಬಳಿಕ ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸಿತ್ತು. ಆ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದೆ.

ಪ್ರಸ್ತುತ ನಡೆಯುತ್ತಿರುವ 2025ರ ಐಪಿಎಲ್‌ ಟೂರ್ನಿಯಲ್ಲಿ ಕೆಎಲ್‌ ರಾಹುಲ್‌ ತಮ್ಮ ಬ್ಯಾಟಿಂಗ್‌ನಲ್ಲಿ ಏರಿತಗಳನ್ನು ಕಂಡಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 77 ರನ್‌ ಗಳಿಸಿದ್ದ ಬಳಿಕ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದ ಅಜೇಯ 93 ರನ್‌ಗಳನ್ನು ಸಿಡಿಸಿದ್ದರು. ಆದರೆ, ಇದಾದ ಬಳಿಕ ಮುಂಬೈ ಇಂಡಿಯನ್ಸ್‌ ವಿರುದ್ಧ 15 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ್ದರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ವಿರುದ್ದದ ಪಂದ್ಯದಲ್ಲಿಯೂ ಅವರು ಬ್ಯಾಟಿಂಗ್‌ನಲ್ಲಿ ನಿಧಾನಗತಿಯಲ್ಲಿ ಬ್ಯಾಟ್‌ ಬೀಸಿದ್ದರು. ಬುಧವಾರ ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದಿದ್ದ ರಾಜಸ್ಥಾನ್‌ ರಾಯಲ್ಸ್‌ ವಿರುದ್ದದ ಪಂದ್ಯದಲ್ಲಿಯೂ ನಿಧಾನಗತಿಯಲ್ಲಿ ಬ್ಯಾಟ್‌ ಮಾಡಿದ್ದ ಕೆಎಲ್‌ ರಾಹುಲ್‌ 32 ಎಸೆತಗಳಲ್ಲಿ 38 ರನ್‌ ಗಳನ್ನು ಗಳಿಸಿದ್ದರು. ನಂತರ ಜೋಫ್ರಾ ಆರ್ಚರ್‌ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದ್ದರು.

RR vs DC: ರಾಜಸ್ಥಾನ್‌ಗೆ ಭಾರಿ ನಿರಾಶೆ, ಸೂಪರ್‌ ಓವರ್‌ ಥ್ರಿಲ್ಲರ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌!

188 ರನ್‌ಗಳನ್ನು ಕಲೆ ಹಾಕಿದ್ದ ಡೆಲ್ಲಿ ಕ್ಯಾಪಿಟಲ್ಸ್‌

ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಬಹುಬೇಗ ಜೇಕ್‌ ಮೆಗರ್ಕ್‌, ಕರುಣ್‌ ನಾಯರ್‌ ಅವರ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ನಂತರ ಅಭಿಷೇಕ್‌ ಪೊರೆಲ್‌ ಹಾಗೂ ಕರುಣ್‌ ನಾಯುರ್‌ ಅವರು ಮೂರನೇ ವಿಕೆಟ್‌ಗೆ 53 ರನ್‌ಗಳನ್ನು ಕಲೆ ಹಾಕಿದ್ದರು. ನಂತರ ಬಂದಿದ್ದ ನಾಯಕ ಅಕ್ಷರ್‌ ಪಟೇಲ್‌ 14 ಎಸೆತಗಳಲ್ಲಿ 34 ರನ್‌ ಸಿಡಿಸಿದ್ದರು ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ 18 ಎಸೆತಗಳಲ್ಲಿ 34 ರನ್‌ಗಳನ್ನು ಬಾರಿಸಿದ್ದರು. ಆ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ತನ್ನ ಪಾಲಿನ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 188 ರನ್‌ಗಳನ್ನು ಕಲೆ ಹಾಕಿತ್ತು.

ಭಾರತದ ಹಿರಿಯ ಬ್ಯಾಟ್ಸ್‌ಮನ್‌ ಚೇತೇಶ್ವರ್‌ ಪೂಜಾರ, ಕೆಎಲ್‌ ರಾಹುಲ್‌ ಅವರ ನಿಧಾನಗತಿಯ ಬ್ಯಾಟಿಂಗ್‌ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ವಿಕೆಟ್‌ ಅನ್ನು ಉಳಿಸಿಕೊಳ್ಳುವ ಸಲುವಾಗಿ ಬ್ಯಾಟ್‌ ಮಾಡುತ್ತಿದ್ದರು ಎಂದು ದೂರಿದ್ದಾರೆ. ಕಂಡೀಷನ್ಸ್‌ಗೆ ಹೊಂದಿಕೊಳ್ಳಲು ಸಾಕಷ್ಟು ಸಿಕ್ಕಿತ್ತು ಹಾಗಾಗಿ ಅವರು ಆಕ್ರಮಣಕಾರಿಯಾಗಿ ಬ್ಯಾಟ್‌ ಬೀಸಬೇಕಾಗಿತ್ತು ಎಂದು ಹೇಳಿದ್ದಾರೆ.

IPL 2025: ಸೂಪರ್‌ ಓವರ್‌ ಗೆಲುವಿನೊಂದಿಗೆ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್‌

ಕೆಎಲ್‌ ರಾಹುಲ್‌ ಆಕ್ರಮಣಕಾರಿಯಾಗಿ ಆಡಬೇಕಾಗಿತ್ತು: ಪೂಜಾರ

"ಕೆಎಲ್‌ ರಾಹುಲ್‌ ಹಿರಿಯ ಆಟಗಾರ. ಬಹುಶಃ ಅವರು 15-20 ಎಸೆತಗಳ ಬಳಿಕ ವೇಗವಾಗಿ ಬ್ಯಾಟ್‌ ಮಾಡಬೇಕೆಂದು ಬಯಿಸಿದ್ದರು. ಆದರೆ, ಇದೇ ಸಮಯದಲ್ಲಿ ಅವರು ಇನ್ನಷ್ಟು ಆಕ್ರಮಣಕಾರಿಯಾಗಿ ಬ್ಯಾಟ್‌ ಬೀಸಬೇಕಾಗಿತ್ತು, ಏಕೆಂದರೆ ಅವರು ಸೆಟ್‌ ಆಗಿದ್ದರು. ಪಿಚ್‌ ಅನ್ನು ಅರ್ಥ ಮಾಡಿಕೊಳ್ಳಲು ಅವರಿಗೆ ಸಿಕ್ಕ ಸಮಯ ಸಾಕಾಗಿತ್ತು," ಎಂದು ಚೇತೇಶ್ವರ್‌ ಪೂಜಾರ ತಿಳಿಸಿದ್ದಾರೆ.

"ಅವರ ಬ್ಯಾಟಿಂಗ್‌ ಕ್ರಮಾಂಕ ಕೂಡ ಸ್ವಲ್ಪ ಬದಲಾಗಿದೆ. ಹಾಗಾಗಿ ಅವರು ಅದನ್ನು ಲೆಕ್ಕಾಚಾರ ಹಾಕಲು ಪ್ರಯತ್ನಿಸುತ್ತಿದ್ದಾರೆಂಬುದು ನನ್ನ ಅರ್ಥ. ಅವರು ಸಾಮಾನ್ಯವಾಗಿ ಪವರ್‌ಪ್ಲೇನಲ್ಲಿ ಸ್ಪೋಟಕ ಬ್ಯಾಟ್‌ ಮಾಡುತ್ತಾರೆ ಆದರೆ ಇದಾದ ಬಳಿಕ ಅವರು ಇನ್ನಷ್ಟು ಆಕ್ರಮಣಕಾರಿಯಾಗಿ ಬ್ಯಾಟ್‌ ಮಾಡಬೇಕಾಗುತ್ತದೆ. ಅವರ ಆಟವನ್ನು ನೋಡುತ್ತಿದ್ದಾಗ, ಅವರು ತಮ್ಮ ವಿಕೆಟ್‌ ಅನ್ನು ಉಳಿಸಿಕೊಳ್ಳಲು ಆಡುತ್ತಿದ್ದಾರೆಂದು ಅನಿಸುತ್ತಿತ್ತು," ಎಂದು ಟೆಸ್ಟ್‌ ವಿಶೇಷ ಬ್ಯಾಟ್ಸ್‌ಮನ್‌ ದೂರಿದ್ದಾರೆ.